ದೊಡ್ಡಬಳ್ಳಾಪುರ: ಬೆಳೆ ಮಾಹಿತಿ ಕುರಿತು ರೈತರಿಂದ ಆಕ್ಷೇಪಣೆ ಆಹ್ವಾನ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 2020ರ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಯನ್ನು ಜಿ.ಪಿ.ಎಸ್. ಆಧಾರಿತ ಮೊಬೈಲ್ ಆ್ಯಪ್ ಬಳಸಿ ನಡೆಸುತ್ತಿದ್ದು, ಬೆಳೆಗಳ ಫೋಟೋ ಅಪ್‌ಲೋಡ್ ಮಾಡಿರುವುದರಲ್ಲಿ ಯಾವುದೇ ಲೋಪದೋಷಗಳು ಕಂಡು ಬಂದಲ್ಲಿ,‌ ರೈತರು “ಬೆಳೆದರ್ಶಕ್ 2020” ಆ್ಯಪ್‌ನಲ್ಲಿ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ. 

ಬೆಳೆ ಸಮೀಕ್ಷೆ ಮೂಲಕ ಸಂಗ್ರಹಿಸಿದ ಬೆಳೆ ಮಾಹಿತಿಯ, ಮೇಲ್ವಿಚಾರಕರ ಮೂಲಕ ಅನುಮೋದನೆಯ ನಂತರ, ಈ ಮಾಹಿತಿಯನ್ನು ಬೆಂಬಲ ಬೆಲೆಯಲ್ಲಿ ಕೃಷಿ ಉತ್ಪನ್ನಗಳ ಖರೀದಿಗಾಗಿ, ಬೆಳೆ ವಿಮೆ ಯೋಜನೆಗಾಗಿ, ಬೆಳೆ ನಷ್ಟ ಪರಿಹಾರ ನೀಡುವ ಸಮಯದಲ್ಲಿ ಉಪಯೋಗಿಸಲಾಗುತ್ತದೆ. ಆದ್ದರಿಂದ ರೈತರು ತಮ್ಮ ಜಮೀನುಗಳಲ್ಲಿ ಬೆಳೆದಿರುವ ಬೆಳೆಗಳನ್ನು ಸರಿಯಾಗಿ

ನಮೂದಿಸಲಾಗಿದೆಯೇ ಎಂಬುದನ್ನು “ಬೆಳೆದರ್ಶಕ 2020″ ಎಂಬ ಆ್ಯಪ್‌ನ್ನು ಪ್ಲೇಸ್ಟೋರ್‌ನಲ್ಲಿ ಡೌನ್‌ಲೋಡ್ (http://play.google.com/store/apps/details?id=com.crop.offcsreportskharif) ಮಾಡಿಕೊಂಡು ನೋಡಬಹುದಾಗಿರುತ್ತದೆ. ಬೆಳೆಗಳ ಫೋಟೋ ಅಪ್‌ಲೋಡ್ ಮಾಡಿರುವುದರಲ್ಲಿ ಯಾವುದೇ ಲೋಪದೋಷಗಳಿದ್ದಲ್ಲಿ ಆಕ್ಷೇಪಣೆಗಳನ್ನು ಸಲ್ಲಿಸಲು 2020ರ ಅಕ್ಟೋಬರ್ 15 ಕೊನೆಯ ದಿನವಾಗಿರುತ್ತದೆ.

ಬೆಳೆ ದರ್ಶಕ್ ಆ್ಯಪ್ ನ ವೈಶಿಷ್ಟ್ಯತೆಗಳು: ಬೆಳೆ ದರ್ಶಕ್  ಆ್ಯಪ್‌ನಲ್ಲಿ ನಿಮ್ಮ ಜಮೀನಿನಲ್ಲಿ ಬೆಳೆ ಸಮೀಕ್ಷೆ ಪ್ರಕಾರ ದಾಖಲಾಗಿರುವ ಬೆಳೆ ವಿವರಗಳು ಮತ್ತು ವಿಸ್ತೀರ್ಣದ ಮಾಹಿತಿ ಪಡೆಯಬಹುದು, ಬೆಳೆ ಸಮೀಕ್ಷೆ ಸಮಯದಲ್ಲಿ ನಿಮ್ಮ ಜಮೀನಿನಲ್ಲಿ ತೆಗೆಯಲಾದ ಜಿ.ಪಿ.ಎಸ್.(GPS) ಆಧಾರಿತ ಛಾಯಾ ಚಿತ್ರಗಳನ್ನು ವೀಕ್ಷಿಸಬಹುದು,‌ ಜಮೀನಿನ ಬೆಳೆ ಸಮೀಕ್ಷೆ ಮಾಡಿದವರ ಹೆಸರು ಮತ್ತು ಮೊಬೈಲ್ ಸಂಖ್ಯೆಯ ವಿವರ ಪಡೆಯಬಹುದು ಅಲ್ಲದೆ ನೀವು ಬೆಳೆ ಸಮೀಕ್ಷೆ ಪ್ರಕಾರ ದಾಖಲಿಸಿದ ಮಾಹಿತಿಯನ್ನು ಮೇಲ್ವಿಚಾರಣೆ ಮಾಡುವ ಅಧಿಕಾರಿಗಳು

ಅಂಗೀಕರಿಸಿದ್ದಾರೋ ಇಲ್ಲವೋ ಎಂದು ಷರಾ ಕಾಲಂನಲ್ಲಿ ತಿಳಿಯಬಹುದಾಗಿದೆ, ಒಂದು ವೇಳೆ  ಬೆಳೆ ಸಮೀಕ್ಷೆ ವಿವರ ತಪ್ಪಾಗಿ ದಾಖಲಾಗಿದ್ದಲ್ಲಿ ಆಕ್ಷೇಪಣೆ ಸಲ್ಲಿಸಬಹುದು ಹಾಗೂ ಮೇಲ್ವಿಚಾರಣೆ ಮಾಡುವ ಸರ್ಕಾರಿ ಅಧಿಕಾರಿಗಳು ಆಕ್ಷೇಪಣೆ ಕುರಿತು ಏನು ಕ್ರಮ ಕೈಗೊಂಡಿದ್ದಾರೆ ಎಂದು ತಿಳಿಯಬಹುದಾಗಿದೆ.

ಈ ರೀತಿಯಾಗಿ ದಾಖಲಾಗಿರುವ ಎಲ್ಲಾ ಆಕ್ಷೇಪಣೆಗಳನ್ನು ಸಂಬಂಧಪಟ್ಟ ಮೇಲ್ವಿಚಾರಕರಿಗೆ ತಂತ್ರಾಂಶದಲ್ಲಿ ಗುರುತಿಸಲಾಗುತ್ತದೆ, ಮೇಲ್ವಿಚಾರಕರು ಆಕ್ಷೇಪಣೆಗಳನ್ನು ಪರಿಶೀಲಿಸಿ, ಅವುಗಳನ್ನು ತುರ್ತಾಗಿ ಇತ್ಯರ್ಥಪಡಿಸುವರು. ಮೇಲ್ವಿಚಾರಕರು ಸ್ವೀಕೃತವಾಗಿರುವ ಪ್ರತಿಯೊಂದು ಆಕ್ಷೇಪಣೆಯನ್ನು ಕೂಲಂಕುಶವಾಗಿ ಪರಿಶೀಲಿಸಿ, ಈಗಾಗಲೇ ಬೆಳೆ ಸಮೀಕ್ಷೆ ದತ್ತಾಂಶದಲ್ಲಿ ಲಭ್ಯವಿರುವ ಬೆಳೆ ಮಾಹಿತಿಯೊಂದಿಗೆ ಹೋಲಿಸಿ ಆಕ್ಷೇಪಣೆಗಳನ್ನು ಇತ್ಯರ್ಥಪಡಿಸಲಾಗುವುದು. ಬೆಳೆ ಸಮೀಕ್ಷೆ ದತ್ತಾಂಶದಲ್ಲಿ ಲಭ್ಯವಿರುವ ಬೆಳೆ ಮಾಹಿತಿಯ ಆಧಾರದ ಮೇರೆಗೆ ಇತ್ಯರ್ಥಪಡಿಸಲು ಸಾಧ್ಯವಿಲ್ಲದ ಸನ್ನಿವೇಶದಲ್ಲಿ ಮೇಲ್ವಿಚಾರಕರೇ ಖುದ್ದಾಗಿ ಮಹಜರು ದಾಖಲಿಸುವ ಮೂಲಕ ಆಕ್ಷೇಪಣೆಗಳನ್ನು ಇತ್ಯರ್ಥಪಡಿಸಲಾಗುವುದು ಎಂದು ಕೃಷಿ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8 ರಂದು ಜೆಡಿಎಸ್ (JDS) ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ದೊಡ್ಡಬಳ್ಳಾಪುರಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ, ನಾಳೆ (ಏ.28) ರಂದು ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ ಎಂದು ಜೆಡಿಎಸ್ ದೊಡ್ಡಬಳ್ಳಾಪುರ

[ccc_my_favorite_select_button post_id="121433"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ಗ್ರಾಮದ ಲಾಡ್ಜ್ ಒಂದರ ಮೇಲೆ ಪೊಲೀಸರು ದಾಳಿ (Police Raid) ನಡೆಸಿದ್ದು, ವೇಶ್ಯಾವಾಟಿಕೆ (Prostitution) ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಿದ್ದಾರೆ. ದಾಳಿಯ ವೇಳೆ ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ.

[ccc_my_favorite_select_button post_id="121407"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಹೆಲ್ಮೆಟ್ ಕಡ್ಡಾಯ ಜಾರಿ ಮಾಡಿ, ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್

[ccc_my_favorite_select_button post_id="121414"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]