ಬೆಂಗಳೂರು: ರಾಜ್ಯ ಎಲ್ಲಾ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕ ಶಿಕ್ಷಣ ನೀಡುವಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಆದೇಶ ನೀಡಿದ್ದಾರೆ.
ಈ ಕುರಿತು ಆದೇಶ ನೀಡಿರುವ ಅವರು, ತಜ್ಞರು ನೀಡಿರುವ ವರದಿ ಹಾಗೂ ಸಲಹೆಗಳ ಆಧಾರದಲ್ಲಿ ಆನ್ ಲೈನ್ ಶಿಕ್ಷಣ ಮಾರ್ಗದರ್ಶಿಯನ್ನು ಸಿದ್ಧಪಡಿಸಿದ್ದು, ಇದರ ಆಧಾರದ ಮೇರೆಗೆ ರಾಜ್ಯದ ಎಲ್ಲ ಶಾಲೆಗಳು ಆನ್ ಲೈನ್ ಶಿಕ್ಷಣ ನಡೆಸುವಂತೆ ಸುತ್ತೋಲೆ ಹೊರಡಿಸಲು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.
ಈ ಆದೇಶದಿಂದ ವಿದ್ಯಾಗಮ ನಿಲ್ಲಿಸಿದ ನಂತರ ಶಿಕ್ಷಣದಿಂದ ವಂಚಿತರಾಗುತ್ತಿದ್ದ, ರಾಜ್ಯದ ಸರ್ಕಾರಿ ಶಾಲೆಯ ಮಕ್ಕಳಿಗೂ ಆನ್ಲೈನ್ ಶಿಕ್ಷಣ ಭಾಗ್ಯ ದೊರೆಯಲಿದೆ.

