ಬೆಂ.ಗ್ರಾ.ಜಿಲ್ಲೆ: ಮಣ್ಣು ಪರೀಕ್ಷಾ ಪ್ರಯೋಗಾಲಯ ಸ್ಥಾಪಿಸಲು ಅರ್ಜಿ ಆಹ್ವಾನ

ದೊಡ್ಡಬಳ್ಳಾಪುರ: ಕೃಷಿ ಇಲಾಖೆ ವತಿಯಿಂದ ರಾಷ್ಟ್ರೀಯ ಸುಸ್ಥಿರ ಕೃಷಿ ಅಭಿಯಾನ-ಮಣ್ಣು ಆರೋಗ್ಯ ನಿರ್ವಹಣೆ ಯೋಜನೆಯಡಿ ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ 2020-21 ನೇ ಸಾಲಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಎರಡು ಮಣ್ಣು ಪರೀಕ್ಷೆ ಘಟಕಗಳನ್ನು ಸ್ಥಾಪಿಸಲು ಅವಕಾಶವಿದ್ದು, ಗ್ರಾಮ ಮಟ್ಟದಲ್ಲಿ ಮಣ್ಣು ಪರೀಕ್ಷಾ ಪ್ರಯೋಗಾಲಯವನ್ನು ಸ್ಥಾಪಿಸಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಮಣ್ಣು ಸಸ್ಯಗಳಿಗೆ ಪೋಷಕಾಂಶಗಳನ್ನು ಒದಗಿಸುವ ಜೀವಂತ ಸಾಧನ. ಮಣ್ಣು ವಿವಿಧ ಲವಣಾಂಶ, ಸಾವಯವ ವಸ್ತುಗಳು, ನೀರು, ಗಾಳಿಯನ್ನು ವಿವಿಧ ಪ್ರಮಾಣಗಳಲ್ಲಿ ಹೊಂದಿದ್ದು, ಸಸ್ಯಗಳ ಬೆಳವಣಿಗೆ ಸಹಕಾರಿಯಾಗಿರುತ್ತದೆ. ರಸಗೊಬ್ಬರ ಬಳಕೆ ಪದ್ದತಿಯಲ್ಲಿನ ನ್ಯೂನತೆಗಳನ್ನು ಸರಿಪಡಿಸಲು ಹಾಗೂ ಸೂಕ್ತ ಬೆಳೆಯನ್ನು ಆಯ್ಕೆ ಮಾಡಿಕೊಳ್ಳಲು ವೈಜ್ಞಾನಿಕ ರೀತಿಯಲ್ಲಿ ಬೆಳೆಯನ್ನು ಬೆಳೆದು ಹೆಚ್ಚಿನ ಇಳುವರಿ ಪಡೆದು, ಕಡಿಮೆ ಖರ್ಚಿನಲ್ಲಿ ಹೆಚ್ಚಿನ ಆದಾಯ ಪಡೆಯಲು ಪ್ರತಿ 3 ವರ್ಷಗಳಿಗೊಮ್ಮೆ ದೇಶದ ಎಲ್ಲಾ ರೈತರು ಮಣ್ಣು ಪರೀಕ್ಷೆ ಮಾಡಿಸುವುದು ಅವಶ್ಯಕವಾಗಿರುತ್ತದೆ.

ಗ್ರಾಮೀಣ ಯುವಕರು, ಕೃಷಿ ಕ್ಲಿನಿಕ್ ಮತ್ತು ಕೃಷಿ ವ್ಯಾಪಾರ ಕೇಂದ್ರಗಳು (Agri Clinics & Agri Buisness Centres), ಕೃಷಿ ಉದ್ದಿಮೆದಾರರು, ಮಾಜಿ ಯೋಧರು, ಸ್ವಸಹಾಯ ಸಂಘಗಳು, ರೈತರ ಉತ್ಪಾದಕರ ಸಂಸ್ಥೆಗಳು (FPOs), ರೈತ ಉತ್ಪನ್ನ ಕಂಪನಿಗಳು, ರೈತರ ಜಂಟಿ ಜವಾಬ್ದಾರಿ ಗುಂಪುಗಳು (Farmer Joint Liability Groups), ರೈತರ ಸಹಕಾರ ಸಂಘಗಳು PACS, ಪರಿಕರಗಳ ರಿಟೇಲ್ ಔಟ್‍ಲೆಟ್‌ಗಳು, ಪರಿಕರಗಳ ರಿಟೇಲ್‍ದಾರರು ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಭರ್ತಿ ಮಾಡಿದ ಅರ್ಜಿಗಳನ್ನು ಸಹಾಯಕ ಕೃಷಿ ನಿರ್ದೇಶಕರ ಕಚೇರಿ, ಉಪ ಕೃಷಿ ನಿರ್ದೇಶಕರ ಕಚೇರಿ, ಬೀರಸಂದ್ರ, ದೇವನಹಳ್ಳಿ ತಾಲ್ಲೂಕು ಅಥವಾ ಜಂಟಿ ಕೃಷಿ ನಿರ್ದೇಶಕರ ಕಚೇರಿ ಬನಶಂಕರಿ, ಬೆಂಗಳೂರು ಇಲ್ಲಿಗೆ ಸಲ್ಲಿಸುವುದು. ಅರ್ಜಿ ಸಲ್ಲಿಸಲು 2020ರ ಅಕ್ಟೋಬರ್ 10 ಕೊನೆಯ ದಿನವಾಗಿದೆ.

ಅರ್ಜಿದಾರರು ಕನಿಷ್ಠ ಪಕ್ಷ ಮೆಟ್ರಿಕ್‌ನಲ್ಲಿ 2ನೇ ದರ್ಜೆಯಲ್ಲಿ ಉತ್ತೀರ್ಣರಾಗಿರಬೇಕು. ವಿಜ್ಞಾನ ಮತ್ತು ಕಂಪ್ಯೂಟರ್ ಜ್ಞಾನ, PAN ಸಂಖ್ಯೆ ಮತ್ತು ಆಧಾರ್ ಸಂಖ್ಯೆಯ ದಾಖಲಾತಿಗಳನ್ನು ಹೊಂದಿರಬೇಕು, ಅರ್ಜಿದಾರರು/ಫಲಾನುಭವಿಗಳು ಗ್ರಾಮ ಮಟ್ಟದಲ್ಲಿ ಮಣ್ಣು ಪರೀಕ್ಷಾ ಘಟಕಗಳನ್ನು ಸ್ಥಾಪಿಸಲು ಸ್ವಂತ ಕಟ್ಟಡ ಅಥವಾ ಬಾಡಿಗೆ ಕಟ್ಟಡವನ್ನು ಹೊಂದಿರಬೇಕು. ಕನಿಷ್ಠ 4 ವರ್ಷಗಳ ಅವಧಿಗೆ ಬಾಡಿಗೆ ಕರಾರು ಪತ್ರವನ್ನು ಹೊಂದಿರಬೇಕು, ಗ್ರಾಮ ಮಟ್ಟದಲ್ಲಿ ಮಣ್ಣು ಪರೀಕ್ಷಾ ಘಟಕಗಳನ್ನು ಸ್ಥಾಪಿಸಲು ಯೋಜನಾ ವೆಚ್ಚ ರೂ.5.00 ಲಕ್ಷಗಳು. ಫಲಾನುಭವಿಗಳಿಗೆ ಯೋಜನಾ ವೆಚ್ಚದ ಶೇ 75.00 ರಷ್ಟು ಆರ್ಥಿಕ ಸಹಾಯವನ್ನು ಸಬ್ಸಿಡಿಯನ್ನಾಗಿ ಘಟಕ ಅನುಷ್ಠಾನ ಮಾಡಿದ ನಂತರ ಸಂಬಂಧಪಟ್ಟ ಅಧಿಕಾರಿಗಳಿಂದ ಪರಿಶೀಲಿಸಿದ ನಂತರ ನೀಡಲಾಗುವುದು. 

ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕಿನ ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರಗಳು, ತಾಲ್ಲೂಕು ಸಹಾಯಕ ಕೃಷಿ ನಿದೇಶಕರ ಕಚೇರಿ, ಉಪ ಕೃಷಿ ನಿರ್ದೇಶಕರ ಕಚೇರಿ ಬೀರಸಂದ್ರ, ದೇವನಹಳ್ಳಿ ಅಥವಾ ಬೆಂಗಳೂರು ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8 ರಂದು ಜೆಡಿಎಸ್ (JDS) ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ದೊಡ್ಡಬಳ್ಳಾಪುರಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ, ನಾಳೆ (ಏ.28) ರಂದು ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ ಎಂದು ಜೆಡಿಎಸ್ ದೊಡ್ಡಬಳ್ಳಾಪುರ

[ccc_my_favorite_select_button post_id="121433"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ಗ್ರಾಮದ ಲಾಡ್ಜ್ ಒಂದರ ಮೇಲೆ ಪೊಲೀಸರು ದಾಳಿ (Police Raid) ನಡೆಸಿದ್ದು, ವೇಶ್ಯಾವಾಟಿಕೆ (Prostitution) ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಿದ್ದಾರೆ. ದಾಳಿಯ ವೇಳೆ ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ.

[ccc_my_favorite_select_button post_id="121407"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಹೆಲ್ಮೆಟ್ ಕಡ್ಡಾಯ ಜಾರಿ ಮಾಡಿ, ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್

[ccc_my_favorite_select_button post_id="121414"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]