ದೊಡ್ಡಬಳ್ಳಾಪುರ: ನಗರಸಭೆ ಬಿಲ್ ಕಲೆಕ್ಟರ್ ರಾಜು (55 ) ಅನಾರೋಗ್ಯದ ಕಾರಣ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಮೃತರು ಮಡದಿ, ಮೂವರು ಮಕ್ಕಳು ಅಗಲಿದ್ದು, ಅಂತ್ಯಕ್ರಿಯೆ ಇಂದು ನಡೆಯಲಿದೆ ಎಂದು ಕುಟುಂಬದ ಮೂಲಗಳು ಹರಿತಲೇಖನಿಗೆ ತಿಳಿಸಿವೆ.
ಸುಮಾರು ಮೂವತ್ತು ವರ್ಷಗಳಿಂದ ನಗರಸಭೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ರಾಜು ಅಗಲಿಕೆಗೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್ ಹಾಗೂ ಸಿಬ್ಬಂದಿ ಕಂಬನಿ ಮಿಡಿದಿದ್ದಾರೆ.

