ಕರೊನಾ ಪರೀಕ್ಷೆ ಒಳಗಾಗಲು ನಿರಾಕರಿಸುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ

ದೊಡ್ಡಬಳ್ಳಾಪುರ: ಜಿಲ್ಲೆಯಲ್ಲಿ ಕರೊನಾ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆ, ಸಾರ್ವಜನಿಕರಿಗೆ ಕರೊನಾ ವೈರಸ್ ಹರಡುವಿಕೆ ಹಾಗೂ ಅದರ ನಿಯಂತ್ರಿಸುವಿಕೆ ಬಗ್ಗೆ ಜಾಗೃತಿ ಮೂಡಿಸುವುದು ಅತೀ ಅಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಎಲ್ಲಾ ಇಲಾಖೆಯ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ನಡೆದ ಕರೊನಾ ವೈರಸ್‌ ನಿಯಂತ್ರಣ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಎಲ್ಲಾ ಇಲಾಖೆಯ ಅಧಿಕಾರಿಗಳು ಮೂರ್ನಾಲ್ಕು ದಿನಗಳಲ್ಲಿ ಕ್ರಿಯಾ ಯೋಜನೆ ರೂಪಿಸಬೇಕೆಂದರಲ್ಲದೆ, ಕೊರೋನ ಸೋಂಕಿನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಇಲಾಖೆಗಳು ಬಳಸುವ ಲೆಟರ್‌ಹೆಡ್‌ಗಳಲ್ಲಿ ಮಾಸ್ಕ್ ಬಳಕೆ, ಸಾಮಾಜಿಕ ಅಂತರ ಕಾಪಾಡುವುದು, ಶುಚಿತ್ವ ಕಾಪಾಡುವುದು ಇಂತಹ ಜಾಗೃತಿ ಬರಹಗಳನ್ನು ಬಳಸುವ ಮೂಲಕ ಕರೊನಾ ನಿಯಂತ್ರಣಕ್ಕೆ ಕಾರ್ಯೋನ್ಮುಖರಾಗಬೇಕೆಂದು ಸೂಚಿಸಿದರು.

ಪ್ರಸ್ತುತ ಕರೊನ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಸುವುದು ಮತ್ತು ಸಾಮಾಜಿಕ ಅಂತರ ಕಾಪಾಡುವುದು ಅತ್ಯಗತ್ಯವಾಗಿದೆ ಎಂದರಲ್ಲದೆ, ಎಲ್ಲರೂ

ಮಾಸ್ಕ್ ಧರಿಸುವುದು ಕಡ್ಡಾಯವಾಗಿದ್ದು ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವಂತಿಲ್ಲ, ಮಾಸ್ಕ್ ಧರಿಸದೆ ಸಂಚರಿಸುವಂತಿಲ್ಲ, ನಿಯಮ ಉಲ್ಲಂಘಿಸಿದವರ ವಿರುದ್ಧ ದಂಡ ವಿಧಿಸಲಾಗುವುದು ಎಂದು ಹೇಳಿದರು.

ಕರೊನ ಸೋಂಕಿತ ಪ್ರಕರಣಗಳು ಹೆಚ್ಚುತ್ತಿರುವ ಪ್ರದೇಶಗಳಲ್ಲಿ ಹೆಚ್ಚು ಪರೀಕ್ಷೆಗಳನ್ನು ನಡೆಸಲು ತಹಸೀಲ್ದಾರ್‌ಗಳಿಗೆ‌ ಅದೇಶಿದರಲ್ಲದೆ, ಕರೊನ ಪರೀಕ್ಷೆ ಒಳಗಾಗಲು ನಿರಾಕರಿಸುವವರ ವಿರುದ್ಧ ಕ್ರಮ ಕೈಗೊಳ್ಳಲು ತಿಳಿಸಿದರು.

ಸಾರ್ವಜನಿಕರು ಸಣ್ಣ ಪ್ರಮಾಣದ ನೆಗಡಿ,ಕೆಮ್ಮು, ಜ್ವರ ಕಾಣಿಸಿಕೊಂಡ ಕೂಡಲೇ ತಜ್ಞ ವೈದ್ಯರಿಂದ ಚಿಕಿತ್ಸೆ ಪಡೆಯಬೇಕೆಂದರಲ್ಲದೆ, ವೈಯಕ್ತಿಕ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಹೇಳಿದರು.

ಕೆಮ್ಮುವಾಗ, ಸೀನುವಾಗ ಕೈವಸ್ತ್ರ ಬಳಸಬೇಕು. ಒಂದು ವೇಳೆ ಕರೊನಾ ವೈರಸ್ ಸಂಬಂಧಿತ ಸೋಂಕು ಎಂದು ಅನುಮಾನ ಬಂದರೆ ಸ್ವಯಂ ಚಿಕಿತ್ಸೆಗೆ ಮುಂದಾಗಿ, ಕೂಡಲೇ ತಮ್ಮ ಹತ್ತಿರದ ಸಾರ್ವಜನಿಕ ಆಸ್ಪತ್ರೆಗೆ ತೆರಳಿ, ಕರೊನಾ ಪರೀಕ್ಷೆಗೆ ಒಳಗಾಗಬೇಕೆಂದು ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ||ಜಗದೀಶ್.ಕೆ.ನಾಯಕ್, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್.ಎಂ.ನಾಗರಾಜ, ಉಪ ವಿಭಾಗಾಧಿಕಾರಿ ಅರುಳ್‌ಕುಮಾರ್, ಜಿಲ್ಲಾ ಆರೋಗ್ಯಾಧಿಕಾರಿ ಡಾ||ಮಂಜುಳಾದೇವಿ, ವಾರ್ತಾ ಮತ್ತು

ಸಾರ್ವಜನಿಕ ಸಂಪರ್ಕ ಇಲಾಖೆ ಉಪನಿರ್ದೇಶಕ ಎನ್.ಎಸ್.ಮಹೇಶ್ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜಕೀಯ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿ ವಿಸ್ತರಣೆ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ

ಕರ್ನಾಟಕ ಪಂಚಾಯತ್‌ರಾಜ್ ಸೀಮಾ ನಿರ್ಣಯ ಆಯೋಗ ಏಪ್ರಿಲ್ 18ರಂದು ಹೊರಡಿಸಿರುವ ರಾಜ್ಯದ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯ (Grama Panchayat member) ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿಯನ್ನು ಮೇ 2ರ ಸಂಜೆ

[ccc_my_favorite_select_button post_id="121469"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ ತಾಲೂಕು ವಕೀಲರ ಸಂಘ ಹಾಗೂ ನ್ಯಾಯಾಂಗ ಇಲಾಖೆಯಿಂದ ವಾರ್ಷಿಕ ಕ್ರೀಡಾಕೂಟ 2026-27ರ (Annual sports event) ಪ್ರಶಸ್ತಿ ವಿತರಣೆ ಕಾರ್ಯಕ್ರಮ (Awards ceremony) ನಗರದ ವಕೀಲರ ಭವನದಲ್ಲಿ ಆಯೋಜಿಸಲಾಗಿತ್ತು.

[ccc_my_favorite_select_button post_id="121459"]
ರಸ್ತೆಬದಿಯಲ್ಲಿ ನಿಂತು ಲೈಂಗಿಕ ಕ್ರಿಯೆಗೆ ಪ್ರಚೋದನೆ: 6 ವಿದೇಶಿ ಯುವತಿಯರ ಬಂಧನ..!

ರಸ್ತೆಬದಿಯಲ್ಲಿ ನಿಂತು ಲೈಂಗಿಕ ಕ್ರಿಯೆಗೆ ಪ್ರಚೋದನೆ: 6 ವಿದೇಶಿ ಯುವತಿಯರ ಬಂಧನ..!

ರಸ್ತೆಯಲ್ಲಿ ನಿಂತ ಆರು ಯುವತಿಯರು ಪುರುಷರನ್ನು ಲೈಂಗಿಕ ಕ್ರಿಯೆಗೆ ಪ್ರಚೋದಿಸುತ್ತಿದ್ದ (Sexually arousing) ಆರೋಪದ ಅಡಿಯಲ್ಲಿ ಆರು ವಿದೇಶಿ ಮಹಿಳೆಯರನ್ನು ಬಂಧಿಸಲಾಗಿದೆ.

[ccc_my_favorite_select_button post_id="121454"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಹೆಲ್ಮೆಟ್ ಕಡ್ಡಾಯ ಜಾರಿ ಮಾಡಿ, ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್

[ccc_my_favorite_select_button post_id="121414"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]