ದೊಡ್ಡಬಳ್ಳಾಪುರ: ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನಿಂದ ಹಮ್ಮಿಕೊಂಡಿದ್ದ ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹಾದ್ದೂರ್ ಶಾಸ್ತ್ರಿ ಯವರ ಜನ್ಮ ದಿನಾಚಾರಣೆ ನಗರದ ಕಚೇರಿ ಆವರಣದಲ್ಲಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ನಗರಸಭೆಯ ಮಾಜಿ ಅಧ್ಯಕ್ಷ ಟಿ.ಎನ್.ಪ್ರಭುದೇವ್ ಇಂದಿನ ಯುವ ಜನತೆ ಹಾಗೂ ರಾಜಕಾರಣಿಗಳು , ಗಾಂಧೀಜಿಯವರ ಅಹಿಂಸಾ ತತ್ವ ಹಾಗೂ ಆದರ್ಶಗಳನ್ನು ಮೈಗೂಡಿಸಿಕೊಳ್ಳುವ ಅಗತ್ಯವಿದೆ ಎಂದರು.
ಕಾರ್ಯಕ್ರಮದಲ್ಲಿ ತಾಲೂಕು ಕಸಾಪ ಅಧ್ಯಕ್ಷೆ ಪ್ರಮೀಳಮಹಾದೇವ್, ಕಾರ್ಯದರ್ಶಿ ವಿ.ಸಿ.ಜ್ಯೋತಿಕುಮಾರ್, ಜಿ ಮಾಜಿ ಕೋಶಾಧ್ಯಕ್ಷ ನಂ.ಮಹಾದೇವ್, ಕಸಾಪ ಪದಾಧಿಕಾರಿಗಳಾದ ಡಿ.ಈ.ಶಿವಕುಮಾರ್, ಬಿ.ಪಿ. ಹರಿಕುಮಾರ್ , ಸೂರಿ, ಮತ್ತಿತರರಿದ್ದರು.

