ದೊಡ್ಡಬಳ್ಳಾಪುರ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ.3 ರಿಂದ ಹೊರ ಗುತ್ತಿಗೆ ಆರೋಗ್ಯ ಸಿಬ್ಬಂದಿ ಧರಣಿ

ದೊಡ್ಡಬಳ್ಳಾಪುರ: ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅ.3 ರಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುವುದು ಎಂದು ಸಂಘದ ತಾಲ್ಲೂಕು ಮುಖಂಡ ಆರ್‌.ಜಗದೀಶ್‌, ಕೆ.ಸಿ.ರುದ್ರೇಶ್‌ ತಿಳಿಸಿದ್ದಾರೆ.

ಅವರು ಈ ಬಗ್ಗೆ ಮಾಹಿತಿ ನೀಡಿ, ಆರೋಗ್ಯ ಇಲಾಖೆ ಮತ್ತು ರಾಷ್ಟೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗುತ್ತಿಗೆ ಮತ್ತು ಹೋರಗುತ್ತಿಗೆ  ನೌಕರರು  ವೈದ್ಯಕೀಯ, ಅರೆವೈದ್ಯಕೀಯ ಮತ್ತು ಕಚೇರಿ ಸಿಬ್ಬಂದಿಗಳ ಹಲವಾರು ವರ್ಷಗಳ ಬೇಡಿಕೆಗಳ ಈಡೇರಿಕೆಗಾಗಿ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರೂ ಯಾವುದೇ ಕ್ರಮ ವಹಿಸುತ್ತಿಲ್ಲ. ಹೀಗಾಗಿ ಎಲ್ಲಾ ರಾಷ್ಟೀಯ ಕಾರ್ಯಕ್ರಮಗಳ ಕೋವಿಡ್‌-19 ಮತ್ತು ಆರ್ಥಿಕ ಹಾಗೂ ಭೌತಿಕ ವರದಿಗಳನ್ನು ಸಲ್ಲಿಸದೆ ಇರಲು ಹಾಗೂ ಸಾಂಕೇತಿಕವಾಗಿ ಧರಣಿ ಪ್ರತಿಭಟನೆಯನ್ನು ಮಾಡಲು ಸಂಘವು ನಿರ್ಧರಿಸಿದೆ. ಗುತ್ತಿಗೆ ಮತ್ತು ಹೋರಗುತ್ತಿಗೆ ನೌಕರರ ಹಿತಕಾಯುವಲ್ಲಿ ಮತ್ತು ಬೇಡಿಕೆಗಳನ್ನು ಈಡೇರಿಸಿಕೊಳ್ಳಲು ಧರಣಿ ನಡೆಸುವುದು ಅನಿವಾರ್ಯವಾಗಿದೆ ಎಂದರು.  

ಕೋವಿಡ್‌-19 ಸಂದರ್ಭದಲ್ಲಿ ಕೆಲಸದಲ್ಲಿ ನೌಕರರು ಸಾಕಷ್ಟು ಶ್ರಮ ವಹಿಸುತ್ತಿದ್ದೇವೆ. ಆದರೆ ನಮ್ಮನ್ನು ನಿರ್ಲಕ್ಷ್ಯ ಮಾಡುತ್ತಿರುವುದನ್ನು ಸಂಘವು ಖಂಡಿಸುತ್ತದೆ ಮತ್ತು ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಲಾಗುತ್ತಿದೆ. ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾಗಳ ಕಚೇರಿ, ತಾಲ್ಲೂಕು ಮಟ್ಟದಲ್ಲಿ ತಹಶೀಲ್ದಾರ್‌  ಕಚೇರಿ ಮುಂದೆ ಧರಣಿ ಮಾಡಲಾಗುವುದು ಎಂದರು.

ನಮ್ಮ ಬೇಡಿಕೆಗಳು ಹಾಗೂ ಧರಣಿ ನಡೆಸುವ ಕುರಿತಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಜಗದೀಶ್‌ನಾಯ್ಕ್‌, ಉಪವಿಭಾಗಾಧಿಕಾರಿ ಅರುಳ್‌ಕುಮಾರ್‌, ತಹಶೀಲ್ದಾರ್‌ ಟಿ.ಎಸ್.ಶಿವರಾಜ್‌, ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಪರಮೇಶ್ವರ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ರಾಮಕೃಷ್ಣಪ್ಪ ಅವರಿಗೂ ಮನವಿ ಸಲ್ಲಿಸಿದ್ದೇವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಂಘದ ಮುಖಂಡರಾದ ಮಹತೇಂಶ್‌,ದಿನೇಶ್‌,ಮಂಜುನಾಥ್‌,ನಾಗರಾಜ್‌ ಇದ್ದರು.

ರಾಜಕೀಯ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8 ರಂದು ಜೆಡಿಎಸ್ (JDS) ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ದೊಡ್ಡಬಳ್ಳಾಪುರಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ, ನಾಳೆ (ಏ.28) ರಂದು ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ ಎಂದು ಜೆಡಿಎಸ್ ದೊಡ್ಡಬಳ್ಳಾಪುರ

[ccc_my_favorite_select_button post_id="121433"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ಗ್ರಾಮದ ಲಾಡ್ಜ್ ಒಂದರ ಮೇಲೆ ಪೊಲೀಸರು ದಾಳಿ (Police Raid) ನಡೆಸಿದ್ದು, ವೇಶ್ಯಾವಾಟಿಕೆ (Prostitution) ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಿದ್ದಾರೆ. ದಾಳಿಯ ವೇಳೆ ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ.

[ccc_my_favorite_select_button post_id="121407"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಹೆಲ್ಮೆಟ್ ಕಡ್ಡಾಯ ಜಾರಿ ಮಾಡಿ, ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್

[ccc_my_favorite_select_button post_id="121414"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]