ದೊಡ್ಡಬಳ್ಳಾಪುರದಲ್ಲಿ ಮಿಯವಾಕಿ ಮಾದರಿ ಕಿರು ಅರಣ್ಯ..!

ದೊಡ್ಡಬಳ್ಳಾಪುರ: ಜಪಾನ್ ದೇಶದ ಮಿಯವಾಕಿ ಎಂಬ ಪರಿಸರ ತಜ್ಞ ನಗರ ಪ್ರದೇಶಗಳಲ್ಲಿ ಕಡಿಮೆ ಜಾಗದಲ್ಲಿ ಕಿರು ಅರಣ್ಯ ಬೆಳೆಸುತ್ತಿದ್ದರು. ಅತ್ಯಲ್ಪ ಸ್ಥಳದಲ್ಲಿ ನಿರೀಕ್ಷೆಗೂ ಮೀರಿ ಗಿಡಗಳನ್ನು ಬೆಳೆಸಲಾಗಿತ್ತು. ಈ ಮಾದರಿ ಯಶಸ್ಸು ಕಂಡ ಹಿನ್ನೆಲೆಯಲ್ಲಿ ಇತರ ನಗರಗಳಿಗೂ ವ್ಯಾಪಿಸಿದೆ. ಕಿರು ಅರಣ್ಯ ನಿರ್ಮಾಣ ಹೆಚ್ಚಾದಂತೆ ‘ಮಿಯವಾಕಿ ವಿಧಾನ’ ಎಂದೇ ಕರೆಯಲಾಗುತ್ತಿದೆ ಎಂದು ಯುವ ಸಂಚಲ ಅಧ್ಯಕ್ಷ ಚಿದಾನಂದ್‌ ಹೇಳಿದರು.

ಅವರು ತಾಲ್ಲೂಕಿನ ಸೂಲುಕುಂಟೆ ಗ್ರಾಮದ ಮಿತ್ರ ಫೌಂಡೇಷನ್‌ನ ಯುವರಾಜ್‌ ಎಂಬುವರರ ಕೃಷಿ ಭೂಮಿಯಲ್ಲಿ ವಿಯವಾಂಕಿ ಕಿರು ಅರಣ್ಯ ಬೆಳೆಸುವ ಉದ್ದೇಶದಿಂದ ಸಸಿಗಳ ನಾಟಿ ಆರಂಭಿಸಿರುವ ಕುರಿತು ಮಾಹಿತಿ ನೀಡಿದರು.

ಸುಮಾರು ಮೂರು ಗುಂಟೆ ಜಮೀನಿನಲ್ಲಿ 91 ವಿವಿಧ ಜಾತಿಯ 840 ಸಸಿಗಳನ್ನು ನಾಟಿ ಮಾಡಲಾಗಿದೆ. ಮಣ್ಣಿನ ಗುಣವನ್ನು ಪರಿಶೀಲನೆ ಮಾಡಿಕೊಂಡು ಭೂಮಿಗೆ ಕೊಟ್ಟಿಗೆ ಗೊಬ್ಬರ, ಹಸಿರು ಎಲೆಯನ್ನು ಹಾಕಿ ಸಾವಯವ ಪದಾರ್ಥಗಳನ್ನು ಮಣ್ಣಿಗೆ ಸೇರಿಸುವ ಮೂಲಕ ಪೋಷಕಾಂಶಗಳ ಕೊರತೆ ನೀಗಿಸಲಾಗಿದೆ. ಒಂದು ಚದರ ಮೀಟರ್ ವ್ಯಾಪ್ತಿಯಲ್ಲಿ 3 ರಿಂದ 4 ಗುಂಡಿಗಳನ್ನು ತೆಗೆದು ಗಿಡ ನೆಡಲಾಗಿದೆ. ಕಡಿಮೆ ಜಾಗದಲ್ಲಿ ಹೆಚ್ಚು ಗಿಡಗಳನ್ನು ಬೆಳೆಸುವುದು ‘ಮಿಯವಾಕಿ’ ವಿಶೇಷ. ಸಾಮಾನ್ಯವಾಗಿ ಸಸಿಗಳನ್ನು ಅತಿ  ಎತ್ತರ ಬೆಳೆಯುವ, ಸಾಧಾರಣ ಎತ್ತರ ಬೆಳೆಯುವ ಹಾಗೂ ಪೊದೆ ರೀತಿ ಬೆಳೆಯುವ ಸಸಿಗಳಾಗಿ ವಿಂಗಡಿಸಿ ನಾಟಿ ಮಾಡಲಾಗಿದೆ. ಎರಡು ವರ್ಷ ನೀರುಹಾಕಿ ಗಿಡಗಳನ್ನು ಪೋಷಿಸಿದರೆ ಸಾಕು ನಮಗೇ ಗೊತ್ತಿಲ್ಲದಂತೆ ಪುಟ್ಟದೊಂದು ಅರಣ್ಯ ನಿರ್ಮಾಣವಾಗುತ್ತದೆ ಎಂದರು.

ಈ ಪ್ರಯೋಗವು ಮುಂಬೈನಲ್ಲಿ ಈಗಾಗಲೇ ಯಶಸ್ವಿಯಾಗಿದ್ದು ಬೆಂಗಳೂರಿನ ಕೆ.ಆರ್.ಪುರಂ ನಲ್ಲಿರುವ ನೈರುತ್ಯ ರೈಲ್ವೆ ಹಿರಿಯ ವಿಭಾಗೀಯ ಯಾಂತ್ರಿಕ ಅಭಿಯಂತರ ಕಚೇರಿ ಆವರಣದಲ್ಲಿ ಬೆಳೆಸಿ ಯಶಸ್ವಿಯಾಗಿದ್ದಾರೆ. ಇಂತಹ ಒಂದು ಪ್ರಯೋಗವನ್ನು ನಮ್ಮ ತಾಲ್ಲೂಕಿನ ಸೂಲುಕುಂಟೆ ಗ್ರಾಮದ  ಮಿತ್ರ ಫೌಂಡೇಶನ್ ಅನುಷ್ಠಾನಗೊಳಿಸಿದ್ದಾರೆ. ಇಲ್ಲಿ ನಾಟಿ ಮಾಡಿರುವ 91 ವಿವಿಧ ಪ್ರಭೇದದ ಸಸಿಗಳನ್ನು ಬಿಳಿಗಿರಿರಂಗನ ಬೆಟ್ಟದ ಸಮೀಪದಲ್ಲಿನ ನರ್ಸರಿಯಿಂದ ಹಾಗೂ ಸ್ಥಳೀಯವಾಗಿ ಬೆಳೆಯುವ ಸಸಿಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ ಎಂದರು.

ಮಿತ್ರ ಫೌಂಡೇಷನ್‌ನ ಯುವರಾಜ್‌ ಮಾಹಿತಿ ನೀಡಿ, ನಮ್ಮಲ್ಲಿ ಅರಣ್ಯ ಅಂದರೆ ನೂರಾರು ಎಕರೆ ಪ್ರದೇಶದಲ್ಲಿ ಬೆಳೆದಿರುವುದು ಮಾತ್ರ ಎನ್ನುವ ಕಲ್ಪನೆ ಇದೆ. ಆದರೆ ನಮ್ಮ ಕೃಷಿ ಜಮೀನಿನಲ್ಲೂ ವಿಯವಾಂಕಿ ಮಾದರಿಯಲ್ಲಿ ಕಿರು ಅರಣ್ಯವನ್ನು ಬೆಳೆಸುವುದರಿಂದ ನಮ್ಮ ಜಮೀನಿನಲ್ಲಿ ಬೆಳೆಯುವ ಇತರೆ ಬೆಳೆಗಳಿಗೆ ಬರುವ ಕೀಟಗಳ ಹಾವಳಿ ನಿಯಂತ್ರಣವಾಗುತ್ತದೆ. ಕಿರು ಅರಣ್ಯದಲ್ಲಿ ವಿವಿಧ ಬಗೆಯ ಔಷಧಿಯ ಗುಣವನ್ನು ಹೊಂದಿರುವ ಸಸಿಗಳು ಇರುವುದರಿಂದ ಬಿಡುವಿನ ವೇಳೆಯಲ್ಲಿ ಕುಳಿತು ಕಾಲ ಕಳೆಯುವುದರಿಂದ ನಮ್ಮ ಆರೋಗ್ಯವು ಸುಧಾರಣೆಯಾಗಲಿದೆ ಎಂದರು.

ರಾಜಕೀಯ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8 ರಂದು ಜೆಡಿಎಸ್ (JDS) ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ದೊಡ್ಡಬಳ್ಳಾಪುರಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ, ನಾಳೆ (ಏ.28) ರಂದು ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ ಎಂದು ಜೆಡಿಎಸ್ ದೊಡ್ಡಬಳ್ಳಾಪುರ

[ccc_my_favorite_select_button post_id="121433"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ ತಾಲೂಕು ವಕೀಲರ ಸಂಘ ಹಾಗೂ ನ್ಯಾಯಾಂಗ ಇಲಾಖೆಯಿಂದ ವಾರ್ಷಿಕ ಕ್ರೀಡಾಕೂಟ 2026-27ರ (Annual sports event) ಪ್ರಶಸ್ತಿ ವಿತರಣೆ ಕಾರ್ಯಕ್ರಮ (Awards ceremony) ನಗರದ ವಕೀಲರ ಭವನದಲ್ಲಿ ಆಯೋಜಿಸಲಾಗಿತ್ತು.

[ccc_my_favorite_select_button post_id="121459"]
ರಸ್ತೆಬದಿಯಲ್ಲಿ ನಿಂತು ಲೈಂಗಿಕ ಕ್ರಿಯೆಗೆ ಪ್ರಚೋದನೆ: 6 ವಿದೇಶಿ ಯುವತಿಯರ ಬಂಧನ..!

ರಸ್ತೆಬದಿಯಲ್ಲಿ ನಿಂತು ಲೈಂಗಿಕ ಕ್ರಿಯೆಗೆ ಪ್ರಚೋದನೆ: 6 ವಿದೇಶಿ ಯುವತಿಯರ ಬಂಧನ..!

ರಸ್ತೆಯಲ್ಲಿ ನಿಂತ ಆರು ಯುವತಿಯರು ಪುರುಷರನ್ನು ಲೈಂಗಿಕ ಕ್ರಿಯೆಗೆ ಪ್ರಚೋದಿಸುತ್ತಿದ್ದ (Sexually arousing) ಆರೋಪದ ಅಡಿಯಲ್ಲಿ ಆರು ವಿದೇಶಿ ಮಹಿಳೆಯರನ್ನು ಬಂಧಿಸಲಾಗಿದೆ.

[ccc_my_favorite_select_button post_id="121454"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಹೆಲ್ಮೆಟ್ ಕಡ್ಡಾಯ ಜಾರಿ ಮಾಡಿ, ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್

[ccc_my_favorite_select_button post_id="121414"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]