ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇಂದು (ಅಕ್ಟೋಬರ್ 17 ರಂದು) 150 ಪುರುಷರು ಹಾಗೂ 70 ಮಹಿಳೆಯರು ಸೇರಿದಂತೆ 220 ಜನರಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾ ಅರೋಗ್ಯ ಇಲಾಖೆ ವರದಿ ತಿಳಿಸಿದೆ.
ವರದಿಯನ್ವಯ ನೆಲಮಂಗಲ ತಾಲ್ಲೂಕಿನಲ್ಲಿ 43 ಪುರುಷರು ಮತ್ತು 26 ಮಹಿಳೆಯರು, ಹೊಸಕೋಟೆ ತಾಲ್ಲೂಕಿನಲ್ಲಿ 23 ಪುರುಷರು ಮತ್ತು 9 ಮಹಿಳೆಯರು, ದೇವನಹಳ್ಳಿ ತಾಲ್ಲೂಕಿನಲ್ಲಿ 41 ಪುರುಷರು ಮತ್ತು 15 ಮಹಿಳೆಯರು, ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 41 ಪುರುಷರು ಮತ್ತು 19 ಮಹಿಳೆಯರು ಹಾಗೂ ಬೆಂಗಳೂರು ನಗರ ಜಿಲ್ಲೆ ಹಾಗೂ ಇತರೆ ಜಿಲ್ಲೆಗಳಿಗೆ ಸೇರಿದ 2 ಪುರುಷರು ಹಾಗೂ 1 ಮಹಿಳೆಗೆ ಕೋವಿಡ್ ಸೋಂಕು ದೃಢಪಟ್ಟಿದೆ ಎನ್ನಲಾಗಿದೆ.

