ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇಂದು (ಅಕ್ಟೋಬರ್ 7 ರಂದು) 126 ಪುರುಷರು ಹಾಗೂ 63 ಮಹಿಳೆಯರು ಸೇರಿದಂತೆ 189 ಜನರಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಇಲಾಖೆಯ ಬುಲೆಟಿನ್ ವರದಿ ತಿಳಿಸಿದೆ.
ವರದಿಯನ್ವಯ ಜಿಲ್ಲೆಯ ನೆಲಮಂಗಲ ತಾಲ್ಲೂಕಿನಲ್ಲಿ 27 ಪುರುಷರು ಮತ್ತು 18 ಮಹಿಳೆಯರು, ಹೊಸಕೋಟೆ ತಾಲ್ಲೂಕಿನಲ್ಲಿ 31 ಪುರುಷರು ಮತ್ತು 12 ಮಹಿಳೆಯರು, ದೇವನಹಳ್ಳಿ ತಾಲ್ಲೂಕಿನಲ್ಲಿ 22 ಪುರುಷರು ಮತ್ತು 10 ಮಹಿಳೆಯರು, ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 43 ಪುರುಷರು ಮತ್ತು 22 ಮಹಿಳೆಯರು ಹಾಗೂ ಬೆಂಗಳೂರು ನಗರ ಜಿಲ್ಲೆ ಹಾಗೂ ಇತರೆ ಜಿಲ್ಲೆಗಳಿಗೆ ಸೇರಿದ 3 ಪುರುಷರು ಮತ್ತು 1 ಮಹಿಳೆಗೆ ಕೋವಿಡ್ ಸೋಂಕು ದೃಢಪಟ್ಟಿದೆ ಎನ್ನಲಾಗಿದೆ.
ಉಳಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 85 ವರ್ಷದ ವೃದ್ಧ ಹಾಗೂ ನೆಲಮಂಗಲ ತಾಲ್ಲೂಕಿನಲ್ಲಿ 40 ವರ್ಷದ ಪುರುಷರೊಬ್ಬರೂ ಕೋವಿಡ್-19 ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ.

