ದುಬೈ: ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಡೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಭರ್ಜರಿ ಗೆಲುವು ದಾಖಲಿಸಿದೆ.
ಮೊದಲು ಬ್ಯಾಟ್ ಮಾಡಿದ ಸಿಎಸ್ ಕೆ ನೀಡಿದ್ದ 180 ರನ್ಗಳ ಗುರಿಯನ್ನ ಬೆನ್ನಟ್ಟಿದ್ದ ಡೆಲ್ಲಿ ತಂಡ ಕೊನೆಯ ಓಒರ್ ನಲ್ಲಿ ಅಕ್ಸರ್ ಪಾಟೀಲ್ ಅದ್ಬುತ ಬ್ಯಾಟಿಂಗ್ ಪ್ರದರ್ಶನ ನೀಡಿದ ಕಾರಣ 19.5 ಓವರ್ನಲ್ಲಿ 5 ವಿಕೆಟ್ ಕಳೆದುಕೊಂಡು ಗೆಲವು ದಾಖಲಿಸಿತು.
ಡೆಲ್ಲಿ ಕ್ಯಾಪಿಟಲ್ಸ್ ಪರ ಶಿಖರ್ ಧವನ್ 101, ರಹಾನೆ 8, ಶ್ರೇಯಸ್ ಅಯ್ಯರ್ 23, ಮಾರ್ಕಸ್ 24, ಅಲೆಕ್ಸ್ 4, ಅಕ್ಷರ್ ಪಾಟೀಲ್ 21 ರನ್ಗಳಿಸಿದರು.

