ದೊಡ್ಡಬಳ್ಳಾಪುರ: ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ 2020-21ನೇ ಸಾಲಿನಲ್ಲಿ ವಿವಿಧ ಸಾಲ ಸೌಲಭ್ಯಗಳನ್ನು ಪಡೆಯಲು ಇಚ್ಛಿಸುವ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಆರ್ಯ ವೈಶ್ಯ ಸಮುದಾಯದ ಫಲಾನುಭವಿಗಳಿಂದ ಆನ್‍ಲೈನ್ (on-line) ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಅಗತ್ಯ ದಾಖಲೆಗಳೊಂದಿಗೆ ವೆಬ್‍ಸೈಟ್ kacdc.karnataka.gov.in ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವುದು. ಅರ್ಜಿ ಸಲ್ಲಿಸಲು 2020ರ ನವೆಂಬರ್ 15 ಕೊನೆಯ ದಿನವಾಗಿದೆ.
ನಿಗಮದ ಯೋಜನೆಗಳಿಗೆ ಅವಶ್ಯವಿರುವ ಸಾಮಾನ್ಯ ಅರ್ಹತೆಗಳು: ಆರ್ಯ ವೈಶ್ಯ ಸಮುದಾಯಕ್ಕೆ ಸೇರಿದವರಾಗಿರಬೇಕು, ನಮೂನೆ-ಜಿ ಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದಿರಬೇಕು, ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿರಬೇಕು ಹಾಗೂ ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು, ಅರ್ಜಿದಾರರು ಆಧಾರ್ ಕಾರ್ಡ್ ಹೊಂದಿರಬೇಕು.
ಸ್ವಯಂ ಉದ್ಯೋಗ ನೇರ ಸಾಲ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಅರ್ಹತೆಗಳು: ಈ ಯೋಜನೆಯಲ್ಲಿ ಸಣ್ಣ ವ್ಯಾಪಾರ, ಸ್ವಯಂ ಉದ್ಯೋಗ ಇತ್ಯಾದಿ ವ್ಯಾಪಾರ ಚಟುವಟಿಕೆಗಳಿಗೆ ಸಾಲ ನೀಡಲಾಗುವುದು, ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆರೂ. 3,00,000/-ಗಳ ಮಿತಿಯ ಒಳಗಿರಬೇಕು, ಅರ್ಜಿದಾರರು 18 ವರ್ಷ ಮೇಲ್ಪಟ್ಟು 45 ವರ್ಷದ ಒಳಗಿನವರಾಗಿರಬೇಕು.
ಅರಿವು ಶೈಕ್ಷಣಿಕ ಸಾಲ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಅರ್ಹತೆಗಳು: ಈ ಯೋಜನೆಯಲ್ಲಿ ಇಂಜಿನಿಯರಿಂಗ್, ವೈದ್ಯಕೀಯ, ದಂತ ವೈದ್ಯಕೀಯ ಇತ್ಯಾದಿ ವೃತ್ತಿಪರ ಪದವಿ ಹಾಗೂ ಸ್ನಾತಕೋತ್ತರ ಪದವಿಗಳಲ್ಲಿ C.E.T/NEET ಮೂಲಕ ಆಯ್ಕೆಯಾಗಿ ಮತ್ತು ವೃತ್ತಿಪರ ಪಿ.ಎಚ್.ಡಿ., ಕೋರ್ಸ್‍ನಲ್ಲಿ ವ್ಯಾಸಂಗ ಮಾಡುವವರಿಗೆ ಅರಿವು ಶೈಕ್ಷಣಿಕ ಸಾಲ ನೀಡಲಾಗುವುದು, ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ ರೂ.6,00,000/-ಗಳ ಮಿತಿಯೊಳಗಿರಬೇಕು, ಅರ್ಜಿದಾರರು 18 ವರ್ಷ ಮೇಲ್ಪಟ್ಟು 35 ವರ್ಷದ ಒಳಗಿನವರಾಗಿರಬೇಕು, ಪ್ರಾಂಶುಪಾಲರಿಂದ ದೃಢೀಕರಿಸಿದ ಪ್ರಸ್ತುತ ವರ್ಷದ ವ್ಯಾಸಂಗ ಪ್ರಮಾಣ ಪತ್ರ ಮತ್ತು ನಿಗದಿತ ಶುಲ್ಕ ನಮೂನೆ ಪತ್ರ ಹೊಂದಿರಬೇಕು.
ಸೂಚನೆ: ಮಹಿಳೆಯರಿಗೆ ಶೇ.33 ರಷ್ಟು ಮತ್ತು ವಿಶೇಷ ಚೇತನರಿಗೆ ಶೇ.5ರಷ್ಟು ಮೀಸಲಾತಿ ಇರುತ್ತದೆ ಹಾಗೂ ಅರ್ಜಿದಾರರ ಮೊಬೈಲ್ ಸಂಖ್ಯೆಯು ಆಧಾರ್‍ಗೆ ಜೋಡಣೆಯಾಗಿರಬೇಕು.
ಯೋಜನೆಗಳ ಮಾರ್ಗಸೂಚಿಗಳು ಹಾಗೂ ಸಲ್ಲಿಸಬೇಕಾದ ದಾಖಲೆಗಳ ವಿವರಗಳನ್ನು kacdc.karnataka.gov.in ಇಲ್ಲಿ ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮ, ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಕೊಠಡಿ ಸಂಖ್ಯೆ: 08, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ-562110, ದೂರವಾಣಿ ಸಂಖ್ಯೆ:-080-29605761, ನಿಗಮದ ಸಹಾಯವಾಣಿ: 9448451111 ಹಾಗೂ ಇ-ಮೇಲ್: support.kacdc@karnataka..gov.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯವಸ್ಥಾಪಕಿ ಎನ್. ಸುಜಾತ ಅವರು ಪ್ರಕಟಣೆ ತಿಳಿಸಿದ್ದಾರೆ.

