ದೊಡ್ಡಬಳ್ಳಾಪುರ: ಬೆಂಬಲ ಬೆಲೆ ಯೋಜನೆಯಡಿ ಜೋಳ, ರಾಗಿ ಖರೀದಿ ಕೇಂದ್ರ ತೆರೆಯುವಂತೆ ಆಗ್ರಹಿಸಿ ತಾಲ್ಲೂಕು ಕಚೇರಿ ಮುಂದೆ ರಾಜ್ಯ ರೈತ ಸಂಘದ ಕಾರ್ಯಕರ್ತರು ನಡೆಸುತ್ತಿರುವ ಅಹೋರಾತ್ರಿ ನಿಂತರ ಧರಣಿ ಮೂರನೆ ದಿನವು ಮುಂದುವರೆದಿದೆ.
ಬುಧವಾರ ಸಂಜೆ ಧರಣಿ ನಿರತರೊಂದಿಗೆ ಉಪವಿಭಾಗಾಧಿಕಾರಿ ಅರುಳ್‌ಕುಮಾರ್, ತಹಶೀಲ್ದಾರ್ ಟಿ.ಎಸ್.ಶಿವರಾಜ್ ಮಾತುಕತೆ ನಡೆಸಿ ರೈತರ ಬೇಡಿಕೆಗಳ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗುವುದು. ಧರಣಿಯನ್ನು ಹಿಂದಕ್ಕೆ ಪಡೆಯುವಂತೆ ಮಾಡಿದ ಮನವಿಗೆ ಧರಣಿ ನಿರತ ರೈತರು ಒಪ್ಪದೆ ಧರಣಿಯನ್ನು ಮುಂದುವರೆಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ರೈತ ಸಂಘದ ವಸಂತ, ಬೆಂಬಲ ಬೆಲೆ ಯೋಜನೆಯಡಿ ಖರೀದಿ ಕೇಂದ್ರ ತೆರೆಯುವ ಬಗ್ಗೆ ಜಿಲ್ಲಾಧಿಕಾರಿಗಳು ಖಚಿತ ಭರವಸೆ ನೀಡುವವರೆಗೂ ಧರಣಿಯನ್ನು ಹಿಂದಕ್ಕೆ ಪಡೆಯುವುದಿಲ್ಲ ಎಂದರು.

