ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇಂದು (ಅಕ್ಟೋಬರ್ 8 ರಂದು) 222 ಪುರುಷರು ಹಾಗೂ 146 ಮಹಿಳೆಯರು ಸೇರಿದಂತೆ 368 ಜನರಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಇಲಾಖೆಯ ಬುಲೆಟಿನ್ ವರದಿ ತಿಳಿಸಿದೆ.
ವರದಿಯನ್ವಯ ನೆಲಮಂಗಲ ತಾಲ್ಲೂಕಿನಲ್ಲಿ 52 ಪುರುಷರು ಮತ್ತು 39 ಮಹಿಳೆಯರು, ಹೊಸಕೋಟೆ ತಾಲ್ಲೂಕಿನಲ್ಲಿ 57 ಪುರುಷರು ಮತ್ತು 27 ಮಹಿಳೆಯರು, ದೇವನಹಳ್ಳಿ ತಾಲ್ಲೂಕಿನಲ್ಲಿ 46 ಪುರುಷರು ಮತ್ತು 32 ಮಹಿಳೆಯರು, ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 62 ಪುರುಷರು ಮತ್ತು 46 ಮಹಿಳೆಯರು ಹಾಗೂ ಬೆಂಗಳೂರು ನಗರ ಜಿಲ್ಲೆ ಹಾಗೂ ಇತರೆ ಜಿಲ್ಲೆಗಳಿಗೆ ಸೇರಿದ 5 ಪುರುಷರು ಮತ್ತು 2 ಮಹಿಳೆಯರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.
*ಒಂದು ಸಾವು*
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 90 ವರ್ಷದ ವೃದ್ದರೊಬ್ಬರು ಕೋವಿಡ್-19 ಸೋಂಕಿನಿಂದ ಪಟ್ಟಿದ್ದಾರೆ( ಈ ಸಾವಿನ ವರದಿ ದೊಡ್ಡಬಳ್ಳಾಪುರ ತಾಲೂಕು ಆಡಳಿತ ಬುಧವಾರ ನೀಡಿದ ಮಾಹಿತಿಯದ್ದಾಗಿದೆ )

