ದೊಡ್ಡಬಳ್ಳಾಪುರ: ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್‌ನ ಬೆಂ.ಗ್ರಾ.ಜಿಲ್ಲಾ ಘಟಕ ಉದ್ಘಾಟನೆ

ದೊಡ್ಡಬಳ್ಳಾಪುರ: ಸರ್ಕಾರದ ವಿವಿಧ ಸೌಲಭ್ಯಗಳನ್ನು ಪಡೆಯಲು ಸಮುದಾಯದ ಅಂಕಿ ಅಂಶಗಳು ಮುಖ್ಯವಾಗಿದ್ದು, ಬ್ರಾಹ್ಮಣ ಸಮುದಾಯದ ಸಮೀಕ್ಷೆ ಮತ್ತೊಮ್ಮೆ ನಡೆಸಬೇಕಾದ ಅಗತ್ಯವಿದೆ ಎಂದು  ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ದಿ ಮಂಡಲಿ ಅಧ್ಯಕ್ಷ ಎಚ್.ಎಸ್.ಸಚ್ಚಿದಾನಂದ ಮೂರ್ತಿ ಹೇಳಿದರು.

ತಾಲೂಕಿನ ಘಾಟಿ ಕ್ಷೇತ್ರದ ಬ್ರಾಹ್ಮಣರ ಧರ್ಮಶಾಲಾದಲ್ಲಿ ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್‌ನ  ಬೆಂಗಳೂರು ಗ್ರಾಮಾಂತರ ಜಿಲ್ಲಾ ಘಟಕವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ 42 ಲಕ್ಷ ಬ್ರಾಹ್ಮಣರಿದ್ದು, ಸುಮಾರು 1.35 ದೇವಾಲಯಗಳಿಂದ 3.5 ಲಕ್ಷ ಅರ್ಚಕ ವೃತ್ತಿಯಲ್ಲಿ ತೊಡಗಿದ್ದಾರೆ. ಕರೊನಾ ಲಾಕ್‌ಡೌನ್ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಸೂಚನೆಯ ಮೇರೆಗೆ 5 ಕೋಟಿ ರೂಗಳನ್ನು ಸಂಕಷ್ಟದಲ್ಲಿರುವ ಬ್ರಾಹ್ಮಣರಿಗೆ ವಿತರಿಸಲು ಸೂಚನೆ ಬಂದಾಗ ಯಾರಿಗೆ ನೀಡಬೇಕೆಂಬ ಗೊಂದಲ ಉಂಟಾಯಿತು. ಈ ದಿಸೆಯಲ್ಲಿ ಅರ್ಚಕರನ್ನು ಅಸಂಘಟಿತ ಕಾರ್ಮಿಕರಂತೆ ಪರಿಗಣಿಸಭೇಕಿದ್ದು,  ಸೌಲಭ್ಯಗಳನ್ನು ಪಡೆಯಲು ತಮ್ಮ ಅಸ್ತಿತ್ವವನ್ನು ಪ್ರತಿಪಾದಿಸುವ ಅಗತ್ಯವಿದ್ದು, ಸಂಘಟನೆಗಳು ಇದಕ್ಕೆ ಇಂಬು ನೀಡುತ್ತವೆ. ಸಂಘಟಿತವಾಗಿ ಸಮುದಾಯ ಒಗ್ಗೂಡಿ ಸರ್ಕಾರದ ಸೌಲಭ್ಯಗಳನ್ನು ಪಡೆಯಬೇಕಿದೆ ಎಂದರು.

ಬ್ರಾಹ್ಮಣ ಅಭಿವೃದ್ದಿ ಮಂಡಲಿಯಿಂದ ಬ್ರಾಹ್ಮಣ ಸಮಾಜದಲ್ಲಿ ಸುಮಾರು 24 ಉಪ ಜಾತಿಗಳಿದ್ದು, ಎಲ್ಲರನ್ನೂ ಒಗ್ಗೂಡಿಸುವ ಕೆಲಸವನ್ನು ಮಾಡಲಾಗುತ್ತಿದೆ. ಬ್ರಾಹ್ಮಣ ಸಮುದಾಯಕ್ಕೆ ಕಂದಾಯ ಇಲಾಖೆ ವತಿಯಿಂದ ಜಾತಿ ಪ್ರಮಾಣ ಪತ್ರ ನೀಡಲಾಗುತ್ತಿದ್ದು, ಐ.ಎ.ಎಸ್ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳಿಗೆ ಸಹಾಯ ಮಾಡಲಾಗುತ್ತಿದೆ. ಮಂಡಲಿ ವತಿಯಿಂದ ನೂತನ ಸಂಘಕ್ಕೆ ಅಗತ್ಯ ಸಹಕಾರ ನೀಡಲಾಗುವುದು ಎಂದರು.

ಪ್ರಸ್ತಾವಿಕವಾಗಿ ಮಾತನಾಡಿದ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್‌ನ  ಉಪಾಧ್ಯಕ್ಷ ರಾಘವೇಂದ್ರ ಭಟ್, ಕೊರೊನಾ ಸಂದರ್ಭದಲ್ಲಿ ಮುಜರಾಯಿ ಅರ್ಚಕರಿಗೆ ಹೊರತುಪಡಿಸಿ ಇತರೆ ದೇವಾಲಯಗಳ ಅರ್ಚಕರಿಗೆ ಸೌಲಭ್ಯಗಳು ದೊರೆಯಲಿಲ್ಲ. ಈ ದಿಸೆಯಲ್ಲಿ ಅರ್ಚಕರ ಕ್ಷೇಮಾಭಿವೃದ್ದಿಗಾಗಿ ಸಂಘ ಸ್ಥಾಪಿಸಲಾಗಿದ್ದು, ಈಗಾಗಲೇ ರಾಜ್ಯದಲ್ಲಿ 10 ಸಾವಿರ ಸದಸ್ಯರು ನೋಂದಣಿಯಾಗಿದ್ದಾರೆ ಎಂದರು.

ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್‌ನ  ಪ್ರಧಾನ ಕಾರ್‍ಯದರ್ಶಿ ಡಿ.ಎಸ್.ಸುಧೀಂದ್ರ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ  ಎಸ್.ಎಸ್.ಘಾಟಿ ಬ್ರಾಹ್ಮಣರ ಸಂಘದ ಅಧ್ಯಕ್ಷ ರಾಮನಾಥ ಶರ್ಮ, ತಾ.ಪಂ ಮಾಜಿ ಸದಸ್ಯ ನಾಗರಾಜ ಶರ್ಮ, ಪ್ರಧಾನ ಸಂಚಾಲಕ ವಿ.ಅಚ್ಯುತ ಮೂರ್ತಿ, ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ದಿ ಮಂಡಲಿಯ ನಿರ್ದೇಶಕ ಪವನ್ ಕುಮಾರ್,ಅರ್ಚಕ ಶ್ರೀನಿವಾಸ ರಾಘವನ್ ಭಾಗವಹಿಸಿದ್ದರು.

ಇದೇ ಸಂದರ್ಭದಲ್ಲಿ ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳಿಗೆ ಆಯ್ಕೆ ಪತ್ರವನ್ನು ವಿತರಿಸಲಾಯಿತು.

ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್‌ನ ಜಿಲ್ಲಾ ಘಟಕ: ವಿ.ಅಶ್ವತ್ಥನಾರಾಯಣ (ಅಧ್ಯಕ್ಷ), ಡಿ.ಕೆ.ನರಸಿಂಹಮೂರ್ತಿ(ಉಪಾಧ್ಯಕ್ಷರು), ಎಚ್.ಎಸ್.ನರಸಿಂಹಮೂರ್ತಿ(ಪ್ರಧಾನ ಕಾರ್ಯದರ್ಶಿ), ವಿಶ್ವನಾಥ್(ಜಂಟಿ ಕಾರ್ಯದರ್ಶಿ), ಬಿ.ಎಸ್.ಅಶ್ವತ್ಥ ಪ್ರಸಾದ್ ದೀಕ್ಷಿತ್(ಖಜಾಂಚಿ), ಎ.ಸಿ.ಶ್ರೀನಾಥ್(ಸಂಘಟನಾ ಕಾರ್ಯದರ್ಶಿ), ಎಚ್.ವಿ.ರಾಜೇಶ್(ನಿರ್ದೇಶಕರು)

ತಾಲೂಕುಗಳ ಅಧ್ಯಕ್ಷರು : ಎಸ್.ನವೀನ್(ದೊಡ್ಡಬಳ್ಳಾಪುರ), ಮಂಜುನಾಥ್ ಭಟ್‌( ನೆಲಮಂಗಲ),ಎ.ಎನ್.ಕೇಶವಮೂರ್ತಿ(ಹೊಸಕೋಟೆ),ಜೆ.ಕೆ.ಮಂಜುನಾಥ ಶರ್ಮ (ದೇವನಹಳ್ಳಿ)

ರಾಜಕೀಯ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8 ರಂದು ಜೆಡಿಎಸ್ (JDS) ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ದೊಡ್ಡಬಳ್ಳಾಪುರಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ, ನಾಳೆ (ಏ.28) ರಂದು ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ ಎಂದು ಜೆಡಿಎಸ್ ದೊಡ್ಡಬಳ್ಳಾಪುರ

[ccc_my_favorite_select_button post_id="121433"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ರಸ್ತೆಬದಿಯಲ್ಲಿ ನಿಂತು ಲೈಂಗಿಕ ಕ್ರಿಯೆಗೆ ಪ್ರಚೋದನೆ: 6 ವಿದೇಶಿ ಯುವತಿಯರ ಬಂಧನ..!

ರಸ್ತೆಬದಿಯಲ್ಲಿ ನಿಂತು ಲೈಂಗಿಕ ಕ್ರಿಯೆಗೆ ಪ್ರಚೋದನೆ: 6 ವಿದೇಶಿ ಯುವತಿಯರ ಬಂಧನ..!

ರಸ್ತೆಯಲ್ಲಿ ನಿಂತ ಆರು ಯುವತಿಯರು ಪುರುಷರನ್ನು ಲೈಂಗಿಕ ಕ್ರಿಯೆಗೆ ಪ್ರಚೋದಿಸುತ್ತಿದ್ದ (Sexually arousing) ಆರೋಪದ ಅಡಿಯಲ್ಲಿ ಆರು ವಿದೇಶಿ ಮಹಿಳೆಯರನ್ನು ಬಂಧಿಸಲಾಗಿದೆ.

[ccc_my_favorite_select_button post_id="121454"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಹೆಲ್ಮೆಟ್ ಕಡ್ಡಾಯ ಜಾರಿ ಮಾಡಿ, ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್

[ccc_my_favorite_select_button post_id="121414"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]