ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಸ್ವಚ್ಛತಾ ಸಾಪ್ತಾಹ ಹಮ್ಮಿಕೊಳ್ಳಲು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಸೂಚನೆ

ದೊಡ್ಡಬಳ್ಳಾಪುರ: ಪರಿಣಾಕಾರಿಯಾಗಿ ಸಾಂಕ್ರಾಮಿಕ ರೋಗಗಳನ್ನು ನಿಯಂತ್ರಿಸಲು ಜಿಲ್ಲೆಯಾದ್ಯಂತ ಸ್ವಚ್ಛತಾ ಸಪ್ತಾಹ ಹಮ್ಮಿಕೊಳ್ಳಲು ಆರೋಗ್ಯ ಇಲಾಖೆ ಅಧಿಕಾರಿಗಳು ಮುಂದಾಗಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಸೂಚಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಸಭಾಂಗಣದಲ್ಲಿಂದು ಮಲೇರಿಯಾ ವಿರೋಧಿ ಮತ್ತು ಡೆಂಗೀ ವಿರೋಧಿ ಮಾಸಾಚಾರಣೆ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿ ಪಿ. ಎನ್.ರವೀಂದ್ರ ಅವರು ಮಾತನಾಡಿದರು.

ಕಟ್ಟಡಗಳ ಸುತ್ತ ಮುತ್ತ ಹಾಗೂ ನಿರ್ಮಾಣಗೊಳ್ಳುತ್ತಿರುವ ಹೊಸ ಕಟ್ಟಡದ ಮೇಲ್ಭಾಗದಲ್ಲಿ ನೀರು ನಿಲ್ಲದಂತೆ ಮಾಲೀಕರಿಗೆ ಸೂಚನೆ ನೀಡಬೇಕು. ಸೊಳ್ಳೆಗಳು ಉತ್ಪತ್ತಿಯಾಗುವ ನೀರು ನಿಂತಿರುವ ಹೊಂಡಗಳಲ್ಲಿ ಹಾಗೂ ಗಣಿಗಾರಿಕೆ ಪ್ರದೇಶದ ಹೊಂಡಗಳಲ್ಲಿ ಗಪ್ಪಿ ಮೀನು ಬಿಡಲು ಕ್ರಮವಹಿಸಬೇಕು ಎಂದ ಅವರು ಹೊಸಕೋಟೆ ತಾಲ್ಲೂಕು ಮತ್ತು ನೆಲಮಂಗಲ ತಾಲ್ಲೂಕು ಸೇರಿದಂತೆ ನಗರ ಪ್ರದೇಶದ ಹೊರ ಭಾಗದಲ್ಲಿ ಕಸದ  ತುಂಬಿರುವುದು ಕಂಡು ಬಂದಿದ್ದು,  ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮ ಕೈಗೊಂಡು ಸ್ವಚ್ಛತೆಯನ್ನು ಕಾಪಾಡಲು ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಧಿಕಾರಿಗಳಿಗೆ ತಿಳಿಸಿದರು.

ಸಾರ್ವಜನಿಕರಿಗೆ ಮಲೇರಿಯಾ, ಡೆಂಗ್ಯೂ, ಚಿಕುಂಗುನ್ಯಾ ರೋಗ ನಿಯಂತ್ರಣಗಳ ಬಗ್ಗೆ ಮಾಹಿತಿ ನೀಡಬೇಕು. ಸ್ವಚ್ಛತೆ ಹಾಗೂ ನೈರ್ಮಲ್ಯದ ಬಗ್ಗೆ ತಾಲ್ಲೂಕವಾರು ನಗರಸಭೆ ಮತ್ತು ಪುರಸಭೆ  ಮುಖ್ಯಸ್ಥರು ಇತರೆ ಇಲಾಖೆಯ ಸಹಯೋಗದೊಂದಿಗೆ ಜಾಗೃತಿ ಮೂಡಿಸಿ ರೋಗ ತಡೆಗಟ್ಟುವ  ನಿಟ್ಟಿನಲ್ಲಿ ಕ್ರಮವಹಿಸಬೇಕು ಎಂದರು.

ಮನೆಗಳಲ್ಲಿ ಶೇಖರಿಸುವ ನೀರನ್ನು ವಾರಕ್ಕೊಮ್ಮೆ ಸ್ವಚ್ಛಮಾಡುವ ಜೊತೆಗೆ ನೀರಿನ ಟ್ಯಾಂಕ್‌ಗಳ ಮೇಲೆ ಮುಚ್ಚಳಿಕೆಯಿಂದ ಭದ್ರಗೊಳಿಸಬೇಕು. ಜನರು ವಾಸಿಸುವ ಪ್ರದೇಶಗಳ ಸುತ್ತಮುತ್ತ ಸ್ವಚ್ಛತೆಯಿಂದ ಕಾಪಾಡುವ ಮೂಲಕ ಆರೋಗ್ಯ ಸಮಾಜ ನಿರ್ಮಾಣಕ್ಕೆ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಧರ್ಮೇಂದ್ರ ಅವರು ಮಾತನಾಡಿ ಜಿಲ್ಲೆಯಲ್ಲಿ 3 ಮಲೇರಿಯಾ, 7 ಚಿಕ್ಕನ್ ಗುನ್ಯಾ ಹಾಗೂ 8 ಡೆಂಗ್ಯೂ  ಪ್ರಕರಣ ಕಂಡು ಬಂದಿದ್ದು, ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸಭೆಗೆ ಮಾಹಿತಿ ನೀಡಿದರು 

ಸಭೆಯಲ್ಲಿ ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಾಗರಾಜು, ಜಿಲ್ಲಾ ಆರೋಗ್ಯಾಧಿಕಾರಿ ಮಂಜುಳದೇವಿ ಸೇರಿದಂತೆ ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು ಮಟ್ಟದ  ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜಕೀಯ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8 ರಂದು ಜೆಡಿಎಸ್ (JDS) ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ದೊಡ್ಡಬಳ್ಳಾಪುರಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ, ನಾಳೆ (ಏ.28) ರಂದು ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ ಎಂದು ಜೆಡಿಎಸ್ ದೊಡ್ಡಬಳ್ಳಾಪುರ

[ccc_my_favorite_select_button post_id="121433"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ಗ್ರಾಮದ ಲಾಡ್ಜ್ ಒಂದರ ಮೇಲೆ ಪೊಲೀಸರು ದಾಳಿ (Police Raid) ನಡೆಸಿದ್ದು, ವೇಶ್ಯಾವಾಟಿಕೆ (Prostitution) ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಿದ್ದಾರೆ. ದಾಳಿಯ ವೇಳೆ ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ.

[ccc_my_favorite_select_button post_id="121407"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಹೆಲ್ಮೆಟ್ ಕಡ್ಡಾಯ ಜಾರಿ ಮಾಡಿ, ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್

[ccc_my_favorite_select_button post_id="121414"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]