ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇಂದು (ಅಕ್ಟೋಬರ್ 13 ರಂದು) 152 ಪುರುಷರು ಹಾಗೂ 56 ಮಹಿಳೆಯರು ಸೇರಿದಂತೆ 208 ಜನರಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಇಲಾಖೆಯ ಬುಲೆಟಿನ್ ವರದಿ ತಿಳಿಸಿದೆ.
ವರದಿಯನ್ವಯ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 49 ಪುರುಷರು ಮತ್ತು 14 ಮಹಿಳೆಯರು, ನೆಲಮಂಗಲ ತಾಲ್ಲೂಕಿನಲ್ಲಿ 37 ಪುರುಷರು ಮತ್ತು 18 ಮಹಿಳೆಯರು, ಹೊಸಕೋಟೆ ತಾಲ್ಲೂಕಿನಲ್ಲಿ 33 ಪುರುಷರು ಮತ್ತು 12 ಮಹಿಳೆಯರು, ದೇವನಹಳ್ಳಿ ತಾಲ್ಲೂಕಿನಲ್ಲಿ 27 ಪುರುಷರು ಮತ್ತು 10 ಮಹಿಳೆಯರು ಹಾಗೂ ಬೆಂಗಳೂರು ನಗರ ಜಿಲ್ಲೆ ಹಾಗೂ ಇತರೆ ಜಿಲ್ಲೆಗಳಿಗೆ ಸೇರಿದ 6 ಪುರುಷರು ಹಾಗೂ 2 ಮಹಿಳೆಯರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ ಎನ್ನಲಾಗಿದೆ.
ವರದಿಯಂತೆ ಇಂದು 241 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಐದು ಮಂದಿ ಸಾವನಪ್ಪಿದ್ದಾರೆ. ಆದರೆ ಕೋವಿಡ್ ನಿಂದ ಸಾವಿನ ಸಂಖ್ಯೆ ಹೆಚ್ಚಾದರೆ ಜಿಲ್ಲಾ ಆರೋಗ್ಯ ಇಲಾಖೆ ಸಾವಿನಪ್ಪಿದವರ ಮಾಹಿತಿ ಗೌಪ್ಯವಾಗಿಡುತ್ತಿರುವುದು ಹಲವು ಅನುಮಾನಗಳಿಗೆ ಕಾರಣವಾಗುತ್ತಿದೆ.

