ಜನತೆಗೆ ಪಾಠ ಮಾಡುವುದಲ್ಲ, ಮೋದಿಯವರು ಕರ್ತವ್ಯಪಾಲನೆ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕಿತ್ತು: ಸಿದ್ದರಾಮಯ್ಯ

ಬೆಂಗಳೂರು: ಬೆಂಗಳೂರು: ಜನತೆಗೆ ಕರ್ತವ್ಯಪಾಲನೆಯ ಪಾಠ ಮಾಡುವ ಮೊದಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತನ್ನ ಕರ್ತವ್ಯಪಾಲನೆ  ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿತ್ತು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಪ್ರಧಾನಿ ನರೇಂದ್ರ ಮೋದಿಯವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ದೇಶದ ಜನರನ್ನು ಉದ್ದೇಶಿಸಿ ಮಾತನಾಡಿದ ಮೋದಿ ಅವರ ಸಂದೇಶದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿರುವ ಅವರು, ಕರೊನಾ ಸೋಂಕಿನ ನಿಯಂತ್ರಣ ಮತ್ತು ಅದರಿಂದಾಗಿ ಕಷ್ಟ-ನಷ್ಟಕ್ಕೀಡಾಗಿರುವ ಜನತೆಗೆ ಪರಿಹಾರ ನೀಡಲು ಕೇಂದ್ರ ಸರ್ಕಾರ ಏನು ಮಾಡಿದೆ ಮತ್ತು ಮುಂದಿನ ದಿನಗಳಲ್ಲಿ ಏನು ಮಾಡಲಿದೆ ಎನ್ನುವುದನ್ನು ದೇಶದ ಜನತೆಗೆ ತಿಳಿಸಬೇಕಾಗಿತ್ತು.

ದೇಶದ ಜನತೆಗೆ ಬುದ್ದಿವಾದ ಹೇಳುವ ಮೂಲಕ ಪ್ರಧಾನಿಯವರು ತನ್ನ ವೈಫಲ್ಯವನ್ನು ಮುಚ್ಚಿಕೊಳ್ಳುವ ಹತಾಶ ಪ್ರಯತ್ನವನ್ನಷ್ಟೇ ಮಾಡಿದ್ದಾರೆ. ಕರೊನಾ ಸೋಂಕು ಉಲ್ಬಣಕ್ಕೆ ಜನರ ನಿರ್ಲಕ್ಷಕ್ಕಿಂತಲೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಹೊಣೆಗೇಡಿತನ ಕಾರಣ ಎನ್ನುವುದನ್ನು ಪ್ರಧಾನಿಯವರು ಒಪ್ಪಿಕೊಂಡು ದೇಶದ ಜನತೆಯಲ್ಲಿ ಕ್ಷಮೆಯಾಚಿಸಬೇಕಾಗಿತ್ತು.

ಜಾಗಟೆ ಬಾರಿಸಿ, ದೀಪ ಹಚ್ಚಿ ಕರೊನಾ ಎದುರಿಸಲು ಕರೆನೀಡಿದ ಪ್ರಧಾನಮಂತ್ರಿಯವರ ಮೂಢತನದ ಭಾಷಣಗಳೇ ಕರೊನಾ ಸೋಂಕಿನ ಬಗ್ಗೆ ಜನರ ನಿರ್ಲಕ್ಷಕ್ಕೆ ಮುಖ್ಯ ಕಾರಣ. ರೋಗವನ್ನು ವೈಜ್ಞಾನಿಕವಾಗಿ ಎದುರಿಸಲು ಕರೆ ನೀಡಬೇಕಾದ ಪ್ರಧಾನಿ, ಟಿವಿಜ್ಯೋತಿಷಿಗಳ ರೀತಿಯಲ್ಲಿ ಪ್ರವಚನ ನೀಡಿದರೆ ಜನ ಮೂಢಮತಿಗಳಾಗದೆ ಇನ್ನೇನು ಆಗಲು ಸಾಧ್ಯ?

ದೇಶದ ಜನತೆಗೆ ಕರ್ತವ್ಯಪಾಲನೆಯ ಪ್ರವಚನ ನೀಡಿದ ಪ್ರಧಾನಿಗಳು ಅದರ ಜೊತಗೆ ಕರೊನಾ ಪರಿಹಾರದ ಇಪ್ಪತ್ತು ಲಕ್ಷ ಕೋಟಿ ರೂಪಾಯಿಗಳ ಪ್ಯಾಕೇಜ್ ಏನಾಯಿತು? ಯಾರಿಗೆ ಎಷ್ಟು ತಲುಪಿದೆ? ಪಿ.ಎಂ. ಕೇರ್ಸ್ ನಿಧಿಗೆ ಬಂದ ದುಡ್ಡೆಷ್ಟು?  ಕೊರೊನಾ ನಿಯಂತ್ರಣ ಮತ್ತು ಪರಿಹಾರಕ್ಕಾಗಿ ಆ ನಿಧಿಯಿಂದ ಬಳಕೆಯಾದ ದುಡ್ಡಿನ ಮೊತ್ತವೆಷ್ಟು? ಎಂಬುದನ್ನೂ ತಿಳಿಸಬೇಕಿತ್ತು.

ಕರೊನಾ ಸೋಂಕು ಪ್ರಾರಂಭಗೊಂಡಾಗ ಪ್ರಧಾನಿಯವರು  ‘ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯನ್ನು  ಜೂನ್ ನಲ್ಲಿ ಪ್ರಕಟಿಸಿದ್ದರು.ಅದು ಎಷ್ಟು ಜನರಿಗೆ ತಲುಪಿದೆ? ರಾಜ್ಯದ ಬಿಜೆಪಿ ಸರ್ಕಾರ ಅನ್ನಭಾಗ್ಯದಲ್ಲಿ ನೀಡಲಾಗುತ್ತಿದ್ದ ಅಕ್ಕಿಯನ್ನು ಏಳರಿಂದ ಐದು ಕಿಲೋಗೆ ಇಳಿಸಿದೆ, ಇಂದಿರಾ ಕ್ಯಾಂಟೀನ್ ಗಳನ್ನು ಮುಚ್ಚಲು ಹೊರಟಿದೆ. 

ಮಿತವ್ಯಯ ಪಾಲನೆ ಮಾಡಿ ಲಭ್ಯ ಇರುವ ಸಂಪನ್ಮೂಲವನ್ನು ಕರೊನಾ ನಿಯಂತ್ರಣಕ್ಕಾಗಿ ಬಳಸಬೇಕಾದ ರಾಜ್ಯ ಬಿಜೆಪಿ ಸರ್ಕಾರ ಕರೊನಾ ಕಾಯಿಲೆಯ ಪರಿಹಾರದ ನೆಪದಲ್ಲಿ ಜನರ ತೆರಿಗೆ ಹಣವನ್ನು ಲೂಟಿ ಮಾಡುತ್ತಿದೆ. ಇದೇನಾದರೂ ಪ್ರಧಾನಿಯವರ ಗಮನಕ್ಕೆ ಬಂದಿದೆಯೇ? ಎಂದು ಪ್ರಶ್ನಿಸಿದ್ದಾರೆ.

ರಾಜಕೀಯ

ಬೆಲೆ ಏರಿಕೆಗೆ ಹೊಣೆ ಯಾರು?: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಲೆ ಏರಿಕೆಗೆ ಹೊಣೆ ಯಾರು?: ಡಿಸಿಎಂ ಡಿ.ಕೆ. ಶಿವಕುಮಾರ್

"ಕೇಂದ್ರ ಸರ್ಕಾರ ಜನಸಾಮಾನ್ಯರ ನೋವನ್ನು ಅರ್ಥ ಮಾಡಿಕೊಳ್ಳಬೇಕಿತ್ತು. ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ. ಆದಾಯ ಪಾತಳಕ್ಕೆ ಕುಸಿದಿದೆ. ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ಕೇಂದ್ರ

[ccc_my_favorite_select_button post_id="121597"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]