ದೊಡ್ಡಬಳ್ಳಾಪುರ: ಖಾಸಗಿ ಮೊಬೈಲ್ ಮೊಬೈಲ್ ಟವರ್ ನಿರ್ಮಾಣದ ವಿರುದ್ದ ಗ್ರಾಮಸ್ಥರು ಪೊಲೀಸ್ ಠಾಣೆಯ ಮೆಟ್ಟಿಲೇರಿರುವ ಪ್ರಕರಣ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ತಾಲ್ಲೂಕಿನ ಲಕ್ಷ್ಮೀದೇವಿಪುರ ಗ್ರಾಮದ ಜನ ವಸತಿ ಪ್ರದೇಶದಲ್ಲಿ ಖಾಸಗಿ ಮೊಬೈಲ್ ಕಂಪನಿಯೊಂದು ಟವರ್ ನಿರ್ಮಿಸುತ್ತಿರುವುದನ್ನು ವಿರೋಧಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿ, ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

