ಶಿಕ್ಷಕರ ಸಮಸ್ಯೆಗಳಿಗೆ ಸ್ಪಂಧಿಸದ ಸರ್ಕಾರ; ದೊಡ್ಡಬಳ್ಳಾಪುರದಲ್ಲಿ ಎಚ್.ಡಿ.ದೇವೇಗೌಡ ರಾಜ್ಯ ಸರ್ಕಾರದ ವಿರುದ್ಧ ಟೀಕೆ

ದೊಡ್ಡಬಳ್ಳಾಪುರ: ಕರೊನಾ ಲಾಕ್‌ಡೌನ್ ಸಂದರ್ಭದಲ್ಲಿ ಅನುದಾನಿತ ಹಾಗೂ ಖಾಸಗಿ ಶಾಲೆಗಳಲ್ಲಿ ಕೆಲಸ ಮಾಡುತ್ತಿದ್ದ ಶಿಕ್ಷಕರು, ಉಪನ್ಯಾಸಕರು ಪಟ್ಟಿರುವ ಪಾಡಿನ ಬಗ್ಗೆ ರಾಜ್ಯದ ಮುಖ್ಯಮಂತ್ರಿಗಳಿಗೆ ಕಿಂಚಿತ್ತು ಕರುಣೆ, ಅನುಕುಂಪವೇ ಇಲ್ಲವಾಗಿದ್ದು, ಶಿಕ್ಷಕರಿಗೆ ಯಾವುದೇ ತರಹದ ಪ್ಯಾಕೇಜ್ ನೀಡದಿರುವುದು ದುರಂತದ ಸಂಗತಿ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಹೇಳಿದರು.

ನಗರದಲ್ಲಿ ಶುಕ್ರವಾರ ವಿಧಾನ ಪರಿಷತ್‌ನ ಬೆಂಗಳೂರು ಪದವೀದರ ಶಿಕ್ಷಕರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎ.ಪಿ.ರಂಗನಾಥ್ ಅವರ ಪರವಾಗಿ ನಡೆದ ಶಿಕ್ಷಕರೊಂದಿಗೆ ಸಮಾಲೋಚನಾ ಸಭೆಯಲ್ಲಿ ಮಾತನಾಡಿದರು. ಕರೊನಾ ಲಾಕ್‌ಡೌನ್ ಸಮಯದಲ್ಲಿ ಕಟ್ಟಡ ಕೂಲಿ ಕಾರ್ಮಿಕರು, ಅಮಾಲೀಗಳಿಗೆ ಪ್ಯಾಕೇಜ್ ಪ್ರಕಟಿಸಿದ ಸರ್ಕಾರಕ್ಕೆ ಖಾಸಗಿ ಶಾಲೆಗಳ ಶಿಕ್ಷಕರ ಕಷ್ಟಗಳು ಮಾತ್ರ ಕಣ್ಣಿಗೆ ಕಾಣಿಸದೇ ಹೋಗಿದ್ದು ದುರಂತದ ಸಂಗತಿಯಾಗಿದೆ. ಹಲವಾರು ದುಂದುವೆಚ್ಚಗಳನ್ನು ಮಾಡುವ ಸರ್ಕಾರಕ್ಕೆ ಸಂಕಷ್ಟದಲ್ಲಿರುವವರಿಗೆ ನೆರವಾಗುವುದು ಗೊತ್ತಿಲ್ಲ ಎಂದರು.

ಜೆಡಿಎಸ್ ಬಗ್ಗೆ ಲಘುವಾಗಿ ಮಾತನಾಡಿ ಇದು ಒಂದು ಪಕ್ಷವೇ ಅಲ್ಲ ಎಂದು ಹೇಳುವವರು ತಮ್ಮ ಆತ್ಮಕ್ಕೆ  ಪ್ರಶ್ನೆ ಮಾಡಿಕೊಳ್ಳಲಿ ಅವರಿಗೆ ಅರ್ಥವಾಗುತ್ತದೆ. ಇಂದು ರಾಷ್ಟ್ರೀಯ ಪಕ್ಷದಲ್ಲಿರುವವರು ಈ ಪಕ್ಷದಿಂದಲೇ ಬೆಳೆದವರು. ನಾನು ಎಲ್ಲಿಂದ ಬೆಳೆದು ಬಂದಿರುವೆ ಎನ್ನುವುದು ಎಂದು ಅವರು ರಾಜ್ಯದಲ್ಲಿನ ಎರಡೂ ರಾಷ್ಟ್ರೀಯ ಪಕ್ಷಗಳಲ್ಲಿ ಇಂದು ಹುದ್ದೆಗಳನ್ನು ಅನುಭವಿಸುತ್ತಿರುವ ಎಲ್ಲರು ಸಹ ಜೆಡಿಎಸ್ ಪಕ್ಷದಲ್ಲಿ ಬೆಳೆದು ಹೋಗಿರುವವರೆ ಇದ್ದಾರೆ. ಈ ಪಕ್ಷ ಇರಬೇಕೊ ಬೇಡವೋ ಎನ್ನುವುದನ್ನು ಮುಂದಿನ ದಿನಗಳಲ್ಲಿ ಈ ನಾಡಿನ ಜನ ನಿರ್ಧರಿಸುತ್ತಾರೆ ಹೊರತು ಮುಖಂಡರ ಮಾತುಗಳನ್ನು ಕೇಳಿ ಅಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯರ ಹೆಸರೇಳದೆ ಟಾಂಗ್ ನೀಡಿದರು.

ಜನರ ಆಶೋತ್ತರಗಳನ್ನು ಈಡೇರಿಸಲು ಆಂಧ್ರ ಪ್ರದೇಶ, ತಮಿಳು ನಾಡಿನಂತೆ ಪ್ರಾದೇಶಿಕ ಪಕ್ಷಗಳ ಅಗತ್ಯವಿದೆ ಎಂದ ಅವರು ರಾಜ್ಯದಲ್ಲಿ ಸದಾ ಶಿಕ್ಷಕರ ಪರವಾಗಿ ಕಾರ್‍ಯ ನಿರ್ವಹಿಸುವವರಿಗೆ ನಾವು ನೈತಿಕ ಬೆಂಬಲ ನೀಡಬೇಕಿದ್ದು,  ಜೆಡಿಎಸ್ ಅಭ್ಯರ್ಥಿ ಎ.ಪಿ.ರಂಗನಾಥ್ ಅವರನ್ನು ಬೆಂಬಲಿಸುವಂತೆ ಮನವಿ ಮಾಡಿದರು.

ಸಮಾಲೋಚನ ಸಭೆಯಲ್ಲಿ ಶಿಕ್ಷಕರ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಮಾತನಾಡಿದ ಶಿಕ್ಷಕರು ಇಷ್ಟು ವರ್ಷಗಳ ಕಾಲ ಬೆಂಗಳೂರು ಪದವೀಧರ ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾಗಿರುವ ಪ್ರತಿನಿಧಿಗಳು ಆಯ್ಕೆಯಾಗುವವರೆಗೆ ಮಾತ್ರ ಶಿಕ್ಷಕರ ಪರವಾಗಿ ಮಾತನಾಡುತ್ತಾರೆ. ಆಯ್ಕೆಯಾದ ನಂತರ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ಪರವಾಗಿ ಕೆಲಸ ಮಾಡುತ್ತಾರೆ. ಕಷ್ಟದ ಸಮಯದಲ್ಲಿ ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾಗಿದ್ದ ಪ್ರತಿನಿಧಿಗಳು ಎಲ್ಲಿ ಹೋಗಿದ್ದರು ಎಂದು ಪ್ರಶ್ನಿಸಿದರು.

ಅಭ್ಯರ್ಥಿ ಎ.ಪಿ.ರಂಗನಾಥ್ ಮಾತನಾಡಿ, ಶಿಕ್ಷಕರ ಸಂಕಷ್ಟಗಳಿಗೆ ಸ್ಪಂಧಿಸುವಂತೆ ರಾಜ್ಯ ಸರ್ಕಾರಕ್ಕೆ ಶಿಕ್ಷಕರ ಮತ್ತು ಆಡಳಿತ ಮಂಡಲಿ ಫೋರಂ, ಮೂಲಕ ಒತ್ತಾಯಿಸಿತ್ತು. ಶಿಕ್ಷಕರು ಸಭೆಯಲ್ಲಿ ಮನವಿ ಮಾಡಿರುವ ಸಮಸ್ಯೆಗಳನ್ನು ಈಡೇರಿಸಲಾಗುವುದು ಎಂದರು.

ಸಭೆಯಲ್ಲಿ ಮಧುಗಿರಿ ಶಾಸಕ ಎಚ್.ವಿ.ವೀರಭದ್ರಯ್ಯ, ಜೆಡಿಎಸ್ ಜಿಲ್ಲಾಧ್ಯಕ್ಷ ಬಿ.ಮುನೇಗೌಡ, ಜಿಲ್ಲಾ ಪಂಚಾಯಿತಿ ಸದಸ್ಯ ಎಚ್.ಅಪ್ಪಯ್ಯಣ್ಣ, ವಿಧಾನ ಪರಿಷತ್ ಸದಸ್ಯ ರಮೇಶ್,ಶಿಕ್ಷಕರ ಮತ್ತು ಆಡಳಿತ ಮಂಡಲಿ ಫೋರಂ ಕಾರ್ಯದರ್ಶಿ ಸೂಡಿ ಸುರೇಶ್, ಜೆಡಿಎಸ್ ತಾಲೂಕು ಅಧ್ಯಕ್ಷ ಲಕ್ಷ್ಮೀಪತಯ್ಯ, ಕಾರ್ಯಾಧ್ಯಕ್ಷ ಆರ್.ಕೆಂಪರಾಜ್, ಘಾಟಿ ಲಯ್ಸ್ ಅಧ್ಯಕ್ಷ ಹರೀಶ್ ಗೌಡ, ಮುಖಂಡರಾದ  ಕುಂಟನಹಳ್ಳಿ ಮಂಜುನಾಥ್ ಮತ್ತಿತರರಿದ್ದರು.

ರಾಜಕೀಯ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿ ವಿಸ್ತರಣೆ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ

ಕರ್ನಾಟಕ ಪಂಚಾಯತ್‌ರಾಜ್ ಸೀಮಾ ನಿರ್ಣಯ ಆಯೋಗ ಏಪ್ರಿಲ್ 18ರಂದು ಹೊರಡಿಸಿರುವ ರಾಜ್ಯದ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯ (Grama Panchayat member) ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿಯನ್ನು ಮೇ 2ರ ಸಂಜೆ

[ccc_my_favorite_select_button post_id="121469"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ ತಾಲೂಕು ವಕೀಲರ ಸಂಘ ಹಾಗೂ ನ್ಯಾಯಾಂಗ ಇಲಾಖೆಯಿಂದ ವಾರ್ಷಿಕ ಕ್ರೀಡಾಕೂಟ 2026-27ರ (Annual sports event) ಪ್ರಶಸ್ತಿ ವಿತರಣೆ ಕಾರ್ಯಕ್ರಮ (Awards ceremony) ನಗರದ ವಕೀಲರ ಭವನದಲ್ಲಿ ಆಯೋಜಿಸಲಾಗಿತ್ತು.

[ccc_my_favorite_select_button post_id="121459"]
ರಸ್ತೆಬದಿಯಲ್ಲಿ ನಿಂತು ಲೈಂಗಿಕ ಕ್ರಿಯೆಗೆ ಪ್ರಚೋದನೆ: 6 ವಿದೇಶಿ ಯುವತಿಯರ ಬಂಧನ..!

ರಸ್ತೆಬದಿಯಲ್ಲಿ ನಿಂತು ಲೈಂಗಿಕ ಕ್ರಿಯೆಗೆ ಪ್ರಚೋದನೆ: 6 ವಿದೇಶಿ ಯುವತಿಯರ ಬಂಧನ..!

ರಸ್ತೆಯಲ್ಲಿ ನಿಂತ ಆರು ಯುವತಿಯರು ಪುರುಷರನ್ನು ಲೈಂಗಿಕ ಕ್ರಿಯೆಗೆ ಪ್ರಚೋದಿಸುತ್ತಿದ್ದ (Sexually arousing) ಆರೋಪದ ಅಡಿಯಲ್ಲಿ ಆರು ವಿದೇಶಿ ಮಹಿಳೆಯರನ್ನು ಬಂಧಿಸಲಾಗಿದೆ.

[ccc_my_favorite_select_button post_id="121454"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಹೆಲ್ಮೆಟ್ ಕಡ್ಡಾಯ ಜಾರಿ ಮಾಡಿ, ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್

[ccc_my_favorite_select_button post_id="121414"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]