ಮೈಸೂರು: ವಿಶ್ವವಿಖ್ಯಾತ 410ನೇ ನಾಡಹಬ್ಬ ಮೈಸೂರು ದಸರಾಗೆ ಇಂದು ಚಾಮುಂಡಿಬೆಟ್ಟದಲ್ಲಿ ವಿದ್ಯುಕ್ತ ಚಾಲನೆ ನೀಡಲಾಯಿತು.
ಕರೊನಾ ವಾರಿಯರ್ ಜಯದೇವ ಆಸ್ಪತ್ರೆ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ 2020ರ ಮೈಸೂರು ದಸರಾಗೆ ಚಾಲನೆ ನೀಡಿದರು.
ನಾಡದೇವತೆ ಚಾಮುಂಡೇಶ್ವರಿ ತಾಯಿಗೆ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡುವ ಮೂಲಕ ಐತಿಹಾಸಿಕ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು.
ಕಾರ್ಯಕ್ರಮದಲ್ಲಿಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಉಸ್ತುವಾರಿ ಸಚಿವ ಎಸ್ಟಿ.ಸೋಮಶೇಖರ್ ಸಚಿವರಾದ ಹೆಚ್.ವಿಶ್ವನಾಥ್, ಬಿಸಿ.ಪಾಟೀಲ್, ಶಾಸಕರಾದ ಜಿಟಿ.ದಡೆವೇಗೌಡ, ಹರ್ಷವರ್ಧನ್, ಎಸ್ಎ.ರಾಮ್ದಾಸ್, ಸಂಸದ ಪ್ರತಾಪ್ ಸಿಂಹ, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮತ್ತಿತರರು ಭಾಗಿಯಾಗಿದ್ದರು.

