ಕರೊನಾ ಸೋಂಕು ನಿಯಂತ್ರಣಕ್ಕೆ ಗ್ರಾಪಂಗಳಿಗೆ ಅನುದಾನ ನೀಡದ ಸರ್ಕಾರದ ವಿರುದ್ದ ದೊಡ್ಡಬಳ್ಳಾಪುರ ತಾಪಂ ಅಧ್ಯಕ್ಷೆ ರತ್ನಮ್ಮಜಯರಾಂ ಬೇಸರ

ದೊಡ್ಡಬಳ್ಳಾಪುರ: ತೀವ್ರಗೊಳ್ಳುತ್ತಿರುವ ಕರೊನಾ ಸೋಂಕು ತಡೆಗೆ ಗ್ರಾಮಪಂಚಾಯಿತಿಗಳಿಗೆ ಸರ್ಕಾರ ಅನುದಾನ ನೀಡದ ಕಾರಣ, ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ತಾಲೂಕು ಪಂಚಾಯಿತಿ ಅಧ್ಯಕ್ಷೆ ರತ್ನಮ್ಮಜಯರಾಂ ಸರ್ಕಾರದ ಬೇಸರ ವ್ಯಕ್ತಪಡಿಸಿದ್ದಾರೆ.

ತಾಲೂಕಿನಲ್ಲಿ ಕರೊನಾ ಸೋಂಕಿತರ ಸಾವಿನ ಸಂಖ್ಯೆ 100ರ ಗಡಿ ದಾಟುತ್ತಿರುವ ಹಿನ್ನೆಲೆಯಲ್ಲಿ  ತಾಪಂ ವತಿಯಿಂದ ಕೈಗೊಳ್ಳಲಾದ ಕ್ರಮಗಳ ಕುರಿತು ಹರಿತಲೇಖನಿಯೊಂದಿಗೆ ಮಾತನಾಡಿರುವ ಅವರು, ಕರೊನಾ ಸೋಂಕು ತಡೆಗಟ್ಟಲು ಘೋಷಿಸಲಾದ ಲಾಕ್ ಡೌನ್ ಹಿನ್ನೆಲೆ ಗ್ರಾಪಂ ವ್ಯಾಪ್ತಿಯಲ್ಲಿ ಕರ ವಸೂಲಿಯಾಗದ ಕಾರಣ ಗ್ರಾಮಪಂಚಾಯಿತಿಗಳು  ಅನುದಾನದ ಕೊರತೆ ಎದುರಿಸುತ್ತಿವೆ. ಕೆಲ ಗ್ರಾಮಪಂಚಾಯಿತಿ ಹೊರತು ಪಡಿಸಿ ಬಹುತೇಕ ಗ್ರಾಮಪಂಚಾಯಿತಿಗಳಲ್ಲಿ ಸಿಬ್ಬಂದಿಗಳಿಗೆ ವೇತನ ನೀಡಲು ಸಹ ಸಾಧ್ಯವಾಗುತ್ತಿಲ್ಲ. ಇದರ ನಡುವೆ ಕರೊನಾ ನಿಯಂತ್ರಣಕ್ಕೆ ಔಷಧ ಸಿಂಪಡಣೆ ಮತ್ತಿತರ ಮುಂಜಾಗ್ರತಾ ತೀವ್ರ ಸಮಸ್ಯೆಯಾಗಿದೆ. ಆದರೂ ಸರ್ಕಾರ ಗ್ರಾಮಪಂಚಾಯಿತಿಗಳಿಗೆ ಅನುದಾನ ನೀಡಲು‌ ಮುಂದಾಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇಷ್ಟೆಲ್ಲ ಸಮಸ್ಯೆಗಳು ಇದ್ದರು ಮಹಾಮಾರಿ ಕರೊನಾ ತಡೆಗಟ್ಟುವುದು ನಮ್ಮ ಜವಬ್ದಾರಿ ಈ ನಿಟ್ಟಿನಲ್ಲಿ ನಿರಂತವಾಗಿ ಗ್ರಾಪಂ ಪಿಡಿಒ ಹಾಗೂ ಅಡಳಿತ ಅಧಿಕಾರಿಗಳ ಸಭೆ ನಡೆಸಿ ಸಾಧ್ಯವಾಗುವ ಅನುದಾನದಲ್ಲಿ ಕರೊನಾ ನಿಯಂತ್ರಣಕ್ಕೆ ಕ್ರಮಕೈಗೊಳ್ಳಲಾಗುತ್ತಿದೆ.

ಗ್ರಾಮಗಳಲ್ಲಿ ಸ್ವಚ್ಚತೆ ಕ್ರಮ, ಶುದ್ದಕುಡಿಯುವ ನೀರಿನ ಘಟಕಗಳ ನಿರ್ವಹಣೆಗೆ ಸೂಚನೆ, ಬೇಸಿಗೆ ಆರಂಭವಾಗಲಿರುವ ಹಿನ್ನೆಲೆ ಕುಡಿಯುವ ನೀರಿಗೆ ತೊಂದರೆ ಉಂಟಾಗದಂತೆ ನೀರಿನ ಕೊರತೆ ಉಂಟಾಗಲಿರುವ ಗ್ರಾಮಗಳ ಪಟ್ಟಿ ರಚಿಸಿ. ಬೋರ್ ವೆಲ್ ಕೊರೆಸುವುದು ಮತ್ತಿತರ ಪರ್ಯಾಯ ಮಾರ್ಗಗಳ ಸಿದ್ದತೆ, ಲಾಕ್ ಡೌನ್ ನಿಂದ ಸಮಸ್ಯೆಗೆ ಒಳಗಾಗಿರುವ ಜನತೆಗೆ ಉದ್ಯೋಗ ದೊರಕಿಸಲು ನರೇಗಾ ಯೋಜನೆಯಡಿಯಲ್ಲಿ  ಹೆಚ್ಚು ಕಾಮಗಾರಿ ನಡೆಸಿ ಉದ್ಯೋಗ ದೊರಕಿಸಲು ತಾಲೂಕು ಪಂಚಾಯತಿವತಿಯಿಂದ ಕ್ರಮ ಕೈಗೊಳ್ಳಲಾಗಿದೆ ಎಂದರು.

ಜಗತ್ತನೆ ಕಾಡುತ್ತಿರುವ ಕರೊನಾ ಸೋಂಕು ತಡೆಗಟ್ಟಲು ತಾಲೂಕಿನ ಜನತೆಯ ಸಹಕಾರ ಅಗತ್ಯವಾಗಿದ್ದು, ಸಾಮಾಜಿಕ ಅಂತರ ಕಾಪಾಡುವುದು, ಕಡ್ಡಾಯವಾಗಿ ಮಾಸ್ಕ ಧರಸುವುದು, ಸೋಂಕಿನ ಲಕ್ಷಣ ಕಂಡು ಬಂದರೆ ಕೂಡಲೆ ಸೋಂಕಿನ ತಪಾಸಣೆಗೆ ಒಳಗಾಗಿ ಚಿಕಿತ್ಸೆ ಪಡೆಯಬೇಕಿದೆ.

ಶಾಸಕ ಟಿ.ವೆಂಕಟರಮಣಯ್ಯ ನೇತೃತ್ವದಲ್ಲಿ ತಾಲೂಕು ಆಡಳಿತ ಕರೊನಾ ಸೋಂಕು ತಡೆಗಟ್ಟುವಲ್ಲಿ ಅವಿರತ ಶ್ರಮಿಸುತ್ತಿದ್ದು, ತಾಲೂಕು ಪಂಚಾಯಿತಿ ಸಹ ಸಂಪೂರ್ಣ ಬೆಂಬಲವಾಗಿ ನಿಂತಿದೆ ಎಂದಿದ್ದಾರೆ.

ರಾಜಕೀಯ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8 ರಂದು ಜೆಡಿಎಸ್ (JDS) ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ದೊಡ್ಡಬಳ್ಳಾಪುರಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ, ನಾಳೆ (ಏ.28) ರಂದು ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ ಎಂದು ಜೆಡಿಎಸ್ ದೊಡ್ಡಬಳ್ಳಾಪುರ

[ccc_my_favorite_select_button post_id="121433"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ ತಾಲೂಕು ವಕೀಲರ ಸಂಘ ಹಾಗೂ ನ್ಯಾಯಾಂಗ ಇಲಾಖೆಯಿಂದ ವಾರ್ಷಿಕ ಕ್ರೀಡಾಕೂಟ 2026-27ರ (Annual sports event) ಪ್ರಶಸ್ತಿ ವಿತರಣೆ ಕಾರ್ಯಕ್ರಮ (Awards ceremony) ನಗರದ ವಕೀಲರ ಭವನದಲ್ಲಿ ಆಯೋಜಿಸಲಾಗಿತ್ತು.

[ccc_my_favorite_select_button post_id="121459"]
ರಸ್ತೆಬದಿಯಲ್ಲಿ ನಿಂತು ಲೈಂಗಿಕ ಕ್ರಿಯೆಗೆ ಪ್ರಚೋದನೆ: 6 ವಿದೇಶಿ ಯುವತಿಯರ ಬಂಧನ..!

ರಸ್ತೆಬದಿಯಲ್ಲಿ ನಿಂತು ಲೈಂಗಿಕ ಕ್ರಿಯೆಗೆ ಪ್ರಚೋದನೆ: 6 ವಿದೇಶಿ ಯುವತಿಯರ ಬಂಧನ..!

ರಸ್ತೆಯಲ್ಲಿ ನಿಂತ ಆರು ಯುವತಿಯರು ಪುರುಷರನ್ನು ಲೈಂಗಿಕ ಕ್ರಿಯೆಗೆ ಪ್ರಚೋದಿಸುತ್ತಿದ್ದ (Sexually arousing) ಆರೋಪದ ಅಡಿಯಲ್ಲಿ ಆರು ವಿದೇಶಿ ಮಹಿಳೆಯರನ್ನು ಬಂಧಿಸಲಾಗಿದೆ.

[ccc_my_favorite_select_button post_id="121454"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಹೆಲ್ಮೆಟ್ ಕಡ್ಡಾಯ ಜಾರಿ ಮಾಡಿ, ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್

[ccc_my_favorite_select_button post_id="121414"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]