ದೊಡ್ಡಬಳ್ಳಾಪುರ: ರಸ್ತೆ ಬದಿ ತಮ್ಮ ಬೊಲೆರೋ ವಾಹನ ನಿಲ್ಲಿಸಿ, ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರಿಗೆ ಇದೇ ರಸ್ತೆಯಲ್ಲಿ ಬರುತ್ತಿದ್ದ ಸಿಮೆಂಟ್ ಲಾರಿ ಹರಿದು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಪೊಲೀಸ್ ಠಾಣೆಯ ಮುಂಭಾಗದಲ್ಲಿ ನಡೆದಿದೆ.
ಅಪಘಾತದಲ್ಲಿ ಮೃತಪಟ್ಟಿರುವ ವ್ಯಕ್ತಿಯನ್ನು ಚೆಳ್ಳಕೆರೆಯ ನಾಗರಾಜ್(60) ಎಂದು ಗುರುತಿಸಲಾಗಿದೆ. ಇವರು ಬೆಂಗಳೂರಿಗೆ ತೆರಳುತ್ತಿದ್ದಾಗ, ರಸ್ತೆ ಬದಿ ತಮ್ಮ ಬೊಲೆರೋ ವಾಹನ ನಿಲ್ಲಿಸಿ ಊಟ ಮಾಡುವ ಸಲುವಾಗಿ ರಸ್ತೆ ದಾಟುತ್ತಿದ್ದಾಗ, ವೇಗವಾಗಿ ಬಂದ ಸಿಮೆಂಟ್ ಲಾರಿ ಹರಿದು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

