ದೊಡ್ಡಬಳ್ಳಾಪುರ: ಜೆಡಿಎಸ್ ಪಕ್ಷದ ಸಕ್ರಿಯ ಕಾರ್ಯಕರ್ತ ಹಾಗೂ ಮುಖಂಡ ಚಿಲೇನಹಳ್ಳಿಯ ರಾಮಮೂರ್ತಿ (50) ಅನಾರೋಗ್ಯದ ಕಾರಣ ಬೆಂಗಳೂರಿನ ಆಸ್ಪತ್ರೆಯಲ್ಲಿ ಸಾವನಪ್ಪಿದ್ದಾರೆ.
ಮೃತರು ಮಡದಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದು, ಅಂತ್ಯಕ್ರಿಯೆ ಗುರುವಾರ ಸಂಜೆ 4 ಗಂಟೆಗೆ ಚಿಲೇನಹಳ್ಳಿಯ ರುದ್ರಭೂಮಿಯಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ಹರಿತಲೇಖನಿಗೆ ತಿಳಿಸಿವೆ.
ಚಿಲೇನಹಳ್ಳಿ ರಾಮಮೂರ್ತಿ ಅಗಲಿಕೆಗೆ ದೇವನಹಳ್ಳಿ ಶಾಸಕ ನಿಸರ್ಗ ನಾರಾಯಣಸ್ವಾಮಿ, ಘಾಟಿ ಲಯನ್ಸ್ ಕ್ಲಬ್ ಅಧ್ಯಕ್ಷ ಹರೀಶ್ ಗೌಡ, ಜಿಲ್ಲಾಪಂಚಾಯಿತಿ ಸದಸ್ಯ ಹೆಚ್.ಅಪ್ಪಯ್ಯಣ್ಣ, ವಕ್ತಾರ ಕುಂಟನಹಳ್ಳಿ ಮಂಜುನಾಥ್ ಸೇರಿದಂತೆ ಅನೇಕರು ಕಂಬನಿ ಮಿಡಿದಿದ್ದಾರೆ.

