ದಂಡ ವಸೂಲಿಯ ನೆಪದಲ್ಲಿ ಚಾಲಕರ ಸುಲಿಗೆ ರಾಕ್ಷಸೀ ಪ್ರವೃತ್ತಿ: ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಕೋವಿಡ್-19 ವೇಳೆ ಸಂಕಟಕ್ಕೆ ಒಳಗಾಗಿದ್ದ ಚಾಲಕರಿಗೆ ₹5000 ಕೊಡುವ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ ಸರ್ಕಾರ ಚಾಲಕರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿತ್ತು, ಆದರೆ ಅನುಷ್ಠಾನಕ್ಕೆ ತರಲಿಲ್ಲ.

ಚಾಲಕರಿಗೆ ಪರಿಹಾರ ಕೊಡದೆ ಮಾತು ತಪ್ಪಿದ ಸರ್ಕಾರ ಈಗ ದಂಡ ವಸೂಲಿಯ ನೆಪದಲ್ಲಿ ಚಾಲಕರ ಜೇಬಿಗೆ ಕತ್ತರಿ ಹಾಕುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಟೋರಿಕ್ಷಾ ಚಾಲಕರು ಹಾಗೂ ಕ್ಯಾಬ್ ಡ್ರೈವರ್ ಗಳಿಂದ ದಂಡ ವಸೂಲಿ ಕುರಿತಂತೆ ಸರ್ಕಾರದ ವಿರುದ್ದ ಸರಣಿ ಟ್ವಿಟ್ ಮೂಲಕ ಹರಿಹಾಯ್ದಿರುವ ಅವರು, ಕಳೆದ ಏಳು ತಿಂಗಳಿಂದ ಸಂಪಾದನೆ ಇಲ್ಲದೆ ಹತಾಶರಾಗಿರುವ ರಿಕ್ಷಾ, ಕ್ಯಾಬ್ ಚಾಲಕರಿಗೆ ದಂಡದ ರೂಪದಲ್ಲಿ ಹಗಲು ದರೋಡೆ ಮಾಡುತ್ತಿರುವ ಸರ್ಕಾರ, ಕಠಿಣ ಕ್ರಮದಿಂದ ಬಡ ಚಾಲಕರ ಮೂರುಕಾಸಿನ ಮೇಲೂ  ಕೆಂಗಣ್ಣು ಬೀರಿರುವುದು ರಾಕ್ಷಸೀ ಪ್ರವೃತ್ತಿಯಾಗಿದೆ.

ಬಡ ಚಾಲಕರ ಹಿಡಿಶಾಪ ಸರ್ಕಾರಕ್ಕೆ ತಗುಲುವ ಮುನ್ನವೇ ದರ್ಪ ದೌರ್ಜನ್ಯದ ಗದಾಪ್ರಹಾರ ತಕ್ಷಣವೇ ನಿಲ್ಲಿಸಬೇಕು. ಬೆಂದ ಮನೆಯಲ್ಲಿ ಗಳ ಅರಿಯುವ ಕೆಲಸ ಜವಾಬ್ದಾರಿಯುತ ಸರ್ಕಾರಕ್ಕೆ ಶೋಭೆಯಲ್ಲ. ಇಂತಹ ದುಂಡಾವರ್ತಿ ಪ್ರವೃತ್ತಿಯನ್ನು ಸರ್ಕಾರ ಕೂಡಲೇ ಕೈಬಿಡಬೇಕು.

ಸೋಂಕು ಮತ್ತು ಲಾಕ್ಡೌನ್ ಪರಿಸ್ಥಿತಿಯಿಂದ ಸಂಪಾದನೆ ಇಲ್ಲದೆ ಕಂಗೆಟ್ಟಿರುವ ಆಟೋರಿಕ್ಷಾ ಚಾಲಕರು ಹಾಗೂ ಕ್ಯಾಬ್ ಡ್ರೈವರ್ ಗಳ ಮೇಲೆ ಮುಲಾಜಿಲ್ಲದೆ ದಂಡ ವಸೂಲಿ ಮಾಡುತ್ತಿರುವ ಸಂಚಾರಿ ಪೊಲೀಸರು ಮತ್ತು ಸಾರಿಗೆ ಅಧಿಕಾರಿಗಳ ಕಾರ್ಯಾಚರಣೆ ಬಡ ಚಾಲಕರಿಗೆ ಬರಸಿಡಿಲು ಬಡಿದಂತಾಗಿದೆ.

ಮಾಸ್ಕ್ ಧರಿಸಿದವರಿಗೆ ಕಾನೂನು-ಸುವ್ಯವಸ್ಥೆ ಹಾಗೂ ಸಂಚಾರಿ ಪೊಲೀಸರು ದಂಡ ವಸೂಲಿ ದಂಧೆಗೆ ಇಳಿದಿರುವುದು ನಾಗರಿಕರಿಗೆ ನುಂಗಲಾರದ ಬಿಸಿ ತುಪ್ಪವಾಗಿದೆ. ಜಾಗೃತಿ ಮೂಡಿಸಬೇಕಾದ ಪೊಲೀಸರು ವಾಹನ ತಪಾಸಣೆ ಹೆಸರಲ್ಲಿ ಬಡ ಚಾಲಕರನ್ನು ಸುಲಿಯುತ್ತಿರುವ ನಿರ್ದಾಕ್ಷಿಣ್ಯ ವರ್ತನೆ ಸರಿಯಲ್ಲ.

ಎಲ್ಲ ದಾಖಲಾತಿಗಳನ್ನು ತೋರಿಸಿದರೂ ಒಂದಲ್ಲಾ ಒಂದು ಕಾನೂನು ತಗಾದೆ ತೆಗೆದು ಚಾಲಕರನ್ನು ಹಗಲು ದರೋಡೆ ಮಾಡುತ್ತಿರುವುದನ್ನು ತಕ್ಷಣ ನಿಲ್ಲಿಸಬೇಕು. ಪೊಲೀಸರಿಗೆ ದಂಡ ವಸೂಲಿಗೆ ಟಾರ್ಗೆಟ್ ನೀಡಿರುವುದು ಈಗ ಗುಟ್ಟಾಗಿ ಉಳಿದಿಲ್ಲ.

ಈಗಷ್ಟೇ ರಸ್ತೆಗೆ ಇಳಿದಿರುವ ಆಟೋರಿಕ್ಷಾ ಮತ್ತು ಕ್ಯಾಬ್ ಚಾಲಕರು ಪ್ರಯಾಣಿಕರ ಕೊರತೆಯಿಂದ ಒಂದೊತ್ತಿನ ಊಟಕ್ಕೂ ಪರದಾಡುತ್ತಿದ್ದಾರೆ. ಇಂಥ ಸಂಕಷ್ಟ ಪರಿಸ್ಥಿತಿಯಲ್ಲಿ ಪೊಲೀಸರು ದಂಡ ವಸೂಲಿಯನ್ನೇ ಮೂಲಮಂತ್ರವಾಗಿರಿಸಿ ಕೊಂಡಿರುವುದು ನಾಗರಿಕ ಸಮಾಜ ತಲೆ ತಗ್ಗಿಸುವಂತಹದ್ದು.

ಸರ್ಕಾರ ಚಾಲಕರನ್ನು ಸುಲಿಯುವ ನಿರ್ದಾಕ್ಷಿಣ್ಯ ಕ್ರಮಕ್ಕೆ ತಕ್ಷಣ ತಡೆಯೊಡ್ಡಿ ಔದಾರ್ಯ ತೋರುವ ಮೂಲಕ ಚಾಲಕರಿಗೆ ತುಸು ನೆಮ್ಮದಿ ನೀಡಬೇಕಾದ ತುರ್ತು ಅಗತ್ಯವಿದೆ.

ಎಗ್ಗಿಲ್ಲದೆ ದಂಡ ವಸೂಲಿ ಮಾಡುವ ಪೋಲಿಸರ ಕ್ರಮದಿಂದ ಚಾಲಕರು ನಲುಗಿ ಹೋಗಿದ್ದಾರೆ. ಇಂತಹ ಕಡು ಕಷ್ಟಕಾಲದಲ್ಲಿ ಸರ್ಕಾರ ಮಾನವೀಯತೆಯನ್ನು ಪ್ರದರ್ಶಿಸಬೇಕು ಎಂದು ಆಗ್ರಹಿಸಿದ್ದಾರೆ.

ರಾಜಕೀಯ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿ ವಿಸ್ತರಣೆ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ

ಕರ್ನಾಟಕ ಪಂಚಾಯತ್‌ರಾಜ್ ಸೀಮಾ ನಿರ್ಣಯ ಆಯೋಗ ಏಪ್ರಿಲ್ 18ರಂದು ಹೊರಡಿಸಿರುವ ರಾಜ್ಯದ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯ (Grama Panchayat member) ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿಯನ್ನು ಮೇ 2ರ ಸಂಜೆ

[ccc_my_favorite_select_button post_id="121469"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ ಭೀತಿ.!| Video ನೋಡಿ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ

ಐಪಿಎಲ್‌ನ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ನಾಯಕ ರಿಯಾನ್ ಪರಾಗ್ (Riyan Parag) ಪಂದ್ಯದ ವೇಳೆ ನಿಷೇಧಿತ 'ಇ-ಸಿಗರೇಟ್' (Vape) ಸೇವಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

[ccc_my_favorite_select_button post_id="121495"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]