ಕೋವಿಡ್-19 ಸಾಧಕ, ಬಾಧಕ ಚಿಂತಿಸಿ ಶಾಲೆಗಳ ತೆರೆಯಲು ತೀರ್ಮಾನಿಸಿದರೆ ಬೆಂಬಲ: ಶಾಸಕ ಟಿ.ವೆಂಕಟರಮಣಯ್ಯ

ದೊಡ್ಡಬಳ್ಳಾಪುರ: ಕೋವಿಡ್-19 ಸಾಧಕ ಬಾಧಕ ಚಿಂತಿಸಿ, ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಶಾಲೆಗಳನ್ನು ಆರಂಭಿಸುವುದಾದರೆ ಶಿಕ್ಷಣ ಇಲಾಖೆಗೆ ಬೆಂಬಲ ನೀಡಲಾಗುವುದೆಂದು ಶಾಸಕ ಟಿ.ವೆಂಕಟರಮಣಯ್ಯ ತಿಳಿಸಿದರು.

ಮಂಗಳವಾರ ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕೋವಿಡ್-19 ತುರ್ತು ಸಭೆಯಲ್ಲಿ ಮಾತನಾಡಿದ ಅವರು, ಕರೊನಾ ಸೋಂಕು ತಡೆಗಟ್ಟಲು ಮುಚ್ಚಲಾಗಿರುವ ಶಾಲೆಗಳನ್ನು ಮರು ತೆರೆಯುವ ಕುರಿತು ಶಾಸಕರ ಅಭಿಪ್ರಾಯ ಸಂಗ್ರಹಿಸುವುದಾಗಿ ಹೇಳಿರುವ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರಿಗೆ ಶಾಸಕ ಟಿ.ವೆಂಕಟರಮಣಯ್ಯ ಉತ್ತರ ನೀಡಿದ್ದು, ಶಿಕ್ಷಣ ಸಚಿವರಿಂದ ಯಾವುದೇ ಪತ್ರ ಬಂದಿಲ್ಲ. ನಮ್ಮ ಅಭಿಪ್ರಾಯವನ್ನು ಕೇಳಿದರೆ ಕರೊನಾ ಸೋಂಕು ಉಲ್ಬಣಗೊಳ್ಳುತ್ತಿರುವ ಈ ಸಂಧರ್ಭದಲ್ಲಿ ಸಾಧಕ ಬಾಧಕಗಳನ್ನು ಚಿಂತಿಸಬೇಕಿದೆ, ಕೋವಿಡ್-19 ನಿಯಮ ಪಾಲಿಸಿ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಶಾಲೆಗಳನ್ನು ತೆರೆದರೆ ಮಾತ್ರ ಬೆಂಬಲ ನೀಡಲಾಗುವುದು ಎಂದರು.

ನಂತರ ಮಾತನಾಡಿದ ಅವರು, ತಾಲೂಕಿನಲ್ಲಿ ಕರೊನಾ ಸೋಂಕು ನಿಯಂಯ್ರಣಕ್ಕೆ ನಿಯಮಗಳನ್ನು ಬಿಗಿಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಈಗಾಗಲೇ ಮಾಸ್ಕ್ ಧರಿಸದ ಹಾಗೂ ಸಾಮಾಜಿಕ ಅಂತರ ಕಾಪಾಡದವರಿಂದ ದಂಡವಾಗಿ 2,37,900ರೂಗಳನ್ನು ಕಟ್ಟಿಸಲಾಗಿದೆ.

ಚಿಕಿತ್ಸೆಗೆ ತೆರಳದೆ ಮೆಡಿಕಲ್ ಸ್ಟೋರ್ ಗಳಿಂದ ಮಾತ್ರೆ ಪಡೆದು ಸ್ವಯಂ ಚಿಕಿತ್ಸೆ ಪಡೆಯುವವರ ಬಗ್ಗೆ ನಿಗಾವಹಿಸುವುದು, ಮೆಡಿಕಲ್ ಸ್ಟೋರ್ ಮಾಲೀಕರ ಸಭೆ ಶೀಘ್ರವಾಗಿ ನಡೆಸಿ ಕೋವಿಡ್-19 ನಿಯಂತ್ರಣ ಕ್ರಮಕ್ಕೆ ಸಹಕಾರ ಕೋರುವುದು. ಜಿಲ್ಲಾ ಆರೋಗ್ಯ ಅಧಿಕಾರಿಯ ಸಭೆಗೆ ಕರೆಸಿ ಕರೊನಾ ಸೋಂಕಿನ‌ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಚರ್ಚಿಸುವುದು ಹಾಗೂ ತಾಲೂಕು ಹಾಗು ಜಿಲ್ಲಾ ಕೋವಿಡ್-19 ಬುಲೆಟಿನ್ ವರದಿ ಗೊಂದಲ ಪರಿಹರಿಸಲು ಜಿಲ್ಲಾ ಆರೋಗ್ಯ ಅಧಿಕಾರಿಗೆ ಕಟ್ಟು ನಿಟ್ಟಿನ ಸೂಚನೆ ನೀಡುವಂತೆ ಉಪವಿಭಾಗಾಧಿಕಾರಿ ಅರುಳ್ ಕುಮಾರ್ ಅವರಿಗೆ ತಿಳಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕಿನ ಕೋವಿಡ್-19 ಬುಲೆಟಿನ್ ವಸ್ತು ನಿಷ್ಟವಾಗಿದ್ದು, ತಾಲೂಕು ಬುಲೆಟಿನ್ ಅನಿರ್ವಾರ್ಯತೆಯನ್ನು ಜಿಲ್ಲಾ ಉಸ್ತುವಾರಿ ಸಚಿವರಿಗೂ ತಿಳಿಸಲಾಗಿದೆ ಎಂದರು.

ಈ ವೇಳೆ ಕೋವಿಡ್-19 ತಪಾಸಣೆ ಸ್ಥಳ ಪ್ರತ್ಯೇಕ ಗೊಳಿಸಿ ಎಪಿಎಂಸಿ ಸಭಾಂಗಣದಲ್ಲಿ ಇರುವ ಕಟ್ಟಡ ಬಳಸಿಕೊಳ್ಳುವುದು, ರಾಜೀವ್ ಗಾಂಧಿ ಆಸ್ಪತ್ರೆಗೆ ಕಳಿಸಲಾಗುತ್ತಿರುವ ಕೋವಿಡ್-19 ವರದಿ ವಿಳಂಬವಾಗದಂತೆ ನಿಗಾವಹಿಸುವುದು, ಹೆಚ್ಚುವರಿ ಸಿಬ್ಬಂದಿಗಳ ಕೊರತೆ ನೀಗಲು ಕ್ರಮವಹಿಸಲು ಸೂಚನೆ ನೀಡಿದರು.

ಡಿವೈಎಸ್ಪಿ ಟಿ.ರಂಗಪ್ಪ ಮಾತನಾಡಿ, ಅಂಗಡಿಗಳಲ್ಲಿ ಸ್ಯಾನಿಟೈಸರ್ ಬಳಸದ ಹಾಗೂ ಮಾಸ್ಕ್ ಧರಿಸದೆ ವ್ಯವಹರಿಸುವ ವರ್ತಕರಿಗೆ ಹಾಗೂ ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಬೇಜವಬ್ದಾರಿಯುತವಾಗಿ ವರ್ತಿಸುವವರಿಗೆ ದಂಡವನ್ನು ವಿಧಿಸುವ ಪ್ರಕ್ರಿಯೆಗೆ ಹೆಚ್ಚು ಮಾಡಲಾಗುವುದೆಂದರು.

ಸಭೆಯಲ್ಲಿ ಉಪವಿಭಾಗಾಧಿಕಾರಿ ಅರುಳ್ ಕುಮಾರ್, ತಹಶಿಲ್ದಾರ್ ಟಿ.ಎಸ್.ಶಿವರಾಜ್, ಆರೋಗ್ಯಾಧಿಕಾರಿ ಡಾ.ಪರಮೇಶ್ವರ, ಸಹಾಯಕ ಉಪ ನಿರ್ದೇಶಕ ಗಂಗರಾಜ್ ಇದ್ದರು.

ರಾಜಕೀಯ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8 ರಂದು ಜೆಡಿಎಸ್ (JDS) ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ದೊಡ್ಡಬಳ್ಳಾಪುರಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ, ನಾಳೆ (ಏ.28) ರಂದು ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ ಎಂದು ಜೆಡಿಎಸ್ ದೊಡ್ಡಬಳ್ಳಾಪುರ

[ccc_my_favorite_select_button post_id="121433"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ಗ್ರಾಮದ ಲಾಡ್ಜ್ ಒಂದರ ಮೇಲೆ ಪೊಲೀಸರು ದಾಳಿ (Police Raid) ನಡೆಸಿದ್ದು, ವೇಶ್ಯಾವಾಟಿಕೆ (Prostitution) ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಿದ್ದಾರೆ. ದಾಳಿಯ ವೇಳೆ ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ.

[ccc_my_favorite_select_button post_id="121407"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಹೆಲ್ಮೆಟ್ ಕಡ್ಡಾಯ ಜಾರಿ ಮಾಡಿ, ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್

[ccc_my_favorite_select_button post_id="121414"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]