ದೊಡ್ಡಬಳ್ಳಾಪುರ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2019-20ನೇ ಶೈಕ್ಷಣಿಕ ವರ್ಷದಲ್ಲಿ ನಡೆದ ಮೆಟ್ರಿಕ್ ನಂತರದ ಕೋರ್ಸ್ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಇಲಾಖೆ ವೆಬ್ಸೈಟ್ www.sw.kar.nic.in ನಲ್ಲಿ ಅವಕಾಶ ಕಲ್ಪಿಸಲಾಗಿದೆ. ಅರ್ಜಿ ಸಲ್ಲಿಸಲು 2020ರ ಅಕ್ಟೋಬರ್ 31 ಕೊನೆಯ ದಿನವಾಗಿದೆ.
ಅರ್ಜಿ ಸಲ್ಲಿಸಿದ ನಂತರ ವಿದ್ಯಾರ್ಥಿಗಳು ಅರ್ಜಿಯೊಂದಿಗೆ ದೃಢೀಕೃತ ದಾಖಲಾತಿಗಳಾದ ಎಸ್.ಎಸ್.ಎಲ್.ಸಿ ಅಂಕಪಟ್ಟಿ ಪ್ರತಿ,ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಹಿಂದಿನ ತರಗತಿಯ ವ್ಯಾಸಂಗ ಪ್ರಮಾಣ, ಪತ್ರ/ಅಂಕಪಟ್ಟಿಗಳ,ಚಾಲ್ತಿಯಲ್ಲಿರುವ ವಿದ್ಯಾರ್ಥಿಗಳ ವೈಯಕ್ತಿಕ ಬ್ಯಾಂಕ್, ಖಾತೆಯ ವಿವರ, ಪಾಸ್ಪೋರ್ಟ್ ಅಳತೆಯ ಭಾವಚಿತ್ರವನ್ನು ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರ ಕಚೇರಿ, ಕೊಠಡಿ ಸಂಖ್ಯೆ: 217, 2ನೇ ಮಹಡಿ, ಬೀರಸಂದ್ರ,ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರ ಕಚೇರಿ, ದೂ.ಸಂ.: 080-29787447, ತಾಲ್ಲೂಕು ಸಹಾಯಕ ನಿರ್ದೇಶಕರುಗಳು ದೇವನಹಳ್ಳಿ ದೂ.ಸಂ.: 080- 7681784, ದೊಡ್ಡಬಳ್ಳಾಪುರ ದೂ.ಸಂ.: 080-7623681, ಹೊಸಕೋಟೆ ದೂ.ಸಂ.: 080-7931528, ನೆಲಮಂಗಲ ದೂ.ಸಂ.: 080-7723172 ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪ ನಿರ್ದೇಶಕ ಹನುಮಂತರಾಯಪ್ಪ.ಎನ್ ಪ್ರಕಟಣೆಯಲ್ಲಿ

