ಮೈಸೂರು: ಪ್ರಖ್ಯಾತ ಮೈಸೂರು ದಸರಾ ಹಿನ್ನೆಲೆಯಲ್ಲಿ ಬಿಗಿ ಕ್ರಮ ಕೈಗೊಳ್ಳಲು ಜಿಲ್ಲಾಡಳಿತ ಮುಂದಾಗಿದ್ದು ಮೈಸೂರಿನ ಪ್ರಮುಖ ಪ್ರವಾಸಿ ತಾಣಗಳ ಭೇಟಿಗೆ ಪ್ರವಾಸಿಗರ ನಿಷೇಧ ಹೇರಲಾಗಿದೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ.
ಪ್ರವಾಸಿ ತಾಣಗಳಾದ ಮೈಸೂರು ಅರಮನೆ, ಮೃಗಾಲಯಕ್ಕೆ 15 ದಿನಗಳ ಕಾಲ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ ಹೇರಲಾಗಿದ್ದು, ಅಕ್ಟೋಬರ್ 17ರಿಂದ ನವೆಂಬರ್ 1ರವರೆಗೆ ಸಂಪೂರ್ಣ ನಿಷೇಧ ಮಾಡಲಾಗಿದೆ. ಚಾಮುಂಡಿ ಬೆಟ್ಟಕ್ಕೆ ಅ.14ರ ಮಧ್ಯರಾತ್ರಿಯಿಂದಲೇ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ.
ಮೈಸೂರಿನ ಜೊತೆಗೆ ನಂಜನಗೂಡು ದೇವಾಲಯ,ಮಂಡ್ಯ ಪ್ರವಾಸಿ ತಾಣಗಳನ್ನು ಮುಚ್ಚಲಾಗಿದ್ದು, ಕರೊನಾ ನಿಯಂತ್ರಣಕ್ಕೆ ಈ ಕ್ರಮಗಳು ಅನಿವಾರ್ಯವಾಗಿವೆ. ಸಾರ್ವಜನಿಕರು ತಮ್ಮ ಮನೆಯಲ್ಲೆ ಇದ್ದು ಈ ಬಾರಿ ದಸರಾ ಆಚರಿಸಲು ಸಹಕಾರ ನೀಡಬೇಕೆಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮನವಿ ಮಾಡಿದ್ದಾರೆ.

