ದೊಡ್ಡಬಳ್ಳಾಪುರದಲ್ಲಿ ಹೆಚ್ಚುತ್ತಿರುವ ಕರೊನಾ ಪ್ರಕರಣಗಳು: ಕಾಣೆಯಾದ ಕರೊನಾ ಮಾರ್ಗಸೂಚಿಗಳು

ದೊಡ್ಡಬಳ್ಳಾಪುರ: ತಾಲೂಕಿನಲ್ಲಿ ಕೊವಿಡ್-19 ಸೋಂಕಿತರು 3 ಸಾವಿರ ಗಡಿ ದಾಟಿದ್ದು, ಜನಸಂಖ್ಯೆಯ ಶೇ.1 ಭಾಗ ಸೋಂಕಿತರಾಗಿದ್ದಾರೆ. ಆದರೆ ಲಾಕ್‌ಡೌನ್ ತೆರವಾದ ಹೊಸತರಲ್ಲಿ ಇದ್ದ ಕೊವಿಡ್ ಮಾರ್ಗಸೂಚಿಗಳು ಪಾಲನೆಯಾಗುತ್ತಿಲ್ಲ ಎನ್ನುವ ದೂರುಗಳು ಕೇಳಿ ಬರುತ್ತಿವೆ.

ಬಸ್‌ಗಳಲ್ಲಿ ಪಾಲನೆಯಾಗದ ನಿಯಮಗಳು : ಕೊವಿಡ್-19 ಅನ್‌ಲಾಕ್ ಆಗಿ ಸಾರಿಗೆ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಾಗ,ಮಾಸ್ಕ್‌ಗಳನ್ನು ಧರಿಸುವುದನ್ನು ಕಡ್ಡಾಯಗೊಳಿಸಲಾಗಿ,ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ ಪ್ರತಿಯೊಬ್ಬ ಪ್ರಯಾಣಿಕರ ಹೆಸರು, ವಿಳಾಸ ಮೊಬೈಲ್ ಸಂಖ್ಯೆಯ ವಿವರಗಳನ್ನು ಪಡೆಯಲಾಗುತ್ತಿತ್ತು. ಬಸ್ ಹತ್ತುವಾಗ ಕೈಗೆ ಸ್ಯಾನಿಟೈಸರ್ ಹಾಕಿ ಥರ್ಮಲ್ ಸ್ಕ್ರೀನಿಂಗ್ ಮಾಡಲಾಗುತ್ತಿತ್ತು. ಬಸ್‌ನಲ್ಲಿ 30 ಪ್ರಯಾಣಿಕರು ಮಾತ್ರ ಪ್ರಯಾಣಿಸಲು ಅವಕಾಶವಿತ್ತು. ಆದರೆ ಈಗ ಮಾಸ್ಕ್ ಕಡ್ಡಾಯಗೊಳಿಸಿರುವುದನ್ನು ಬಿಟ್ಟರೆ ಯಾವ ನಿಯಮಗಳು ಪಾಲನೆಯಾಗುತ್ತಿಲ್ಲ. ಬಸ್‌ಗಳ ಸಂಖ್ಯೆ ಕಡಿಮೆಯಾಗಿ, ಪ್ರಯಾಣಿಕರು ಹೆಚ್ಚಾದಾಗ, ಬಸ್ ನಿಲ್ದಾಣಕ್ಕೆ ಬರುತ್ತಿದ್ದಂತೆ ವ್ಯಕ್ತಿಗತ ಅಂತರ  ಕಾಪಾಡಿಕೊಳ್ಳದೇ ಬಸ್ ಹತ್ತುವ ದೃಶ್ಯಗಳು ಕಂಡು ಬರುತ್ತಿವೆ.

ಇನ್ನು ಬಹಳಷ್ಟು ಸರ್ಕಾರಿ ಕಚೇರಿಗಳಲ್ಲಿಯೂ, ಥರ್ಮಲ್ ಸ್ಕ್ರೀನಿಂಗ್ ಮಾಡುವುದು ನಿಂತಿದೆ. ಸ್ಯಾನಿಟೈಸರ್ ಸಹ ಕಡ್ಡಾಯವಾಗಿ ಹಾಕುತ್ತಿಲ್ಲ. ಮಾರುಕಟ್ಟೆ ಪ್ರದೇಶದಲ್ಲಿಯೂ ಸಹ ಜನಸಂದಣಿ ಹೆಚ್ಚಾದಾಗ ಅಂತರ ಕಾಪಾಡಿಕೊಳ್ಳದೇ ವ್ಯವಹರಿಸುವುದು ಸಾಮಾನ್ಯವಾಗಿದೆ.

ಇದ್ದೂ ಬಳಕೆಯಾಗದ ಮಾಸ್ಕ್..!

ಈ ನಡುವೆ ಮಾರುಕಟ್ಟೆ ಪ್ರದೇಶದಲ್ಲಿ ಹಲವು ಮಂದಿ ವ್ಯಾಪಾರಿಗಳು ಮಾಸ್ಕ್ ಧರಿಸಿದ್ದರೂ ಸಹ ಮೂಗು ಬಾಯಿ ಮುಚ್ಚಿಕೊಳ್ಳದೇ ಕುತ್ತಿಗೆಯ ಬಳಿ ಮಾಸ್ಕ್ ಇರುತ್ತದೆ. ಮೊದಲು ತರಕಾರಿಗಳ ಬೆಲೆಗಳನ್ನು ಕೂಗಲು, ಹಾಗೂ ನಂತರ ಗ್ರಾಹಕರೊಡನೆ ವ್ಯವಹರಿಸಲು ಮಾಸ್ಕ್ ಕುತ್ತಿಗೆಯ ಬಳಿ ಬರುತ್ತದೆ. ಒಂಟಿಯಾಗಿರುವಾಗ  ಮಾಸ್ಕ್ ಅನ್ನು ಮೂಗು ಬಾಯಿ ಮುಚ್ಚಿಕೊಳ್ಳದೇ ಹಾಕಿಕೊಂಡರೆ ತೊಂದರೆಯಿಲ್ಲ. ಆದರೆ ವ್ಯಕ್ತಿಗಳೊಂದಿಗೆ ವ್ಯವಹರಿಸುವಾಗ ಕಡ್ಡಾಯವಾಗಿ ಮಾಸ್ಕ್ ಹಾಕಿಕೊಳ್ಳಬೇಕಿದೆ ಎನ್ನುತ್ತಾರೆ ತಜ್ಞರು.

ಮಾಸ್ಕ್ ಧರಿಸದೆ ಓಡಾಡುವವರಿಗೆ ದಂಡ

ತಾಲೂಕಿನಲ್ಲಿ ದಿನೇ ದಿನೇ ಕೊವಿಡ್-19 ಸೋಂಕು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಮಾಸ್ಕ್ ಧರಿಸದೆ ನಗರದಲ್ಲಿ ಬೇಕಾಬಿಟ್ಟಿಯಾಗಿ ಓಡಾಡುತ್ತಿದ್ದವರಿಗೆ  ಪೌರಾಯುಕ್ತ ರಮೇಶ್ ಎಸ್.ಸುಣಗಾರ್ ಹಾಗೂ ಡಿವೈಎಸ್‌ಪಿ ಟಿ.ರಂಗಪ್ಪ ನೇತೃತ್ವದಲ್ಲಿ ಅಧಿಕಾರಿಗಳು ದಂಡ ವಿಧಿಸುತ್ತಿದ್ದಾರೆ.

250 ರೂ ವಿಧಿಸುತ್ತಿದ್ದ ದಂಡ ರಾಜ್ಯ ಸರ್ಕಾರದ ಆದೇಶದಂತೆ  ಗುರುವಾರದಿಂದ 100ರೂ ವಿಧಿಸಲಾಗುತ್ತಿದೆ. ಬೆಳಗಿನಿಂದ ಬೆಳಿಗ್ಗೆ ನಗರದ ಬಸ್ ನಿಲ್ದಾಣ, ಡಿ.ಕ್ರಾಸ್ ವೃತ್ತ, ಬಸವ ಭವನ ವೃತ್ತ ಮೊದಲಾದ ಪ್ರಮುಖ ರಸ್ತೆಗಳಲ್ಲಿ ಮಾಸ್ಕ್ ಇಲ್ಲದೇ ಓಡಾಡುವ ನಾಗರಿಕರಿಗೆ ದಂಡ ವಿಧಿಸಲಾಗುತ್ತಿದೆ. ವಾಹನಗಳಲ್ಲಿ ಸಂಚರಿಸುವವರು ಮಾಸ್ಕ್ ಇಟ್ಟುಕೊಂಡಿರಬೇಕು. ಸಾರ್ವಜನಿಕರ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಎಚ್ಚರಿಕೆ ನೀಡಲಾಗುತ್ತಿದೆ. ನಗರಸಭೆ ವತಿಯಿಂದ ಏಪ್ರಿಲ್‌ನಿಂದ ಆಗಸ್ಟ್ ವರೆಗೆ 53,850 ರೂ, ಸೆಪ್ಟೆಂಬರ್‌ನಲ್ಲಿ 25,800 ರೂ ಹಾಗೂ ಅಕ್ಟೋಬರ್ 8ರವರೆಗೆ 20 ಸಾವಿರ ರೂ ಸೇರಿ 1ಲಕ್ಷದವರೆಗೆ ದಂಡ ವಸೂಲಿ ಮಾಡಲಾಗಿದೆ.

ಕರೊನಾ ಸೋಂಕನ್ನು ತಡೆಗಟ್ಟಲು ಕಡ್ಡಾಯವಾಗಿ ನಿಯಮ ಪಾಲಿಸಿ:

ಕರೊನಾ ಸೋಂಕನ್ನು ತಡೆಗಟ್ಟಲು ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯವಾಗಿದೆ. ಮಾಸ್ಕ್ ಧರಿಸದೆ ಬೇಕಾಬಿಟ್ಟಿ ಓಡಾಡುವವರಿಗೆ ದಂಡ ವಿಧಿಸಲಾಗುತ್ತಿದೆ. ಸಾರ್ವಜನಿಕರು ನಿಮ್ಮ ಸುರಕ್ಷತೆಗಾಗಿ ಕಡ್ಡಾಯವಾಗಿ ಕೊವಿಡ್-19 ಮಾರ್ಗಸೂಚಿಗಳನ್ನು ಪಾಲಿಸಬೇಕಿದೆ: ರಮೇಶ್ ಎಸ್.ಸುಣಗಾರ್, ನಗರಸಭೆ ಪೌರಾಯುಕ್ತರು.

ರಾಜಕೀಯ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8 ರಂದು ಜೆಡಿಎಸ್ (JDS) ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ದೊಡ್ಡಬಳ್ಳಾಪುರಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ, ನಾಳೆ (ಏ.28) ರಂದು ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ ಎಂದು ಜೆಡಿಎಸ್ ದೊಡ್ಡಬಳ್ಳಾಪುರ

[ccc_my_favorite_select_button post_id="121433"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ ತಾಲೂಕು ವಕೀಲರ ಸಂಘ ಹಾಗೂ ನ್ಯಾಯಾಂಗ ಇಲಾಖೆಯಿಂದ ವಾರ್ಷಿಕ ಕ್ರೀಡಾಕೂಟ 2026-27ರ (Annual sports event) ಪ್ರಶಸ್ತಿ ವಿತರಣೆ ಕಾರ್ಯಕ್ರಮ (Awards ceremony) ನಗರದ ವಕೀಲರ ಭವನದಲ್ಲಿ ಆಯೋಜಿಸಲಾಗಿತ್ತು.

[ccc_my_favorite_select_button post_id="121459"]
ರಸ್ತೆಬದಿಯಲ್ಲಿ ನಿಂತು ಲೈಂಗಿಕ ಕ್ರಿಯೆಗೆ ಪ್ರಚೋದನೆ: 6 ವಿದೇಶಿ ಯುವತಿಯರ ಬಂಧನ..!

ರಸ್ತೆಬದಿಯಲ್ಲಿ ನಿಂತು ಲೈಂಗಿಕ ಕ್ರಿಯೆಗೆ ಪ್ರಚೋದನೆ: 6 ವಿದೇಶಿ ಯುವತಿಯರ ಬಂಧನ..!

ರಸ್ತೆಯಲ್ಲಿ ನಿಂತ ಆರು ಯುವತಿಯರು ಪುರುಷರನ್ನು ಲೈಂಗಿಕ ಕ್ರಿಯೆಗೆ ಪ್ರಚೋದಿಸುತ್ತಿದ್ದ (Sexually arousing) ಆರೋಪದ ಅಡಿಯಲ್ಲಿ ಆರು ವಿದೇಶಿ ಮಹಿಳೆಯರನ್ನು ಬಂಧಿಸಲಾಗಿದೆ.

[ccc_my_favorite_select_button post_id="121454"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಹೆಲ್ಮೆಟ್ ಕಡ್ಡಾಯ ಜಾರಿ ಮಾಡಿ, ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್

[ccc_my_favorite_select_button post_id="121414"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]