ದೊಡ್ಡಬಳ್ಳಾಪುರ: ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಅಧ್ಯಕ್ಷರ ವಿರುದ್ಧ ನಡೆಯ ಬೇಕಿದ್ದ ಸಭೆ ರದ್ದಾಗಿದೆ.
ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರಾದ ನವೀನ್ ರಾಜ್ ಸಿಂಗ್ ಈ ಕುರಿತು ಪಕ್ರಟಣೆಯನ್ನು ನೀಡಿದ್ದು, ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಅಕ್ಟೋಬರ್ 14 ರಂದು ಬೆಳಿಗ್ಗೆ 11:30 ಗಂಟೆಗೆ ನಡೆಯಬೇಕಿದ್ದ ಅವಿಶ್ವಾಸ ಸೂಚನೆಯ ಕುರಿತ ಸಭೆಯು ರದ್ದುಪಡಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

