ಬೆಂಗಳೂರು: ಸೋಮವಾರದಿಂದ ಕೋವಿಡ್ 19 ವೈರಸ್ ಪೀಡಿತರಾಗಿ ಮನೆಯಲ್ಲಿಯೇ ಹೋಂ ಐಸೋಲೇಷನ್ ನಲ್ಲಿದ್ದ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ದಿಢೀರ್ ಬೆಳವಣಿಗೆಯಲ್ಲಿ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸಚಿವರು ಹೋಂ ಕ್ವಾರಂಟೈನ್ ನಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುವಂತೆ ವೈದ್ಯ ಸಲಹೆಯ ಮೇರೆಗೆ ಇದೀಗ ಆಸ್ಪತ್ರೆಗೆ ಕರೊನಾ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ.
ಈ ಕುರಿತು ಸಂದೇಶ ನೀಡಿರುವ ಅವರು ವೈದ್ಯರ ಸಲಹೆ ಮೇರೆಗೆ ನಾನು ಈಗ ಬೆಂಗಳೂರಿನಲ್ಲಿಯೇ ಗೆಳೆಯರೊಬ್ಬರ ಚಿಕ್ಕ ಆಸ್ಪತ್ರೆಯೊಂದಕ್ಕೆ ದಾಖಲಾಗಿದ್ದೇನೆ. ವೈದ್ಯರ ನಿಗಾದಲ್ಲಿದ್ದೇನೆ.
ಯಾರೂ ಆತಂಕ ಪಡುವ ಅಗತ್ಯವಿಲ್ಲ. ಎಲ್ಲಾ ರೀತಿಯಿಂದಲೂ ನನ್ನ ಆರೋಗ್ಯ ಸುಧಾರಿಸುತ್ತಿದೆ ಎಂದಿದ್ದಾರೆ.

