ದೊಡ್ಡಬಳ್ಳಾಪುರ: ಗ್ರಾಮಸಭೆ, ಜಮಾಬಂದಿ ಹಾಗೂ ಗ್ರಾಮಪಂಚಾಯಿತಿ ಮೂಲಕ ನಡೆಯುವ ಎಲ್ಲಾ ಕಾರ್ಯಕ್ರಮಗಳು ಯಶಸ್ವಿಯಾಗಬೇಕಾದರೆ ಗ್ರಾಮಸ್ಥರ ಸಹಕಾರ ಅತ್ಯಗತ್ಯ ಎಂದು ತಾಪ ಸದಸ್ಯ ಕಣಿವೇಪುರ ಸುನೀಲ್ ಕುಮಾರ್ ತಿಳಿಸಿದರು.
ತಾಲೂಕಿನ ಹೆಗ್ಗಡಿಹಳ್ಳಿ ಗ್ರಾಮಪಂಚಾಯಿತಿಯಲ್ಲಿ ಆಯೋಜಿಸಿದ್ದ ಜಮಾಬಂದಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮಸಭೆ, ಜಮಾಬಂದಿಗಳಲ್ಲಿನಡೆವ ಆರೋಗ್ಯಕರ ಚರ್ಚೆಯಿಂದ ಗ್ರಾಮಗಳ ಅಭಿವೃದ್ಧಿ ಸಾಧ್ಯ.ಈ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸುವಿಕೆ ಮುಖ್ಯ ಎಂದರು. ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅನುದಾನದಲ್ಲಿ ಹೆಚ್ಚಿನ ಪಾಲು ಕುಡಿಯುವ ನೀರು, ನೈರ್ಮಲ್ಯಕ್ಕೆ ಬಳಸಿಕೊಳ್ಳಬೇಕು. ಶಾಲೆಗಳಲ್ಲಿ ಬಿಸಿ ಊಟ ತಯಾರಿಕೆಗೆ ಹಾಗೂ ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಬೇಕು ಎಂದು ಹೇಳಿದರು.
ಕಾರ್ಯನಿರ್ವಾಹಕ ಅಧಿಕಾರಿ ಟಿ.ಮುರುಡಯ್ಯ ಮಾತನಾಡಿ, ಗ್ರಾಮ ಪಂಚಾಯಿತಿಗಳಿಗೆ ಸರ್ಕಾರದಿಂದ ಹೆಚ್ಚಿನ ಅಧಿಕಾರ ಹಾಗೂ ಅನುದಾನ ನೀಡುತ್ತಿದ್ದು, ಅದಕ್ಕೆ ತಕ್ಕಂತೆ ಗ್ರಾಮಗಳ ಅಭಿವದ್ಧಿಯಾಗಬೇಕಿದೆ ಎಂದರು.ಅಲ್ಲದೆ ಗ್ರಾಪಂವತಿಯಿಂದ ಕೈಗೊಳ್ಳಲಾಗಿರುವ ಕಾಮಗಾರಿಗಳ ಗುಣಮಟ್ಟದ ಕುರಿತು ಗ್ರಾಮಸ್ಥರ ಅಭಿಪ್ರಾಯ ಪಡೆದರು.
ಇದೇ ವೇಳೆ ಪೌಷ್ಟಿಕ ತೋಟ ಅಭಿಯಾನದ ಅಡಿಯಲ್ಲಿ 46 ಫಲಾನುಭವಿಗಳಿಗೆ ವಿವಿದ ರೀತಿಯ ಸಸಿಗಳನ್ನು ವಿತರಿಸಲಾಯಿತು.
ಸಭೆಯಲ್ಲಿ ಗ್ರಾಪಂ ಅಧ್ಯಕ್ಷೆ ನಾರಾಯಣಮ್ಮ, ಉಪಾಧ್ಯಕ್ಷ ಎಂ.ಜನಾರ್ಧನ್, ಪಿಡಿಒ ಶಿವರಾಜ್ ಮತ್ತಿತರಿದ್ದರು.

