ದೊಡ್ಡಬಳ್ಳಾಪುರ: ಉತ್ತರ ಪ್ರದೇಶದ ಹಾಥರಸ್‌ನಲ್ಲಿ ದಲಿತ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿ, ನಾಲಿಗೆ ಕತ್ತರಿಸಿ ಕೊಲೆ ಮಾಡಿದ ಘಟನೆ ಖಂಡಿಸಿ ಬಹುಜನ ಸಮಾಜ ಪಾರ್ಟಿವತಿಯಿಂದ ನಗರದ ತಾಲೂಕು ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನಾ ನಿರತರನ್ನು ಉದ್ದೇಶಿಸಿ ಮಾತನಾಡಿದ ಬಿಎಸ್ಪಿ ರಾಜ್ಯ ಕಾರ್ಯದರ್ಶಿ ಪುರುಷೋತ್ತಮ್, ದಲಿತ ವಿದ್ಯಾರ್ಥಿನಿಯ ಮೇಲೆ ಗುಂಪು ಅತ್ಯಾಚಾರಗೈದ ನಾಲ್ವರು ಮೇಲ್ಜಾತಿಯ ಠಾಕೂರ್ ಪಂಗಡಕ್ಕೆ ಸೇರಿದ ಯುವಕರು ಯುವತಿಯ ನಾಲಿಗೆ ಕತ್ತರಿಸಿ, ಬೆನ್ನು ಮೂಳೆ ಮುರಿದು ಕ್ರೌರ್ಯ ಮೆರೆದಿದ್ದರೆ. ಸೆ.14 ರಂದು ಆಸ್ಪತ್ರೆಗೆ ದಾಖಲಾಗಿದ್ದ ಯುವತಿ ಜೀವನ್ಮರಣದ ಹೋರಾಟ ನಡೆಸಿ ಸೆ 29ರಂದು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ. ದುಷ್ಕೃತ್ಯ ನಡೆದ ದಿನವೇ ಆಕೆಯ ಪೋಷಕರು ಪೊಲೀಸರ ಗಮನಕ್ಕೆ ತಂದರೂ ಪ್ರಕರಣ ದಾಖಲಿಸಿಕೊಳ್ಳಲು ವಿಳಂಬ ಮಾಡಿ ಆರೋಪಿಗಳನ್ನು ರಕ್ಷಿಸುವ ಕೆಲಸವನ್ನು ಉತ್ತರ ಪ್ರದೇಶದ ಬಿಜೆಪಿ ಸರ್ಕಾರ ಮಾಡಿದೆ ಎಂದು ಟೀಕಿಸಿದರು.
ದೇಶದಲ್ಲಿ ಮಹಿಳೆಯರಿಗೆ ನಿರ್ಭಯವಾಗಿ ಓಡಾಡಲು ಕಷ್ಟವಾಗಿದೆ.ಅತ್ಯಚಾರ ನಡೆದ ಯುವತಿಯ ಕುಟುಂಬಕ್ಕೆ ರಕ್ಷಣೆ ಇಲ್ಲದೆ ಪೊಲೀಸರ ದೌರ್ಜನ್ಯ ಹೆಚ್ಚಾಗಿದೆ.ಅತ್ಯಾಚಾರ ನಡೆದು ನಾಲ್ಕು ದಿನ ಸಾವು ಬದುಕಿನ ನಡುವೆ ಹೋರಾಡಿ ಕೊನೆಗೂ ಉಸುರು ಚೆಲ್ಲಿದ ಯುವತಿಯನ್ನು ಅವರ ಕುಟುಂಬಕ್ಕೆ ನೀಡದೆ ಪೂಲೀಸರ ಸಮ್ಮಖದಲ್ಲಿ ಸುಟ್ಟು ಹಾಕಿರುವುದು ಎಷ್ಟರ ಮಟ್ಟಿಗೆ ಸರಿ ಆಳುವ ಬಿಜೆಪಿ ಸರ್ಕಾರದಿಂದ ಬಡವರಿಗೆ ದಲಿತರಿಗೆ ಅನ್ಯಾಯವಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಬಿಎಸ್ಪಿ ಮುಖಂಡರಾದ ಕೆ.ವಿ.ಮುನಿಯಪ್ಪ, ನರೇಂದ್ರಮೂರ್ತಿ, ಬಸವರಾಜು,ಆಂಜಿನಪ್ಪ, ದೇವರಾಜು, ದೊಡ್ಡಯ್ಯ, ವೀರಭದ್ರಯ್ಯ, ಸಕ್ಕರೆಗೊಲ್ಲಹಳ್ಳಿ ಹನುಮಯ್ಯ, ನಾಗರಾಜು, ಹೊಸಹಳ್ಳಿ ನಾಗರಾಜ್, ಕಮಲಮ್ಮ, ಹೇಮ ಮತ್ತಿತರಿದ್ದರು.

