ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇಂದು (ಸೆಪ್ಟೆಂಬರ್ 29 ರಂದು) 192 ಪುರುಷರು ಹಾಗೂ 113 ಮಹಿಳೆಯರು ಸೇರಿದಂತೆ 305 ಜನರಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದೆ.
ನೆಲಮಂಗಲ ತಾಲ್ಲೂಕಿನಲ್ಲಿ 44 ಪುರುಷರು ಮತ್ತು 30 ಮಹಿಳೆಯರು, ಹೊಸಕೋಟೆ ತಾಲ್ಲೂಕಿನಲ್ಲಿ 55 ಪುರುಷರು ಮತ್ತು 34 ಮಹಿಳೆಯರು, ದೇವನಹಳ್ಳಿ ತಾಲ್ಲೂಕಿನಲ್ಲಿ 36 ಪುರುಷರು ಮತ್ತು 18 ಮಹಿಳೆಯರು, ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 55 ಪುರುಷರು ಮತ್ತು 30 ಮಹಿಳೆಯರು ಹಾಗೂ ಬೆಂಗಳೂರು ನಗರ ಜಿಲ್ಲೆ ಹಾಗೂ ಇತರೆ ಜಿಲ್ಲೆಗಳಿಗೆ ಸೇರಿದ 2 ಪುರುಷರು ಮತ್ತು 1 ಮಹಿಳೆಗೆ ಕೋವಿಡ್ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಡಳಿತ ನೀಡಿರುವ ವರದಿ ಹರಿತಲೇಖನಿ ಪ್ರಕಟಿಸಿದೆ (ಪ್ರಶ್ನೆ ಮಾಡಬೇಡಿ)

