ದೊಡ್ಡಬಳ್ಳಾಪುರ: ತಾಲೂಕು ಕಚೇರಿಯಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಡೆದ 151ನೇ ಗಾಂಧಿ ಜಯಂತಿ ಹಾಗೂ 116 ನೇ ಲಾಲ್‌ಬಹಾದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.
ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಅಧ್ಯಕ್ಷ ತಹಶೀಲ್ದಾರ್ ಟಿ.ಎಸ್.ಶಿವರಾಜ್ ಮಾತನಾಡಿ, ಅಹಿಂಸಾತ್ಮಕ ಹೋರಾಟದ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಗಾಂಧೀಜಿಯವರ ಮಾದರಿ ಇಡೀ ವಿಶ್ವದಲ್ಲಿಯೇ ಹೆಸರಾಗಿದೆ. ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಆದರ್ಶಗುಣಗಳ ಪ್ರತಿಯೊಬ್ಬರೂ ಪ್ರೇರಣೆಯನ್ನಾಗಿಸಿಕೊಳ್ಳಬೇಕೆಂದು ತಿಳಿಸಿದರು.
ಈ ವೇಳೆ ಉಪವಿಭಾಗಾಧಿಕಾರಿ ಅರುಳ್ ಕುಮಾರ್, ಉಪತಹಸೀಲ್ದಾರ್ ಸುರೇಶ್, ಕಸಬಾ ರಾಜಸ್ವ ನಿರೀಕ್ಷಕರಾದ ಎನ್.ಲಕ್ಷ್ಮೀನರಸಿಂಹಯ್ಯ, ಮತ್ತಿತರರು ಭಾಗವಹಿಸಿದ್ದರು.

