ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ( ಅಕ್ಟೋಬರ್ 5 ರಂದು) 102 ಪುರುಷರು ಹಾಗೂ 39 ಮಹಿಳೆಯರು ಸೇರಿದಂತೆ 141 ಜನರಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಇಲಾಖೆಯ ಬುಲೆಟಿನ್ ವರದಿ ತಿಳಿಸಿದೆ.
ವರದಿಯಂತೆ ನೆಲಮಂಗಲ ತಾಲ್ಲೂಕಿನಲ್ಲಿ 22 ಪುರುಷರು ಮತ್ತು 8 ಮಹಿಳೆಯರು, ಹೊಸಕೋಟೆ ತಾಲ್ಲೂಕಿನಲ್ಲಿ 18 ಪುರುಷರು ಮತ್ತು 7 ಮಹಿಳೆಯರು, ದೇವನಹಳ್ಳಿ ತಾಲ್ಲೂಕಿನಲ್ಲಿ 12 ಪುರುಷರು ಮತ್ತು 5 ಮಹಿಳೆಯರು, ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 48 ಪುರುಷರು ಮತ್ತು 18 ಮಹಿಳೆಯರು ಹಾಗೂ ಬೆಂಗಳೂರು ನಗರ ಜಿಲ್ಲೆ ಹಾಗೂ ಇತರೆ ಜಿಲ್ಲೆಗಳಿಗೆ ಸೇರಿದ 2 ಪುರುಷರು ಮತ್ತು 1 ಮಹಿಳೆಗೆ ಕೋವಿಡ್ ಸೋಂಕು ದೃಢಪಟ್ಟಿದೆ ಎನ್ನಲಾಗಿದೆ.

