ಮೋದಿ, ಬಿಎಸ್ ವೈ ಕರೊನಾಗಿಂತ ಅಪಾಯಕಾರಿ: ಸಿದ್ದರಾಮಯ್ಯ ವಿವಾದಾತ್ಮಕ ಹೇಳಿಕೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ದೇಶಕ್ಕೆ ಮತ್ತು ರಾಜ್ಯಕ್ಕೆ ಕರೊನಾ ಸೋಂಕ್ಕಿಗಿಂತಲೂ ಅಪಾಯಕಾರಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿವಾದಾತ್ಮಕ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕರೊನಾ ಸೋಂಕು ಹೆಚ್ಚಳವಾಗುತ್ತಿರುವ ಕುರಿತು ಅಭಿಪ್ರಾಯ ವ್ಯಕ್ತಪಡಿಸಿರುವ ಅವರು, ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಕರೊನಾ ಸೋಂಕಿನಲ್ಲಿ ಭಾರತವನ್ನು ವಿಶ್ವದ ನಂಬರ್ ಒನ್ ದೇಶವನ್ನಾಗಿ ಮಾಡುವ ಧಾವಂತದಲ್ಲಿದ್ದರೆ, ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಕೊರೊನಾ ಸೋಂಕಿನಲ್ಲಿ ಕರ್ನಾಟಕವನ್ನು ದೇಶದ ನಂಬರ್ ಒನ್ ಮಾಡುವ ಉತ್ಸಾಹದಲ್ಲಿದ್ದಾರೆ. ದೇಶಕ್ಕೆ ಮತ್ತು ರಾಜ್ಯಕ್ಕೆ ಕರೊನಾಕ್ಕಿಂತಲೂ ಅಪಾಯಕಾರಿ ಎಂದಿದ್ದಾರೆ.

ಕರೊನಾ ಸೋಂಕಿನಲ್ಲಿ ಅಮೆರಿಕ ಮೊದಲ ಸ್ಥಾನದಲ್ಲಿದ್ದರೆ ಭಾರತ ಎರಡನೇ ಸ್ಥಾನದಲ್ಲಿದೆ. ದೇಶದಲ್ಲಿ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದ್ದರೆ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ತಮ್ಮ ದುರಾಡಳಿತದ ಮೂಲಕ ಈ ಜೋಡಿ ದೇಶವನ್ನು ಮತ್ತು ರಾಜ್ಯವನ್ನು ಕರೊನಾ ಸೋಂಕಿನಲ್ಲಿ ಮೊದಲ ಸ್ಥಾನಕ್ಕೇರಿಸಲು ಪಣತೊಟ್ಟಂತಿದೆ. 

ರಾಜ್ಯದಲ್ಲಿ ಪ್ರತಿದಿನ ಕರೊನಾ ಸೋಂಕಿನ ಸರಾಸರಿ 10,000 ಪ್ರಕರಣಗಳು ದಾಖಲಾಗುತ್ತಿವೆ. ಸರಾಸರಿ 100 ಸಾವುಗಳಾಗುತ್ತಿವೆ. ಇಲ್ಲಿಯವರೆಗೆ 6.68 ಲಕ್ಷ ಜನರಿಗೆ ಕೊರೊನಾ ಸೋಂಕು ತಗಲಿದೆ. 1.16 ಲಕ್ಷಕ್ಕೂ ಅಧಿಕ ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ,. ಬಿ.ಎಸ್.ಯಡಿಯೂರಪ್ಪ ಸರ್ಕಾರಕ್ಕೇ ಕೊರೊನಾ ಸೋಂಕು ಬಡಿದಂತಿದೆ. 

ರಾಜ್ಯದಲ್ಲಿ ಕರೊನಾ ಉಲ್ಭಣಗೊಳ್ಳಲು ಜನರ ನಿರ್ಲಕ್ಷ್ಯ ಕಾರಣ ಎಂಬ ಅತಿಪ್ರಚಾರದ ಮೂಲಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸರ್ಕಾರ ಕೊರೊನಾ ನಿಯಂತ್ರಣದಲ್ಲಿನ ತನ್ನ ವೈಫಲ್ಯವನ್ನು ಮುಚ್ಚಿಹಾಕಲು ಪ್ರಯತ್ನಿಸುತ್ತಿರುವುದು ನಾಚಿಕೆಗೇಡಿನ ಸಂಗತಿ. 

ತನ್ನ ಆಡಳಿತದ ವೈಫಲ್ಯದಿಂದಾಗಿ ಖಾಲಿಯಾಗಿರುವ ಖಜಾನೆ ತುಂಬಿಸಲು ಮದ್ಯದಂಗಡಿಯಿಂದ ಮಾಲ್ ವರೆಗೆ, ದೇವಸ್ಥಾನಗಳಿಂದ ಹೊಟೇಲ್ ಗಳ ವರೆಗೆ ಎಲ್ಲವನ್ನು ತೆರೆದಿಟ್ಟು ಜನರನ್ನು ಕೈಬೀಸಿ ಕರೆಯುತ್ತಿರುವ ರಾಜ್ಯ ಸರ್ಕಾರ ಕೊರೊನಾ ಉಲ್ಭಣಗೊಳ್ಳಲು ಜನತೆಯೇ ಕಾರಣ ಎಂದು ದೂಷಿಸುತ್ತಿರುವುದು ಜನತೆಗೆ ಬಗೆಯುತ್ತಿರುವ ದ್ರೋಹ. 

ಕರೊನಾ ಸೋಂಕಿನಿಂದಾಗಿ ಸಾವು-ನೋವು ಹೆಚ್ಚಲು ಮುಖ್ಯ ಕಾರಣ ವೈದ್ಯಕೀಯ ಚಿಕಿತ್ಸಾ ವ್ಯವಸ್ಥೆಯಲ್ಲಿನ ವೈಫಲ್ಯ. ಕೊರೊನಾ ಸೋಂಕಿತರಿಗೆ ಸರ್ಕಾರಿ ಆಸ್ಪತ್ರೆ ಮೇಲೆ ನಂಬಿಕೆ ಇಲ್ಲ, ಖಾಸಗಿ ಆಸ್ಪತ್ರೆಗೆ ಹೋಗಲು ಕೈಯಲ್ಲಿ ದುಡ್ಡಿಲ್ಲ. ಇದರಿಂದಾಗಿ ಪರೀಕ್ಷೆ ಮಾಡಿಕೊಳ್ಳದೆ, ಸರಿಯಾದ ಚಿಕಿತ್ಸೆ ಪಡೆಯದೆ ನಿರ್ಲಕ್ಷಿಸುತ್ತಿದ್ದಾರೆ. ಕರೊನಾ ಸೋಂಕು ರಾಜ್ಯದಲ್ಲಿ ಉಲ್ಭಣಗೊಳ್ಳಲು ರಾಜ್ಯ ಸರ್ಕಾರದ ಬ್ರಹ್ಮಾಂಡ ಭ್ರಷ್ಟಾಚಾರವೇ ಕಾರಣ. ಕೊರೊನಾ ಸೋಂಕನ್ನು ಜನರ ಸೇವೆ ಮಾಡಲು ಅವಕಾಶ ಎಂದು ಭಾವಿಸದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟ, ಇದು ದುಡ್ಡು ಮಾಡಲು ಒದಗಿಬಂದ ಸುವರ್ಣಾವಕಾಶ ಎಂದು ತಿಳಿದದ್ದೇ ಇಂದಿನ ದುಸ್ಥಿತಿಗೆ ಕಾರಣ. 

ಮೊದಲ ದಿನದಿಂದಲೇ ತಪ್ಪು ನೀತಿಗಳು, ಅನಿಶ್ಚಿತ ನಿರ್ಧಾರಗಳು, ತಿದ್ದಿತಿರುಚಿದ ಅಂಕಿಅಂಶಗಳು, ಮುಖ್ಯಮಂತ್ರಿಗಳು ಮತ್ತು ಸಚಿವರ ನಿಷ್ಕ್ರಿಯತೆ ಮತ್ತು ಬ್ರಹ್ಮಾಂಡ ಭ್ರಷ್ಟಾಚಾರವೇ ಕರ್ನಾಟಕದ ಇಂದಿನ ದುಸ್ಥಿತಿಗೆ ಕಾರಣ. ಲಾಕ್ ಡೌನ್ ಹೇರಿಕೆಯಿಂದ ಇಲ್ಲಿಯ ವರೆಗೆ ರಾಜ್ಯ ಸರ್ಕಾರಕ್ಕೆ ಕೊರೊನಾ ನಿಯಂತ್ರಣದ ಬಗ್ಗೆ ಸ್ಪಷ್ಟತೆ ಇಲ್ಲ. ಅಜ್ಞಾನ, ಸುಳ್ಳು ಮತ್ತು ಮತ್ತು ಭ್ರಷ್ಟಾಚಾರ ಕೊರೊನಾಕ್ಕಿಂತಲೂ ಅಪಾಯಕಾರಿ.

ಯಾವ ಖಾಸಗಿ ಆಸ್ಪತ್ರೆಗಳು ಕೂಡಾ ಸರ್ಕಾರ ನಿಗದಿಪಡಿಸಿರುವಷ್ಟು ಹಾಸಿಗೆಗಳನ್ನು ನೀಡುತ್ತಿಲ್ಲ, ಸರ್ಕಾರ ನಿಗದಿಪಡಿಸಿರುವ ಚಿಕಿತ್ಸಾ ವೆಚ್ಚದ ಮಿತಿಯನ್ನು ಪಾಲಿಸುತ್ತಿಲ್ಲ. ಸಚಿವರ ಹೇಳಿಕೆಗಳು ಮಾಧ್ಯಮಗಳಿಗಷ್ಟೇ ಸೀಮಿತ. ಖಾಸಗಿ ಆಸ್ಪತ್ರೆಗಳ ಧಣಿಗಳ ಋಣಕ್ಕೆ ಬಿದ್ದಿರುವ ಸರ್ಕಾರಕ್ಕೆ ಅವರನ್ನು ನಿಯಂತ್ರಿಸುವ ಶಕ್ತಿಯೂ ಇಲ್ಲ. ಒಳಗಿಂದೊಳಗೆ ಎಲ್ಲರೂ ಷಾಮೀಲಾಗಿದ್ದಾರೆ. 

ರಾಜ್ಯದಲ್ಲಿ ಬಿಬಿಎಂಪಿ ವ್ಯಾಪ್ತಿಯ 303 ಕೊರೊನಾ ಸೋಂಕಿತರು ಸೇರಿದಂತೆ 841 ಸೋಂಕಿತರು ವೆಂಟಿಲೇಟರ್ ನಲ್ಲಿದ್ದಾರೆ ಎಂದು ಆರೋಗ್ಯ ಇಲಾಖೆ ಹೇಳಿದರೆ, ತನ್ನ ವ್ಯಾಪ್ತಿಯಲ್ಲಿಯೇ 957 ಸೋಂಕಿತರು ವೆಂಟಿಲೇಟರ್ ನಲ್ಲಿದ್ದಾರೆ ಎಂದು ಬಿಬಿಎಂಪಿ ಹೇಳುತ್ತಿದೆ. ರಾಜ್ಯ ಸರ್ಕಾರ ತನ್ನ ವೈಫಲ್ಯವನ್ನು ಮುಚ್ಚಿಹಾಕಲು ಸುಳ್ಳಿನ ಮೊರೆ ಹೋಗುತ್ತಿರುವುದಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕೇ?

ಕಳೆದ ಆರು ತಿಂಗಳಲ್ಲಿ ಕರೊನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಕೈಗೊಂಡ ಕ್ರಮಗಳೇನು ಎಂಬುದನ್ನು ಸತ್ಯನಿಷ್ಠವಾಗಿ ಜನತೆಯ ಮುಂದಿಡುವ ಧೈರ್ಯ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಇದೆಯೇ?ಸರ್ಕಾರಿ ಆಸ್ಪತ್ರೆಗಳಲ್ಲಿ ಎಷ್ಟು ಹಾಸಿಗೆ ಸಾಮರ್ಥ್ಯ ಹೆಚ್ಚಿಸಿದ್ದೀರಿ? ಹೊಸದಾಗಿ ಎಷ್ಟು ಆಮ್ಲಜನಕ ಪೂರೈಕೆಯ ಹಾಸಿಗೆಗಳನ್ನು ಮಾಡಿದ್ದೀರಿ? ಹೊಸದಾಗಿ ಖರೀದಿಸಿದ ವೆಂಟಿಲೇಟರ್ ಗಳೆಷ್ಟು? ಎನ್ನುವುದನ್ನು ತಿಳಿಸುವಿರಾ ಮುಖ್ಯಮಂತ್ರಿಗಳೇ ಎಂದು ಪ್ರಶ್ನಿಸಿದ್ದಾರೆ.

ರಾಜಕೀಯ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8 ರಂದು ಜೆಡಿಎಸ್ (JDS) ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ದೊಡ್ಡಬಳ್ಳಾಪುರಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ, ನಾಳೆ (ಏ.28) ರಂದು ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ ಎಂದು ಜೆಡಿಎಸ್ ದೊಡ್ಡಬಳ್ಳಾಪುರ

[ccc_my_favorite_select_button post_id="121433"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ ತಾಲೂಕು ವಕೀಲರ ಸಂಘ ಹಾಗೂ ನ್ಯಾಯಾಂಗ ಇಲಾಖೆಯಿಂದ ವಾರ್ಷಿಕ ಕ್ರೀಡಾಕೂಟ 2026-27ರ (Annual sports event) ಪ್ರಶಸ್ತಿ ವಿತರಣೆ ಕಾರ್ಯಕ್ರಮ (Awards ceremony) ನಗರದ ವಕೀಲರ ಭವನದಲ್ಲಿ ಆಯೋಜಿಸಲಾಗಿತ್ತು.

[ccc_my_favorite_select_button post_id="121459"]
ರಸ್ತೆಬದಿಯಲ್ಲಿ ನಿಂತು ಲೈಂಗಿಕ ಕ್ರಿಯೆಗೆ ಪ್ರಚೋದನೆ: 6 ವಿದೇಶಿ ಯುವತಿಯರ ಬಂಧನ..!

ರಸ್ತೆಬದಿಯಲ್ಲಿ ನಿಂತು ಲೈಂಗಿಕ ಕ್ರಿಯೆಗೆ ಪ್ರಚೋದನೆ: 6 ವಿದೇಶಿ ಯುವತಿಯರ ಬಂಧನ..!

ರಸ್ತೆಯಲ್ಲಿ ನಿಂತ ಆರು ಯುವತಿಯರು ಪುರುಷರನ್ನು ಲೈಂಗಿಕ ಕ್ರಿಯೆಗೆ ಪ್ರಚೋದಿಸುತ್ತಿದ್ದ (Sexually arousing) ಆರೋಪದ ಅಡಿಯಲ್ಲಿ ಆರು ವಿದೇಶಿ ಮಹಿಳೆಯರನ್ನು ಬಂಧಿಸಲಾಗಿದೆ.

[ccc_my_favorite_select_button post_id="121454"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಹೆಲ್ಮೆಟ್ ಕಡ್ಡಾಯ ಜಾರಿ ಮಾಡಿ, ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್

[ccc_my_favorite_select_button post_id="121414"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]