ದೊಡ್ಡಬಳ್ಳಾಪುರ: ತಾಲೂಕು ಆಡಳಿತ ಬಿಡುಗಡೆ ಮಾಡಿರುವ ಬುಲೆಟಿನ್ ಮಾಹಿತಿಯಂತೆ ತಾಲೂಕಿನ 53 ಜನರಿಗೆ ಕರೊನಾ ಸೋಂಕು ದೃಢಪಟ್ಟಿದ್ದು, 78 ಮಂದಿ ಸೋಂಕಿನಿಂದ ಗುಣಮುಖರಾಗಿ ಮನೆಗೆ ಮರಳಿದ್ದಾರೆ.
ತಹಶೀಲ್ದಾರ್ ಟಿ.ಎಸ್.ಶಿವರಾಜ್ ಅವರು ಬಿಡುಗಡೆ ಮಾಡಿರುವ ತಾಲೂಕಿನ ಹೆಲ್ತ್ ಬುಲೆಟಿನ ಅನ್ವಯ, ಶನಿವಾರ ಸಂಜೆಯವರಗೆ, ದೊಡ್ಡಬಳ್ಳಾಪುರ ತಾಲೂಕಿನ 32 ಪುರುಷರು ಹಾಗೂ 21 ಮಹಿಳೆಯರು ಸೇರಿ 53 ಜನರಿಗೆ ಸೋಂಕು ದೃಢಪಟ್ಟಿದೆ.
ಪ್ರಸ್ತುತ ತಾಲೂಕಿನಲ್ಲಿ 3933 ಮಂದಿಗೆ ಕರೊನಾ ಸೋಂಕು ತಗುಲಿದ್ದು 3207 ಮಂದಿ ಗುಣಮುಖರಾಗಿದ್ದಾರೆ.
ಉಳಿದಂತೆ ಸೋಂಕಿಗೆ ಒಳಗಾದ 56 ಮಂದಿಯನ್ನು ದೊಡ್ಡಬಳ್ಳಾಪುರ ಕೊವಿಡ್ ಕೇರ್ ಸೆಂಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು,ಉಳಿದ 670 ಮಂದಿಯನ್ನು ದೇವನಹಳ್ಳಿ / ಹಜ್ ಭವನ/ ಖಾಸಗಿ ಆಸ್ಪತ್ರೆ / ಹೊಂ ಹೈಸೋಲೇಷನ್ / ಇಸ್ತೂರಿನ ವಸತಿ ನಿಲಯ / ಬಚ್ಚಹಳ್ಳಿ ವಸತಿ ನಿಲಯ / ಬೆಂಗಳೂರಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.

