ದೊಡ್ಡಬಳ್ಳಾಪುರ: ತಾಲೂಕಿನ ಕರೊನಾ ಸೋಂಕಿತರ ಹೆಚ್ಚಿನ ಚಿಕಿತ್ಸೆಗಾಗಿ ಆಕಾಶ್ ಆಸ್ಪತ್ರೆ ಜೊತೆಗೆ ಟಿ.ಬೇಗೂರಿನ ಸಿದ್ದಾರ್ಥ ಮೆಡಕಲ್ ಕಾಲೇಜ್ ಹಾಗೂ ಹೊಸಕೋಟೆಯ ಎಂವಿಜೆ ಮೆಡಿಕಲ್ ಕಾಲೇಜಿಗೂ ಸಹ ಕಳಿಸಲ ವ್ಯವಸ್ಥೆ ಮಾಡಲಾಗಿದೆ ಎಂದು ಶಾಸಕ ಟಿ.ವೆಂಕಟರಮಣಯ್ಯ ತಿಳಿಸಿದ್ದಾರೆ.
ತಾಲೂಕಿನ ಕರೊನಾ ಸೋಂಕಿನ ಸ್ಥಿತಿಗತಿ ಕುರಿತು ಹರಿತಲೇಖನಿಯೊಂದಿಗೆ ಮಾತನಾಡಿರುವ ಅವರು, ತಾಲೂಕಿನಲ್ಲಿ ಕರೊನಾ ಸೋಂಕಿತರ ಸಂಖ್ಯೆಗೆ ಹೆಚ್ಚುತ್ತಿರುವ ಹಿನ್ನೆಲೆ ಹಾಗೂ ಸಾವಿನ ಪ್ರಕರಣಗಳು ತೀವ್ರಗೊಳ್ಳುತ್ತಿರುವ ಕಾರಣ, ಆಕಾಶ್ ಆಸ್ಪತ್ರೆಯ ಜೊತೆಗೆ ಸಿದ್ದಾರ್ಥ ಮೆಡಿಕಲ್ ಕಾಲೇಜ್, ಹೊಸಕೋಟೆಯ ಎಂವಿಜೆ ಮೆಡಿಕಲ್ ಕಾಲೇಜಿನಲ್ಲಿಯೂ ಸಹ ಸೋಂಕಿತರ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ ಎಂದರು.
ಕಳೆದ ವಾರ ದಾಸ್ತು ಕೊರತೆಯುಂಟಾಗಿದ್ದ Rapid Antigen Kit ದಾಸ್ತಾನು ಪೂರೈಕೆಯಾಗಿದ್ದು, ತಪಾಸಣೆ ಆರಂಭವಾಗಿದೆ.
ಸೋಂಕಿನ ಲಕ್ಷಣಗಳು ಕಂಡುಬಂದಲ್ಲಿ ತಾಲೂಕಿನ ಜನತೆ ಕೂಡಲೆ ತಪಾಸಣೆಗೆ ಒಳಗಾಗಿ ಚಿಕಿತ್ಸೆ ಪಡೆಯುವ ಮೂಲಕ ಸಾವಿನ ಪ್ರಕರಣಗಳು ತಡೆಯಲು ತಾಲೂಕು ಆಡಳಿತಕ್ಕೆ ನೆರವಾಗ ಬೇಕೆಂದರು.
ಕರೊನಾ ಸೋಂಕಿನ ತಡೆಗೆ ಹೆಚ್ಚಿನ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಸಲುವಾಗಿ, ಬುಧವಾರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಸೇರಿದಂತೆ ಹಿರಿಯ ಅಧಿಕಾರಿಗಳ ಸಭೆಯನ್ನು ಕರೆಯಲಾಗಿದೆ ಎಂದು ಇದೇ ವೇಳೆ ತಿಳಿಸಿದರು.
ಪ್ರಸ್ತುತ ತಾಲೂಕಿನಲ್ಲಿ 728 ಮಂದಿ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಗ್ಯ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಹಾಗೂ ಸಾರ್ವಜನಿಕ ಆಸ್ಪತ್ರೆಯ ಮೇಲ್ದರ್ಜೆಗೆ ಏರಿಸುವ ಕುರಿತಂತೆ ಸರ್ಕಾರದ ಮೇಲೆ ಒತ್ತಡ ಹೇರಲಾಗಿದೆ ಎಂದರು.
ಇದೇ ವೇಳೆ ತಹಶಿಲ್ದಾರ್ ಟಿ.ಎಸ್.ಶಿವರಾಜ್ ಹಾಗೂ ತಾಲೂಕು ವೈದ್ಯಾಧಿಕಾರಿ ಡಾ.ಪರಮೇಶ್ವರ ಮಾತನಾಡಿ, ತಾಲೂಕನ್ನು ಕರೊನಾ ಸೋಂಕಿನಿಂದ ಮುಕ್ತವನ್ನಾಗಿಸಲು ತಾಲೂಕಿನ ಜನತೆ, ಇತರ ಇಲಾಖೆಗಳು ಹಾಗೂ ಸ್ವಯಂಸೇವಾ ಸಂಸ್ಥೆಗಳ ನೆರವು ಅವಶ್ಯಕತೆ ಹೆಚ್ಚಾಗಿದೆ ಎಂದರು.

