ದೊಡ್ಡಬಳ್ಳಾಪುರ: ತಾಲ್ಲೂಕಿನ ಚಿಕ್ಕಬೆಳವಂಗಲ ಗ್ರಾಮದ ಡಾ.ಮುನಿಯಪ್ಪ(67) ಭಾನುವಾರ ಬೆಳಿಗ್ಗೆ ನಿಧನ ಹೊಂದಿದ್ದಾರೆ.
ಡಾ.ಮುನಿಯಪ್ಪ ಅವರು ಪಶುವೈಧ್ಯರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಪ್ರಸ್ತುತ ಚಿಕ್ಕಬೆಳವಂಗಲ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿದ್ದರು. ಪ್ರಾಂತ ರೈತ ಸಂಘದ ಹೋರಾಟಗಳಲ್ಲು ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.
ಮೃತರಿಗೆ ಪತ್ನಿ, ಮೂರು ಜನ ಪುತ್ರಿಯರು ಇದ್ದಾರೆ. ಮೃತರ ಅಂತ್ಯಕ್ರಿಯೆ ಭಾನುವಾರ ಸಂಜೆ ಚಿಕ್ಕಬೆಳವಂಗಲ ಗ್ರಾಮದಲ್ಲಿ ನಡೆಯಿತು.

