ಬೆಂಗಳೂರು: ಉಪ ಚುನಾವಣೆಯಲ್ಲಿ ದಿವಂಗತ ಐಎಎಸ್ ಅಧಿಕಾರಿ ಡಿ.ಕೆ ರವಿ ಅವರ ಪತ್ನಿ ಕುಸುಮಾ ಸ್ಪರ್ಧೆ ಮಾಡಲಿದ್ದಾರೆ ಎಂಬ ಚರ್ಚೆಯ ನಡುವೆಯೇ, ಕುಸುಮಾ ಇಂದು ಕಾಂಗ್ರೆಸ್ಗೆ ಸೇರ್ಪಡೆಯಾಗಿದ್ದಾರೆ.
ಕೆಪಿಸಿಸಿ ಕಚೇರಿಗೆ ತಂದೆ ಹನುಮಂತರಾಯಪ್ಪ ಜೊತೆ ಆಗಮಿಸಿದ ಕುಸುಮಾ ಅವರಿಗೆ ಕಾಂಗ್ರೆಸ್ ಕಾರ್ಯಕರ್ತರು ಹೂಗುಚ್ಛ ನೀಡಿ ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್, ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ ಮತ್ತಿತರಿದ್ದರು.
ಇದೇ ವೇಳೆ ಶಿರಾ ಕ್ಷೇತ್ರದ ಹಲವು ಸ್ಥಳೀಯ ಜೆಡಿಎಸ್, ಬಿಜೆಪಿ ನಾಯಕರೂ ಕೂಡ ಕಾಂಗ್ರೆಸ್ಗೆ ಸೇರ್ಪಡೆಯಾದರು.

