ದುಬೈ: IPL ಟೂರ್ನಿಯಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ದ ಸೋಲುಂಡಿದ್ದ ಆರ್ ಸಿಬಿ ಸೇಡು ತೀರಿಸಿಕೊಳ್ಳಲು ವೇದಿಕೆ ಸಿದ್ದವಾಗಿದೆ.
ಇಂದು ನಡೆಯಲಿರುವ ಪಂದ್ಯದಲ್ಲಿ 2ನೇ ಬಾರಿಗೆ ಆರ್‌ಸಿಬಿ ಹಾಗೂ ಕಿಂಗ್ಸ್ ಇಲೆವೆನ್ ಪಂಜಾಬ್ ಮುಖಾಮುಖಿಯಾಗುತ್ತಿವೆ. ಮೊದಲ ಪಂದ್ಯದಲ್ಲಿ ಪಂಜಾಬ್ ವಿರುದ್ಧ ಮುಗ್ಗರಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇದೀಗ ಸೇಡು ತೀರಿಸಿಕೊಳ್ಳಲು ಸಜ್ಜಾಗಿದ್ದರೆ. ಕಿಂಗ್ಸ್ ಇಲೆವೆನ್ ಪಂಜಾಬ್ ಪ್ಲೇ ಆಫ್ ಕನಸು ಜೀವಂತವಾಗಿಡಲು ಈ ಪಂದ್ಯ ಗೆಲ್ಲಲೇಬೇಕಿದೆ.
ಕಳೆದ ಪಂದ್ಯಗಳಲ್ಲಿ ಬ್ಯಾಟಿಂಗ್ ಹಾಗೂ ಬೌಲಿಂಗ್ ನಲ್ಲಿ ಉತ್ತಮ ಲಯದಲ್ಲಿರುವ ಆರ್ ಸಿಬಿ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದರೆ, ಆರು ಪಂದ್ಯಗಳನ್ನು ಸೋತ ಪಂಜಾಬ್ ಕೊನೆಯ ಸ್ಥಾನದಲ್ಲಿದೆ.
ಇಂದಿನ ಪಂದ್ಯದಲ್ಲಿ ಕ್ರಿಕೆಟ್ ದೈತ್ಯ ಕ್ರಿಸ್ ಗೆಲ್ ಆಡಲಿದ್ದು, ಕುತೂಹಲ ಮತ್ತಷ್ಟು ಹೆಚ್ಚಿಸಲಿರುವ ಜೊತೆಗೆ ಎಬಿ ಡೆವಿಲಿಯರ್ಸ್ ಐಪಿಎಲ್ ನ 150ನೇ ಇನ್ನಿಂಗ್ಸ್ ಆಡುತ್ತಿದ್ದಾರೆ.

