ಚೆನೈ: ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರು ಶುಕ್ರವಾರ ಕೊನೆಯುಸಿರೆಳೆದಿದ್ದಾರೆ ಅವರ ಮಗ ಚರಣ್ ಅಧಿಕೃತವಾಗಿ ಹೇಳಿದರು.
ಕರೊನಾ ಸೋಂಕಿನಿಂದ ಒಳಗಾಗಿದ್ದ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರನ್ನು ಕಳೆದ ಆ.5ರಂದು ಚೆನ್ನೈನ ಎಂಜಿಎಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹಲವು ದಿನಗಳ ನಂತರ ಕರೊನಾ ನೆಗೆಟಿವ್ ಎಂದು ಬಂದಿತ್ತಾದರೂ ಆರೋಗ್ಯದ ಸ್ಥಿತಿಯಲ್ಲಿ ಏರುಪೇರಾಗಿದ್ದರಿಂದ ಚಿಕಿತ್ಸೆ ಮುಂದುವರಿಸಲಾಗಿತ್ತು.
ಗುರುವಾರ ಸಂಜೆ ಆಸ್ಪತ್ರೆ ಬಿಡುಗಡೆ ಮಾಡಿದ ಹೆಲ್ತ್ ಬುಲೆಟಿನ್ನಲ್ಲಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿತ್ತು. ಚಿಕಿತ್ಸೆ ಫಲಿಸದೆ ಶುಕ್ರವಾರ ಮಧ್ಯಾಹ್ನ 1.4 ಗಂಟೆಗೆ ಕೊನೆಯುಸಿರೆಳೆದ್ದಾರೆ ಎಸ್.ಪಿ.ಕುಟುಂಬದ ಮೂಲಗಳು ತಿಳಿಸಿವೆ ಎಂದು ರಾಷ್ಟ್ರೀಯ ಮಾಧ್ಯಮಗಳು ಸಹ ತಿಳಿಸಿವೆ.

