ದೊಡ್ಡಬಳ್ಳಾಪುರ: ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ(ಸಿಡಾಕ್) ಇವುಗಳ ಆಶ್ರಯದಲ್ಲಿ, ಸ್ವಂತ ಉದ್ಯೋಗವನ್ನು ಸ್ಥಾಪಿಸಲು ಇಚ್ಛಿಸುವವರಿಗಾಗಿ 30 ದಿನಗಳ ಬೇಕರಿ ಉತ್ಪನ್ನಗಳ ತಯಾರಿಕೆ ಕುರಿತು ಕೌಶಲ್ಯಾಧಾರಿತ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ನವೆಂಬರ್- 2020ರ ತಿಂಗಳ ಮೊದಲ ವಾರದಲ್ಲಿ ಹಮ್ಮಿಕೊಳ್ಳಲಾಗಿದ್ದು, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ವ್ಯಾಪ್ತಿಯ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ತರಬೇತಿಯಲ್ಲಿ ಬೇಕರಿ ಉತ್ಪನ್ನಗಳ ಕುರಿತು ಕೌಶಲ್ಯ ತರಬೇತಿ ಹಾಗೂ ಸ್ವಂತ ಉದ್ಯಮವನ್ನು ಸ್ಥಾಪಿಸಲು ಅನುಸರಿಸಬೇಕಾದ ಕ್ರಮಗಳು, ಸರ್ಕಾರದ ಸ್ವಂತ ಉದ್ಯೋಗ ಯೋಜನೆಗಳು, ಬ್ಯಾಂಕಿನ ವ್ಯವಹಾರ, ಮಾರುಕಟ್ಟೆ, ಯೋಜನಾವರದಿ ಹಾಗೂ ಉದ್ಯಮನಿರ್ವಹಣೆ ಕುರಿತು ತರಬೇತಿ ನೀಡಲಾಗುವುದು. ಅಭ್ಯರ್ಥಿಗಳು 18 ರಿಂದ 40 ವರ್ಗ ವಯಸ್ಸಿನವರಾಗಿರಬೇಕು, ಎಸ್.ಎಸ್.ಎಲ್.ಸಿ. ಪಾಸಾಗಿರಬೇಕು, ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗ ಹಾಗೂ ಹಿಂದುಳಿದ ವರ್ಗದವರಿಗೆ ಆದ್ಯತೆ ನೀಡಲಾಗುವುದು. ಅರ್ಜಿಗಳನ್ನು ಜಂಟಿ ನಿರ್ದೇಶಕರ ಕಚೇರಿ, ‘ಸಿಡಾಕ್’, ಕೆಜಿಟಿಟಿಐ ಕಟ್ಟಡ, ಕೌಶಲ್ಯ ಭವನ ಆವರಣ, ಡೈರಿ ವೃತ್ತ, ಬನ್ನೇರುಘಟ್ಟ ರಸ್ತೆ, ಬೆಂಗಳೂರು ಅಥವಾ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳ ಕಚೇರಿ, ಕೊಠಡಿ ಸಂಖ್ಯೆ: 132, ಜಿಲ್ಲಾಡಳಿತ ಭವನ, ಚಪ್ಪರದಕಲ್ಲು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ಪಡೆಯಬಹುದಾಗಿದೆ. ಅರ್ಜಿ ಸಲ್ಲಿಸಲು 2020ರ ನವೆಂಬರ್ 04 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 080-29568484 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

