ದೊಡ್ಡಬಳ್ಳಾಪುರ: ಗಾಂಧಿ ಜಯಂತಿಯಂದು ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಅಂಗಡಿಯ ಮೇಲೆ ಪೊಲೀಸರು ದಾಳಿ ನಡೆಸಿ ಮದ್ಯವನ್ನು ವಶಪಡಿಸಿಕೊಳ್ಳುವ ಜೊತೆಗೆ ಆರೋಪಿಗಳನ್ನು ಬಂಧಿಸಿರುವ ಘಟನೆ ತಾಲೂಕಿನ ತೂಬಗೆರೆಯಲ್ಲಿ ನಡೆದಿದೆ.
ಬಂಧಿತ ಆರೋಪಿಯನ್ನು ಪ್ರಕಾಶ್ (38) ಎಂದು ಗುರುತಿಸಲಾಗಿದ್ದು, ಗಾಂಧಿ ಜಯಂತಿಯಂದು ಮದ್ಯ ಮಾರಾಟ ನಿಷೇಧದ ಹಿನ್ನೆಲೆಯಲ್ಲಿ. ಅಕ್ರಮವಾಗಿ ಹೆಚ್ಚುವರಿ ಬೆಲೆಗೆ ಮಾರಾಟ ಮಾಡುತ್ತಿದ್ದ ಎನ್ನುವ ಖಚಿತ ಮಾಹಿತಿಯ ಮೇರೆಗೆ ಡಿವೈಎಸ್ಪಿ ಟಿ.ರಂಗಪ್ಪ ಹಾಗೂ ಸರ್ಕಲ್ ಇನ್ಸ್ಪೆಕ್ಟರ್ ನವೀನ್ ಕುಮಾರ್ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿದೆ
ಈ ಕುರಿತಂತೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

