ದೊಡ್ಡಬಳ್ಳಾಪುರ: ಎಪಿಎಂಸಿ ಕಾಯ್ದೆ, ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ, ವಿದ್ಯುತ್ ಖಾಸಗೀಕರಣ, ಕಾರ್ಮಿಕ ವಿರೋಧಿ ಕಾನೂನುಗಳನ್ನು ಜಾರಿಮಾಡಲು ಹೊರಟಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕ್ರಮ ಖಂಡಿಸಿ, ರಾಜ್ಯದಲ್ಲಿ ರೈತ ಸಂಘಟನೆಗಳು ಕರೆ ನೀಡಿರುವ ಹೆದ್ದಾರಿ ಬಂದ್‌ಗೆ ಬೆಂಬಲಿಸಿ, ಇಂದು ನಗರದ ಡಿ.ಕ್ರಾಸ್ ಡಾ.ರಾಜ್‌ಕುಮಾರ್ ವೃತ್ತದಲ್ಲಿ ಬೆಂಗಳೂರು ಹಿಂದೂಪುರ ಹೆದ್ದಾರಿ ತಡೆ ನಡೆಸುತ್ತಿದ್ದ ರೈತ ಸಂಘ ಹಾಗೂ ವಿವಿಧ ಸಂಘಟನೆಗಳ ಮುಖಂಡನ್ನು ಪೊಲೀಸರು ಬಂಧಿಸಿದರು.
ಇದಕ್ಕು ಮುನ್ನ ಸಂಘಟನೆಗಳ ಮುಖಂಡರು,ನಗರದ ಡಿ ಕ್ರಾಸ್ ವೃತ್ತದ ಮೂಲಕ ಹಾದು ಓಗುವ ಬೆಂಗಳೂರು – ಹಿಂದೂಪುರ ನಡುವಣ ರಾಜ್ಯ ಹೆದ್ದಾರಿಯನ್ನು ತಡೆದು ರಸ್ತೆ ತಡೆ ನಡೆಸಿ, ರಾಜ್ಯ ಸರ್ಕಾರದ ವಿರುದ್ದ ದಿಕ್ಕಾರ ಕೂಗಿದರು. ರಾಜ್ಯ ಸರ್ಕಾರ ಎಪಿಎಂಸಿ ಕಾಯ್ದೆ ಹಾಗೂ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದು ಸುಗ್ರೀವಾಜ್ಞೆ ಮೂಲಕ ಜಾರಿ ಮಾಡತೊಡಗಿದೆ. ಹಣವಂತರು ಹಾಗೂ ಕಾರ್ಪೋರೇಟ್‌ಗಳಿಗೆ ಅನುಕೂಲವಾಗಿ ರೈತರಿಗೆ ಮಾರಕವಾಗಲಿದೆ. ರೈತರು ತಮ್ಮ ಮಾರಾಟ ವ್ಯವಸ್ಥೆಯನ್ನು ಸುಗಮವಾಗಿ ರೂಪಿಸಿಕೊಂಡಿರುವ ಎಪಿಎಂಸಿ ವ್ಯವಸ್ಥೆಯು ಹೊಸ ಎಪಿಎಂಸಿ ಕಾಯ್ದೆಯಿಂದ ರೈತರ ಕೈತಪ್ಪಿ ಬಂಡವಾಳ ಶಾಹಿತಗಳ ಹಿಡತಕ್ಕೆ ಹೋಗುತ್ತದೆ ಅಂತೆಯೇ ಭೂಸುಧಾರಣಾ ಕಾಯ್ದೆ 2013 ಸಹ ರೈತರಿಂದ ಕಸಿದುಕೊಂಡು ಉಳ್ಳವರ ಪಾಲಾಗುತ್ತದೆ. ವಿದ್ಯುತ್ ಕ್ಷೇತ್ರ ಸಹ ಖಾಸಗೀರಣ ಮಾಡಲಾಗುತ್ತಿದ್ದು, ಕೇಂದ್ರ ಸರ್ಕಾರ ಇಡೀ ದೇಶವನ್ನೇ ಖಾಸಗೀಕರಣ ಮಾಡಲು ಹೊರಟು ಜರನ್ನು ಗುಲಾಮಗಿರಿಗೆ ತಳ್ಳುತ್ತಿದೆ. ಕಾರ್ಮಿಕ ಕಾಯ್ದೆ ಸಹ ಕಾರ್ಮಿಕರ ವಿರೋಧವಾಗಿದ್ದು, ಈ ಕಾಯ್ದೆಗಳು ಜಾರಿಯಾಗಲು ಬಿಡದೇ ನಮ್ಮ ಪ್ರತಿಭಟನೆಯನ್ನು ವ್ಯಕ್ತಪಡಿಸುವ ಅನಿವಾರ್ಯತೆ ಉಂಟಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಸ್ಥಳಕ್ಕೆ ಬಂದ ಪೊಲೀಸರು. ಟ್ರಾಫಿಕ್ ಸಮಸ್ಯೆ ಉಂಟಾಗುತ್ತಿರುವುದರಿಂದ ರಸ್ತೆ ತಡೆ ಕೈಬಿಡುವಂತೆ ಮನವಿ ಮಾಡಿದರು.ಇದಕ್ಕೆ ಒಪ್ಪದ ಕಾರಣ ರಸ್ತೆ ತಡೆ ನಡೆಸುತ್ತಿದ್ದ ಮುಖಂಡರನ್ನು ಬಂಧಿಸಿ ಕರೆದೊಯ್ದರು.

