ಬೆಂಗಳೂರು: ರಾಜ ರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣಗೆ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು. ಕಾಂಗ್ರೆಸ್ ನಿಂದ ಕುಸುಮಾ ಹನುಮಂತರಾಯಪ್ಪ, ಬಿಜೆಪಿಯಿಂದ ಮುನಿರತ್ನ ಮತ್ತು ಜೆಡಿಎಸ್ ನಿಂದ ಕೃಷ್ಣಮೂರ್ತಿ ನಾಮಪತ್ರ ಸಲ್ಲಿಸುವ ಮೂಲಕ ಆರ್.ಆರ್.ನಗರದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.
ನಾಮಪತ್ರ ಸಲ್ಲಿಕೆ: ಬಿಜೆಪಿ ಅಭ್ಯರ್ಥಿ ಮುನಿರತ್ನಗೆ ಅಪಾರ ಬೆಂಬಲಿಗರು ಮತ್ತು ಸಚಿವರ ಜೊತೆ ನಾಮಪತ್ರ ಸಲ್ಲಿಸಿದರು, ಮುನಿರತ್ನ ಅವರಿಗೆ ಡಿಸಿಎಂ ಅಶ್ವಥ್ ನಾರಾಯಣ್, ಸಚಿವರಾದ ಬೈರತಿ ಬಸವರಾಜ್, ಎಸ್.ಟಿ.ಸೋಮಶೇಖರ್, ಆರ್.ಅಶೋಕ್ ಮತ್ತು ಸುಧಾಕರ್ ಸೇರಿದಂತೆ ಹಲವರು ನಾಮಪತ್ರ ಸಲ್ಲಿಕೆ ವೇಳೆ ಉಪಸ್ಥಿತರಿದ್ದರು.
ಕಾಂಗ್ರೆಸ್ ಅಭ್ಯರ್ಥಿ ಕುಸುಮ ಹನುಮಂತರಾಯಪ್ಪ ನಾಮಪತ್ರ ಸಲ್ಲಿಸಿದರು. ಈ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಧ್ಯಕ್ಷ ಈಶ್ವರ್ ಖಂಡ್ರೆ, ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಜೊತೆಯಿದ್ದರು.
ಜೆಡಿಎಸ್ ಅಭ್ಯರ್ಥಿ ಕೃಷ್ಣಮೂರ್ತಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆ ವೇಳೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮತ್ತಿತರು ಉಪಸ್ಥಿತರಿದ್ದರು.

