ಹಾಸನ: ಕರೊನಾ ಹಾವಳಿ ಹಿನ್ನೆಲೆಯಲ್ಲಿ ಈ ಬಾರಿ ಹಾಸನಾಂಬ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶ ಇಲ್ಲ ಎಂದು ಜಿಲ್ಲಾ ಉಸ್ತುವರಿ ಸಚಿವ ಕೆ.ಗೋಪಾಲಯ್ಯ ಸ್ಪಷ್ಟಪಡಿಸಿದರು .
ಪ್ರತಿವರ್ಷದಂತೆ ಹಾಸನಾಂಬ ದರ್ಶನಕ್ಕೆ ಅವಕಾಶ ನೀಡದೆ ದೇವಸ್ಥಾನದ ತರೆಯುವ ನ.೫ ರಂದು ಮಾತ್ರ ವಿವಿಐಪಿಗಳಿಗೆ ದರ್ಶನ ಅವಕಾಶ ಕಲ್ಪಿಸಲಾಗಿದೆ . ದೇವಸ್ಥಾನದಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳಿಗೆ ಕೊರೋನಾ ನೆಗೆಟಿವ್ ವರದಿ ಕಡ್ಡಾಯ ಎಂದು ತಿಳಿಸಿದರು
ನಗರದ 12 ಕಡೆ ದೊಡ್ಡ ಪರದೆಯ ಮೂಲಕ ಹಾಸನಾಂಬೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು ಸಾರ್ವಜನಿಕರ ದರ್ಶನಕ್ಕೆ ಅವಕಾಶ ನೀಡಿದರೆ ಕೊರೊನಾ ಸೋಂಕು ಹರಡುವ ಸಾಧ್ಯತೆ ಹೆಚ್ಚಿದ್ದು ಈ ಹಿನ್ನಲೆಯಲ್ಲಿ ಇಂತಹ ಕ್ರಮ ವಹಿಸಲಾಗಿದೆ ಎಂದು ಸಚಿವರು ತಿಳಿಸಿದರು.
ಹಾಸನಾಂಬ ದರ್ಶನಾರಂಭ ದಿನ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಉದ್ಘಾಟನೆ ಮಾಡಲಿದ್ದಾರೆ ಇದೇ ವೇಳೆ ತಿಳಿಸಿದರು.
ಕರೊನಾ ಕಾರಣ ಸಾರ್ವಜನಿಕವಾಗಿ ಹಾಸನಾಂಬ ದರ್ಶನ ಇರುವುದಿಲ್ಲ ಇದಕ್ಕೆ ಸಾರ್ವಜನಿಕರು ಹಾಗೂ ಭಕ್ತಾದಿಗಳು ಸಹಕರಿಸಬೇಕು ಎಂದು ಸಚಿವರು ಮನವಿ ಮಾಡಿದರು.

