ದೊಡ್ಡಬಳ್ಳಾಪುರ: ನಗರಸಭೆಯಲ್ಲಿ ನೀರು ಸರಬರಾಜು ವಿಭಾಗದಲ್ಲಿ ಎಂಜಿನಿಯರ್ ಆಗಿ ಸೇವೆ ಸಲ್ಲಿಸುತ್ತಿದ್ದ ರಾಮೇಗೌಡ ವರ್ಗಾವಣೆಯಾಗಿದ್ದಾರೆ.
ಕಳೆದ 15 ವರ್ಷಗಳ ಕಾಲ ನಗರಸಭೆಯ ನೀರು ಸರಬರಾಜು ವಿಭಾಗದಲ್ಲಿ ಎಂಜಿನಿಯರ್ ಆಗಿ ಸೇವೆ ಸಲ್ಲಿಸುತ್ತಿದ್ದ ರಾಮೇಗೌಡ ಅವರನ್ನು ಅಭಿನಂದಿಸಿ ಬೀಳ್ಕೊಡಲಾಯಿತು.
ಈ ವೇಳೆ ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್, ಕಾರ್ಯಪಾಲಕ ಎಂಜಿನಿಯರ್ ಶೇಕ್‌ಫಿರೋಜ್ ಹಾಗೂ ಸಿಬ್ಬಂದಿ ಇದ್ದರು.

