ದೊಡ್ಡಬಳ್ಳಾಪುರ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ ವತಿಯಿಂದ 2020-21ನೇ ಸಾಲಿನ ವಿಶೇಷ ಘಟಕ ಯೋಜನೆಯಡಿ ಜಿಲ್ಲಾ ಕಚೇರಿಯಲ್ಲಿ ಕ್ಷೇತ್ರ ಪ್ರಚಾರ ಕಾರ್ಯಕ್ರಮ ಹಾಗೂ ಮಾಧ್ಯಮ ಚಟುವಟಿಕೆಗಳ ನಿರ್ವಹಣೆ ಕುರಿತು ತರಬೇತಿ ನೀಡಲು ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
10 ತಿಂಗಳ ತರಬೇತಿ ಇದಾಗಿದ್ದು, ಆಯ್ಕೆಯಾದ ಇಬ್ಬರು ಅಭ್ಯರ್ಥಿಗಳಿಗೆ ಮಾಸಿಕವಾಗಿ 15,000/- ರೂ.ಗಳ ಶಿಷ್ಯವೇತನ ನೀಡಲಾಗುವುದು. ತರಬೇತಿ ಪಡೆಯಲಿಚ್ಛಿಸುವ ಅಭ್ಯರ್ಥಿಗಳು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಪದವಿ/ಸ್ನಾತಕೋತ್ತರ ಪದವಿ ಪಡೆದವರಾಗಿರಬೇಕು. ಕನ್ನಡ, ಇಂಗ್ಲೀಷ್ ಭಾಷೆಯಲ್ಲಿ ಓದು ಮತ್ತು ಬರಹ ಬಲ್ಲವರಾಗಿದ್ದು, ಕಂಪ್ಯೂಟರ್ ಜ್ಞಾನ ಹೊಂದಿದವರಾಗಿರಬೇಕು. ಅಭ್ಯರ್ಥಿಗಳು, ಬೆಂಗಳೂರು ಗ್ರಾಮಾಂತರ ಜಿಲ್ಲೆಯವರಾಗಿರಬೇಕು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ನೆರೆಯ ಜಿಲ್ಲೆಯ ಅಭ್ಯರ್ಥಿಗಳನ್ನು ಪರಿಗಣಿಸಲಾಗುವುದು.
ಅರ್ಹರು ತಮ್ಮ ಸ್ವ-ವಿವರ, 3-ಭಾವಚಿತ್ರ ಹಾಗೂ 3 ಪ್ರತಿಗಳೊಂದಿಗೆ, ನವೆಂಬರ್ 13 ರೊಳಗಾಗಿ ಉಪ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಎರಡನೇ ಮಹಡಿ, ನಂ.17, ಭಗವಾನ್ ಮಹಾವೀರ ರಸ್ತೆ, (ಇನ್‍ಫೆಂಟ್ರಿ ರಸ್ತೆ) ಬೆಂಗಳೂರು-560001 ಇಲ್ಲಿಗೆ ಸಲ್ಲಿಸುವುದು ಹಾಗೂ ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 080-22028063 ಅನ್ನು ಸಂಪರ್ಕಿಸಬಹುದಾಗಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

